Bengaluru-Mysuru Expressway: ಕಾಂಗ್ರೆಸ್ ಬಡವರ ಹಣವನ್ನು ಲೂಟಿ ಮಾಡಿದೆ, ಅವರಿಗೆ ಜನರ ಬಗ್ಗೆ ಕಾಳಜಿ ಇಲ್ಲ: ಮೋದಿ

ಎಕ್ಸ್‌ಪ್ರೆಸ್‌ ವೇ ಲೋಕಾರ್ಪಣೆ ನಂತರ ಮಾತನಾಡಿದ ಮೋದಿ ಕರ್ನಾಟಕದಾದ್ಯಂತ ಸಂಪರ್ಕವನ್ನು ಹೆಚ್ಚಿಸುವ ಪ್ರಮುಖ ರಸ್ತೆ ಮೂಲಸೌಕರ್ಯ ಯೋಜನೆಗಳನ್ನು ಇಲ್ಲಿಂದ ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದ್ದಾರೆ.

Bengaluru-Mysuru Expressway: ಕಾಂಗ್ರೆಸ್ ಬಡವರ ಹಣವನ್ನು ಲೂಟಿ ಮಾಡಿದೆ, ಅವರಿಗೆ ಜನರ ಬಗ್ಗೆ ಕಾಳಜಿ ಇಲ್ಲ: ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on:Mar 12, 2023 | 2:26 PM

ಮಂಡ್ಯ (Mandya) ತಾಲೂಕಿನ ಹನಕೆರೆ ಗ್ರಾಮದ ಬಳಿ 118 ಕಿ.ಮೀ. ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯನ್ನು(Bengaluru-Mysuru expressway) ಪ್ರಧಾನಿ ನರೇಂದ್ರ ಮೋದಿ (Narendra Modi) ಅಧಿಕೃತವಾಗಿ ಲೋಕಾರ್ಪಣೆ ಮಾಡಿದ್ದಾರೆ. 8,479 ಕೋಟಿ ರೂ. ವೆಚ್ಚದಲ್ಲಿ ಎಕ್ಸ್‌ಪ್ರೆಸ್‌ ವೇ ನಿರ್ಮಾಣವಾಗಿದೆ.ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಯಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ನರೇಂದ್ರ ಮೋದಿ ಕನ್ನಡದಲ್ಲೇ ಭಾಷಣ ಆರಂಭಿಸಿದರು. ತಾಯಿ ಭುವನೇಶ್ವರಿಗೆ ನಮಸ್ಕಾರಗಳು. ನಿಮ್ಮ ಪ್ರೀತಿಯ ಋಣ ಬಡ್ಡಿ ಸಮೇತ ನಮ್ಮ ಸರ್ಕಾರ ತೀರಿಸಲಿದೆ ಎಂದು ಮೋದಿ ಹೇಳಿದ್ದಾರೆ. ಎಕ್ಸ್‌ಪ್ರೆಸ್‌ ವೇ ಲೋಕಾರ್ಪಣೆ ನಂತರ ಮಾತನಾಡಿದ ಮೋದಿ  ಕರ್ನಾಟಕದಾದ್ಯಂತ ಸಂಪರ್ಕವನ್ನು ಹೆಚ್ಚಿಸುವ ಪ್ರಮುಖ ರಸ್ತೆ ಮೂಲಸೌಕರ್ಯ ಯೋಜನೆಗಳನ್ನು ಇಲ್ಲಿಂದ ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ನಮ್ಮ ರಾಷ್ಟ್ರದ ಬೆಳವಣಿಗೆಯನ್ನು ನೋಡುವುದರಲ್ಲಿ ಯುವಕರು ಅಪಾರ ಹೆಮ್ಮೆ ಪಡುತ್ತಿದ್ದಾರೆ. ಈ ಎಲ್ಲಾ ಯೋಜನೆಗಳು ಸಮೃದ್ಧಿ ಮತ್ತು ಅಭಿವೃದ್ಧಿಯ ಹಾದಿಗಳನ್ನು ತೆರೆಯುತ್ತದೆ ಎಂದು ಮೋದಿ ಹೇಳಿದ್ದಾರೆ

ಮೋದಿ ಭಾಷಣದ ಮುಖ್ಯಾಂಶಗಳು

  1. ಬೆಂಗಳೂರು ಮತ್ತು ಮೈಸೂರು ಕರ್ನಾಟಕದ ಪ್ರಮುಖ ನಗರಗಳು. ಒಂದು ತಂತ್ರಜ್ಞಾನಕ್ಕೆ ಹೆಸರಾದರೆ ಇನ್ನೊಂದು ಸಂಪ್ರದಾಯಕ್ಕೆ ಹೆಸರುವಾಸಿ. ಎರಡೂ ನಗರಗಳನ್ನು ತಂತ್ರಜ್ಞಾನದ ಮೂಲಕ ಸಂಪರ್ಕಿಸುವುದು ಬಹಳ ಮಹತ್ವದ್ದಾಗಿದೆ.
  2. ಭಾರತಮಾಲಾ’ ಮತ್ತು ‘ಸಾಗರಮಾಲಾ’ದಂತಹ ಉಪಕ್ರಮಗಳು ಭಾರತದ ಭೂದೃಶ್ಯವನ್ನು ಪರಿವರ್ತಿಸುತ್ತಿವೆ ಎಂದು ಪ್ರಧಾನಿ ಹೇಳಿದರು.
  3. 2014ರ ಮೊದಲು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಬಡವರನ್ನು ಮತ್ತಷ್ಟು ಕಾಡಿತು. ಬಡವರಿಗಾಗಿ ಇದ್ದ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಮಾಡಿದೆ.
  4. ಬೆಂಗಳೂರು-ಮೈಸೂರು ಹೆದ್ದಾರಿಯು ಐತಿಹಾಸಿಕ ಮಹತ್ವದ ಸ್ಥಳಗಳ ಮೂಲಕ ಹಾದುಹೋಗುತ್ತದೆ. ಇದರ ಚಾಲನೆ ಸಂಪರ್ಕವನ್ನು ಹೆಚ್ಚಿಸುತ್ತದೆ ಮತ್ತು ಸ್ಥಳೀಯ ಪ್ರವಾಸೋದ್ಯಮವನ್ನು ಹೆಚ್ಚಿಸುತ್ತದೆ.
  5. ಉತ್ತಮ ಮೂಲಸೌಕರ್ಯವು ಜನರಿಗೆ ಬದುಕಲು ಸುಲಭವಾಗುತ್ತದೆ. ಈ ಯೋಜನೆಗಳು ಪ್ರಗತಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಹೇಳಿದರು.
  6. 2014 ರಲ್ಲಿ, ನಿಮ್ಮ ಸೇವೆ ಮಾಡಲು ನೀವು ನನಗೆ ಮತ ನೀಡಿದಾಗ, ಬಡವರ ಅಭ್ಯುದಯಕ್ಕಾಗಿ ಕೆಲಸ ಮಾಡುವುದನ್ನು ಮುಂದುವರೆಸಿದ ಸೂಕ್ಷ್ಮ ಸರ್ಕಾರವನ್ನು ರಚಿಸಲಾಯಿತು. ಕಾಂಗ್ರೆಸ್ ಪಕ್ಷವು ಬಡವರ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ. ಅವರು ಬಡವರ ಬಗ್ಗೆ ಎಂದಿಗೂ ಕಾಳಜಿ ವಹಿಸುತ್ತಿಲ್ಲ.
  7. ಈ ವರ್ಷದ ಬಜೆಟ್‌ನಲ್ಲಿ ಮೂಲಸೌಕರ್ಯಕ್ಕಾಗಿ 10 ಸಾವಿರ ಕೋಟಿ ರೂ ಅನುದಾನ ನೀಡಲಾಗಿದೆ.
  8. ಮೈಸೂರು-ಬೆಂಗಳೂರು ಹೆದ್ದಾರಿಯ ಫೋಟೋಗಳು ವೈರಲ್ ಆಗಿವೆ. ಮೈಸೂರು-ಕುಶಾಲನಗರ 4 ಪಥದ ರಸ್ತೆಗೆ ಶಿಲಾನ್ಯಾಸ ನೆರವೇರಿಸಿದ್ದೇವೆ. ದಶಪಥ ಹೆದ್ದಾರಿಯಿಂದ ಈ ಭಾಗದಲ್ಲಿ ಸಾಕಷ್ಟು ಅನುಕೂಲವಾಗಲಿದೆ. ಈ ಪುಣ್ಯಭೂಮಿ ಕೃಷ್ಣರಾಜ ಒಡೆಯರ್, ವಿಶ್ವೇಶ್ವರಯ್ಯರನ್ನು ದೇಶಕ್ಕೆ ನೀಡಿದೆ. ಇಂದು ಭಾರತದಲ್ಲಿ ಸಾಕಷ್ಟು ಬದಲಾವಣೆ ಆಗುತ್ತಿದೆ. ಮೂಲಭೂತ ಕ್ಷೇತ್ರದಲ್ಲಿ ಡಬಲ್ ಇಂಜಿನ್ ಸರ್ಕಾರದಿಂದ ಬದಲಾವಣೆ ಸಾಧ್ಯ.
  9. ಕಳೆದ 9 ವರ್ಷಗಳಲ್ಲಿ 3 ಕೋಟಿಗೂ ಹೆಚ್ಚು ಬಡವರಿಗೆ ಮನೆ ನೀಡಲಾಗಿದೆ. ಕರ್ನಾಟಕದಲ್ಲೂ ಬಡವರಿಗೆ ಮನೆ ನಿರ್ಮಾಣ, ಕುಡಿಯುವ ನೀರಿನ ಸಂಪರ್ಕ ನೀಡಲಾಗಿದೆ. ಜಲ್ ಜೀವನ್ ಮಿಷನ್ ಅಡಿಯಲ್ಲಿ 40 ಲಕ್ಷ ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕ ನೀಡಲಾಗಿದೆ. ಬಜೆಟ್​​​ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಹಣ ಘೋಷಣೆ ಮಾಡಲಾಗಿದೆ. ಮಂಡ್ಯ ಜಿಲ್ಲೆಯ ರೈತರ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡಲಾಗಿದೆ. 3 ಲಕ್ಷಕ್ಕೂ ಹೆಚ್ಚು ರೈತರಿಗೆ 600 ಕೋಟಿಗೂ ಹೆಚ್ಚು ಹಣ ವರ್ಗಾವಣೆ ಮಾಡಲಾಗಿದೆ. ಕರ್ನಾಟಕದ ಬಿಜೆಪಿ ಸರ್ಕಾರಕ್ಕೆ ಅಭಿನಂದನೆ.
  10. 2022 ರಲ್ಲಿ ಭಾರತವು ದಾಖಲೆಯ ಹೂಡಿಕೆಯನ್ನು ಪಡೆಯಿತು. ಕರ್ನಾಟಕವು ಹೆಚ್ಚು ಪ್ರಯೋಜನ ಪಡೆಯಿತು. ಕೋವಿಡ್ ನಡುವೆಯೂ ಕರ್ನಾಟಕದಲ್ಲಿ 4 ಲಕ್ಷ ಕೋಟಿ ರೂಪಾಯಿ ಹೂಡಿಕೆಯಾಗಿದೆ.
  11. ಕಾಂಗ್ರೆಸ್ ‘ಮೋದಿಗೆ ಸಮಾಧಿ ತೋಡುವ’ ಕನಸು ಕಾಣುತ್ತಿದೆ. ಕಾಂಗ್ರೆಸ್ ‘ಮೋದಿ ಸಮಾಧಿ ತೋಡುವಲ್ಲಿ’ ನಿರತವಾಗಿದ್ದರೆ, ಮೋದಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ನಿರ್ಮಾಣ ಮತ್ತು ಬಡವರ ಬದುಕನ್ನು ಸುಗಮಗೊಳಿಸುವಲ್ಲಿ ನಿರತರಾಗಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:17 pm, Sun, 12 March 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ