ಬೆಂಗಳೂರು ಮಹಾನಗರದ ಜನತೆಯ ಕಾಣುವುದನ್ನು ಎದುರುನೋಡುತ್ತಿದ್ದೇನೆ; ಮೋದಿ
ಬಳ್ಳಾರಿ ಹಾಗೂ ತುಮಕೂರು ಗ್ರಾಮಾಂತರಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ರಾಜಭವನದಲ್ಲಿ ತಂಗಿದ್ದಾರೆ.
ಬೆಂಗಳೂರು: ಬಳ್ಳಾರಿ ಹಾಗೂ ತುಮಕೂರು ಗ್ರಾಮಾಂತರಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ರಾಜಭವನದಲ್ಲಿ ತಂಗಿದ್ದಾರೆ. ಬೆಂಗಳೂರು ತಲುಪುತ್ತಿದ್ದಂತೆಯೇ ಟ್ವೀಟ್ ಮಾಡಿರುವ ಅವರು, ಮಹಾನಗರದ ಜನತೆಯನ್ನು ಕಾಣುವುದನ್ನು ಎದುರು ನೋಡುತ್ತಿದ್ದೇನೆ ಎಂದು ಉಲ್ಲೇಖಿಸಿದ್ದಾರೆ. ಬಳ್ಳಾರಿ ಹಾಗೂ ತುಮಕೂರು ಕಾರ್ಯಕ್ರಮಗಳ ನಂತರ ಇದೀಗ ಬೆಂಗಳೂರಿಗೆ ಬಂದು ತಲುಪಿದ್ದೇನೆ. ಬೆಂಗಳೂರು ಮಹಾನಗರದ ಜನತೆಯನ್ನು ಭೇಟಿಯಾಗುವುದನ್ನು ಕಾತರದಿಂದ ಎದುರು ನೋಡುತ್ತಿದ್ದೇನೆ. ಬೆಂಗಳೂರಿನ ಜನ ಯಾವಾಗಲೂ ಬಿಜೆಪಿಯ ಬಗ್ಗೆ ಅಪಾರವಾದ ಪ್ರೀತಿಯನ್ನು ತೋರಿಸುತ್ತಿದ್ದಾರೆ. ಇಲ್ಲಿ ಅಭಿವೃದ್ಧಿಯನ್ನು ಹೆಚ್ಚಿಸಲು ಮತ್ತು ಜನರ ಕಲ್ಯಾಣವನ್ನು ಕೇಂದ್ರೀಕೃತ ಕೆಲಸಗಳನ್ನು ಮಾಡುತ್ತಲೇ ಇರುತ್ತೇವೆ ಎಂದು ಅವರು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
ಶನಿವಾರ ಮತ್ತು ಭಾನುವಾರಗಳಂದು ನಗರದಲ್ಲಿ ಮೋದಿಯವರ ಭರ್ಜರಿ ರೋಡ್ ಶೋ ನಡೆಯಲಿದೆ. ಇದಕ್ಕಾಗಿ ಈಗಾಗಲೇ ಬಿಜೆಪಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಬೆಂಗಳೂರು ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
After programmes in Ballari and Tumakuru, landed in Bengaluru, where I look forward to being in the midst of this great city’s people tomorrow. Bengaluru has always shown great affection towards the BJP and we will keep working to boost development and focus on people’s welfare.
— Narendra Modi (@narendramodi) May 5, 2023
ಈ ಮಧ್ಯೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ರೋಡ್ ಶೋ ನಡೆಯುವ ಪ್ರದೇಶಗಳಲ್ಲಿನ ಸಿದ್ಧತೆ ವೀಕ್ಷಣೆ ಮಾಡಿದ್ದಾರೆ.
8 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ನಗರಾದ್ಯಂತ 8 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸೇರಿದಂತೆ ಎಲ್ಲಾ ಪೊಲೀಸ್ ಹಿರಿಯ ಅಧಿಕಾರಿಗಳು ಬಂದೋಬಸ್ತ್‌ನಲ್ಲಿ ಭಾಗಿಯಾಗಲಿದ್ದಾರೆ. ಸಂಚಾರಿ ವಿಭಾಗದ ವಿಶೇಷ ಪೊಲೀಸ್ ಆಯುಕ್ತ ಡಾ.ಎಂ.ಎ.ಸಲೀಂ, ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, ಹತ್ತು ಡಿಸಿಪಿಗಳು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಮೋದಿ ರೋಡ್ ಶೋಗೆ ಭದ್ರತೆ ಒದಗಿಸಲಿದ್ದಾರೆ. ಸುಮಾರು 150 ಕೆಎಸ್ಆರ್ಪಿ ಹಾಗೂ ಸಿಎಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿ: Modi Bangalore roadshow: ಪ್ರಧಾನಿ ಮೋದಿ ಬೆಂಗಳೂರು ರೋಡ್ ಶೋ ಸಮಯದಲ್ಲಿ ಮತ್ತೆ ಬದಲಾವಣೆ
ರೋಡ್ ಶೋ ಸಮಯದಲ್ಲಿ ಕೊಂಚ ಬದಲಾವಣೆಯಾಗಿದ್ದು, ನಾಳೆ (ಮೇ 6) ಬೆಳಗ್ಗೆ 9ರಿಂದ ಮಧ್ಯಾಹ್ನ 1.30ರವರೆಗೆ ಮಾತ್ರ ರೋಡ್ ನಡೆಯಲಿದೆ. ಭಾನುವಾರ (ಮೇ 7) ಬೆಳಗ್ಗೆ 9ರಿಂದ ಬೆಳಗ್ಗೆ 11.30ರವರೆಗೆ ನಡೆಯಲಿದೆ.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ