AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi: ಕಾಂಗ್ರೆಸ್​​ನವರಿಗೆ ಹನುಮಂತನ ಕಂಡರೂ ಆಗಲ್ಲ; ಬಜರಂಗದಳ ನಿಷೇಧ ಪ್ರಸ್ತಾವಕ್ಕೆ ಮೋದಿ ಟಾಂಗ್

ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಪರೋಕ್ಷವಾಗಿ ಬಜರಂಗದಳ ನಿಷೇಧ ಪ್ರಸ್ತಾಪಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಟಾಂಗ್ ನೀಡಿದ್ದಾರೆ.

PM Modi: ಕಾಂಗ್ರೆಸ್​​ನವರಿಗೆ ಹನುಮಂತನ ಕಂಡರೂ ಆಗಲ್ಲ; ಬಜರಂಗದಳ ನಿಷೇಧ ಪ್ರಸ್ತಾವಕ್ಕೆ ಮೋದಿ ಟಾಂಗ್
ಪ್ರಧಾನಿ ನರೇಂದ್ರ ಮೋದಿ
ಗಣಪತಿ ಶರ್ಮಾ
|

Updated on: May 02, 2023 | 3:29 PM

Share

ವಿಜಯನಗರ: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಪರೋಕ್ಷವಾಗಿ ಬಜರಂಗದಳ ನಿಷೇಧ ಪ್ರಸ್ತಾಪಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಟಾಂಗ್ ನೀಡಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಿಜೆಪಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಬಜರಂಗದಳ ನಿಷೇಧಿಸುವುದಾಗಿ ಕಾಂಗ್ರೆಸ್ ಪಕ್ಷ ಘೋಷಿಸಿದೆ. ಕಾಂಗ್ರೆಸ್​​ನ ಈ​ ಪ್ರಣಾಳಿಕೆಯಲ್ಲಿ ಹೊಸ ತಂತ್ರ ಅಡಗಿದೆ. ಕಾಂಗ್ರೆಸ್​​ನವರಿಗೆ ಹನುಮಂತನ ಕಂಡರೂ ಆಗಿಬರುವುದಿಲ್ಲ ಎಂದು ಕಾಂಗ್ರೆಸ್​ ಪ್ರಣಾಳಿಕೆಗೆ ತಿರುಗೇಟು ನೀಡಿದ್ದಾರೆ. ಸಮಾಜದಲ್ಲಿ ದ್ವೇಷ ಬಿತ್ತಿದರೆ ಬಜರಂಗದಳ, ಬಹುಸಂಖ್ಯಾತ, ಅಲ್ಪಸಂಖ್ಯಾತ ಸಂಘಟನೆಗಳ ನಿಷೇಧ ಮಾಡುವುದಾಗಿ ಕಾಂಗ್ರೆಸ್​ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಇದರ ಬೆನ್ನಲ್ಲೇ ಮೋದಿ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್​ನಿಂದ ಬರೀ ಸುಳ್ಳಿನ ಆಶ್ವಾಸನೆ; ಮೋದಿ

ಭಾರತ ಅಭಿವೃದ್ದಿಯಾಗಬೇಕಾದರೆ ನಿಮ್ಮ ಒಂದು ಮತ ಬಹಳ ಅಮೂಲ್ಯವಾಗಿದೆ. ನೀವು ಈಗ ನೋಡುತ್ತಿದ್ದೀರಿ. ಕಾಂಗ್ರೆಸ್​ ರಾಜ್ಯದಲ್ಲಿ ಗ್ಯಾರಂಟಿಗಳ ಕಂತೆ ​ ಹಿಡಿದುಕೊಂಡು ಕುಳಿತಿದೆ. ಯಾವ ಪಕ್ಷಕ್ಕೆ ತನ್ನ ಅಸ್ತಿತ್ವದ ಬಗ್ಗೆ ಗೊತ್ತಿಲ್ಲವೋ ಆ ಪಕ್ಷ ಸುಳ್ಳಿನ ಗ್ಯಾರಂಟಿಗಳನ್ನು ಮಾತ್ರ ನೀಡುತ್ತದೆ. ಕಾಂಗ್ರೆಸ್​ ಬಡತನ ಮುಕ್ತ ಆಶ್ವಾಸನೆ ನೀಡಿತು ಆದರೆ ಬಡತನ ಮುಕ್ತವಾಗಿಲ್ಲ. ಆದರೆ ಕಾಂಗ್ರೆಸ್​ ನಾಯಕರು ಮಾತ್ರ ಶ್ರೀಮಂತರಾಗುತ್ತಿದ್ದಾರೆ. ಕಾಂಗ್ರೆಸ್​ ಬಡಜನರ, ರೈತರ ಬಗ್ಗೆ ಬಹಳ ಮಾತನಾಡುತ್ತದೆ ಆದರೆ ಅದು ಹೇಳುವುದೊಂದು ಮಾಡುವುದೊಂದು ಎಂದು ಮೋದಿ ಗುಡುಗಿದರು.

ಕೋವಿಡ್ ಸಾಂಕ್ರಾಮಿಕವನ್ನು ಭಾರತ ಸಮರ್ಥವಾಗಿ ಎದುರಿಸಿತು. ಇದು ಜಗತ್ತೇ ಹುಬ್ಬೇರಿಸುವಂತೆ ಮಾಡಿತು. ಸದ್ಯ ಭಾರತ ಆರ್ಥಿಕ ಕ್ಷೇತ್ರದಲ್ಲಿ 5ನೇ ಸ್ಥಾನದಲ್ಲಿದೆ. ಮುಂದಿನ ಕೆಲವೇ ವರ್ಷಗಳಲ್ಲಿ 3ನೇ ಸ್ಥಾನಕ್ಕೆ ಬರುತ್ತದೆ. ಇದನ್ನು ನಾವು ಸಾಧಿಸಬೇಕು ಎಂದರೆ ನಮಗೆ ಬಹಳ ದೊಡ್ಡ ಸಹಾಯ ಮಾಡುವುದು ಕರ್ನಾಟಕ. ನಾವು ಕರ್ನಾಟಕವನ್ನು ದೇಶದಲ್ಲೇ ನಂಬರ್​ ಒನ್​ ರಾಜ್ಯ ಮಾಡುತ್ತೇವೆ. ಎಲ್ಲ ಕ್ಷೇತ್ರಗಳಿಗೂ ಉತ್ತೇಜನ ನೀಡುತ್ತೇವೆ. ಆದರೆ ನಾವು ಯಾವುದೇ ಕಾರಣಕ್ಕೂ ಕಾಂಗ್ರೆಸ್​ ಮತ್ತು ಜೆಡಿಎಸ್​​ ಅವರ ಮೋಸಕ್ಕೆ ಒಳಗಾಗಬಾರದು ಎಂದು ಮೋದಿ ಹೇಳಿದರು.

ಇದನ್ನೂ ಓದಿ: ದ್ವೇಷ ಬಿತ್ತಿದರೆ ಬಜರಂಗದಳ, ಬಹುಸಂಖ್ಯಾತ, ಅಲ್ಪಸಂಖ್ಯಾತ ಸಂಘಟನೆಗಳ ನಿಷೇಧ: ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಭರವಸೆ

ರಾಜ್ಯದಲ್ಲಿನ ಬಿಜೆಪಿ ಸರ್ಕಾರದಿಂದ ರೈತರ ಖಾತೆಗೆ 4 ಸಾವಿರ ರೂ. ಹಾಕಲಾಗುತ್ತಿದೆ. ಕೇಂದ್ರ ಸರ್ಕಾರದಿಂದ 6 ಸಾವಿರ ರೂ. ನೇರವಾಗಿ ರೈತರ ಖಾತೆಗೆ ಜಮೆ ಆಗುತ್ತಿದೆ. ಡಬಲ್​ ಇಂಜಿನ್​ ಸರ್ಕಾರದಿಂದ ರೈತರಿಗೆ ಡಬಲ್​ ಲಾಭವಾಗುತ್ತಿದೆ ಎಂದು ಮೋದಿ ಹೇಳಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ