ಬೆಂಗಳೂರು ಮಹಾನಗರದ ಜನತೆಯ ಕಾಣುವುದನ್ನು ಎದುರುನೋಡುತ್ತಿದ್ದೇನೆ; ಮೋದಿ

ಬಳ್ಳಾರಿ ಹಾಗೂ ತುಮಕೂರು ಗ್ರಾಮಾಂತರಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ರಾಜಭವನದಲ್ಲಿ ತಂಗಿದ್ದಾರೆ.

ಬೆಂಗಳೂರು ಮಹಾನಗರದ ಜನತೆಯ ಕಾಣುವುದನ್ನು ಎದುರುನೋಡುತ್ತಿದ್ದೇನೆ; ಮೋದಿ
ಪ್ರಧಾನಿ ನರೇಂದ್ರ ಮೋದಿ

Updated on: May 05, 2023 | 11:00 PM

ಬೆಂಗಳೂರು: ಬಳ್ಳಾರಿ ಹಾಗೂ ತುಮಕೂರು ಗ್ರಾಮಾಂತರಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ರಾಜಭವನದಲ್ಲಿ ತಂಗಿದ್ದಾರೆ. ಬೆಂಗಳೂರು ತಲುಪುತ್ತಿದ್ದಂತೆಯೇ ಟ್ವೀಟ್ ಮಾಡಿರುವ ಅವರು, ಮಹಾನಗರದ ಜನತೆಯನ್ನು ಕಾಣುವುದನ್ನು ಎದುರು ನೋಡುತ್ತಿದ್ದೇನೆ ಎಂದು ಉಲ್ಲೇಖಿಸಿದ್ದಾರೆ. ಬಳ್ಳಾರಿ ಹಾಗೂ ತುಮಕೂರು ಕಾರ್ಯಕ್ರಮಗಳ ನಂತರ ಇದೀಗ ಬೆಂಗಳೂರಿಗೆ ಬಂದು ತಲುಪಿದ್ದೇನೆ. ಬೆಂಗಳೂರು ಮಹಾನಗರದ ಜನತೆಯನ್ನು ಭೇಟಿಯಾಗುವುದನ್ನು ಕಾತರದಿಂದ ಎದುರು ನೋಡುತ್ತಿದ್ದೇನೆ. ಬೆಂಗಳೂರಿನ ಜನ ಯಾವಾಗಲೂ ಬಿಜೆಪಿಯ ಬಗ್ಗೆ ಅಪಾರವಾದ ಪ್ರೀತಿಯನ್ನು ತೋರಿಸುತ್ತಿದ್ದಾರೆ. ಇಲ್ಲಿ ಅಭಿವೃದ್ಧಿಯನ್ನು ಹೆಚ್ಚಿಸಲು ಮತ್ತು ಜನರ ಕಲ್ಯಾಣವನ್ನು ಕೇಂದ್ರೀಕೃತ ಕೆಲಸಗಳನ್ನು ಮಾಡುತ್ತಲೇ ಇರುತ್ತೇವೆ ಎಂದು ಅವರು ಟ್ವೀಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಶನಿವಾರ ಮತ್ತು ಭಾನುವಾರಗಳಂದು ನಗರದಲ್ಲಿ ಮೋದಿಯವರ ಭರ್ಜರಿ ರೋಡ್ ಶೋ ನಡೆಯಲಿದೆ. ಇದಕ್ಕಾಗಿ ಈಗಾಗಲೇ ಬಿಜೆಪಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಬೆಂಗಳೂರು ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.


ಈ ಮಧ್ಯೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಎಂಎಲ್​ಸಿ ಛಲವಾದಿ ನಾರಾಯಣಸ್ವಾಮಿ ರೋಡ್​ ಶೋ ನಡೆಯುವ ಪ್ರದೇಶಗಳಲ್ಲಿನ ಸಿದ್ಧತೆ ವೀಕ್ಷಣೆ ಮಾಡಿದ್ದಾರೆ.

8 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ನಗರಾದ್ಯಂತ 8 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸೇರಿದಂತೆ ಎಲ್ಲಾ ಪೊಲೀಸ್ ಹಿರಿಯ ಅಧಿಕಾರಿಗಳು ಬಂದೋಬಸ್ತ್‌ನಲ್ಲಿ ಭಾಗಿಯಾಗಲಿದ್ದಾರೆ. ಸಂಚಾರಿ ವಿಭಾಗದ ವಿಶೇಷ ಪೊಲೀಸ್ ಆಯುಕ್ತ ಡಾ.ಎಂ.ಎ.ಸಲೀಂ, ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, ಹತ್ತು ಡಿಸಿಪಿಗಳು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಮೋದಿ ರೋಡ್​ ಶೋಗೆ ಭದ್ರತೆ ಒದಗಿಸಲಿದ್ದಾರೆ. ಸುಮಾರು 150 ಕೆಎಸ್ಆರ್​​ಪಿ ಹಾಗೂ ಸಿಎಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: Modi Bangalore roadshow: ಪ್ರಧಾನಿ ಮೋದಿ ಬೆಂಗಳೂರು ರೋಡ್​ ಶೋ ಸಮಯದಲ್ಲಿ ಮತ್ತೆ ಬದಲಾವಣೆ

ರೋಡ್​ ಶೋ ಸಮಯದಲ್ಲಿ ಕೊಂಚ ಬದಲಾವಣೆಯಾಗಿದ್ದು, ನಾಳೆ (ಮೇ 6) ಬೆಳಗ್ಗೆ 9ರಿಂದ ಮಧ್ಯಾಹ್ನ 1.30ರವರೆಗೆ ಮಾತ್ರ ರೋಡ್​ ನಡೆಯಲಿದೆ. ಭಾನುವಾರ (ಮೇ 7) ಬೆಳಗ್ಗೆ 9ರಿಂದ ಬೆಳಗ್ಗೆ 11.30ರವರೆಗೆ ನಡೆಯಲಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow Us