Karnataka Assembly Elction: ಮೇ.05ರಿಂದ ಪ್ರಧಾನಿ ಮೋದಿ ಮೂರು ದಿನ ರಾಜ್ಯ ಪ್ರವಾಸ; ಇಲ್ಲಿದೆ ವೇಳಾಪಟ್ಟಿ

ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕ ವಿಧಾನಸಭೆ ಚುನಾವಣಾ ಅಖಾಡಕ್ಕೆ ಇಳಿದಿದ್ದು, ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಎಂಬ ಘೋಷವಾಖ್ಯದೊಂದಿಗೆ ರಾಜ್ಯ ಪರ್ಯಟನೆ ಮಾಡುತ್ತಿದ್ದಾರೆ. ಪ್ರಧಾನಿ ಮೋದಿಯವರ ಮುಂದಿನ ರಾಜ್ಯ ಪ್ರವಾಸದ ವೇಳಾಪಟ್ಟಿ ಇಲ್ಲಿದೆ

Karnataka Assembly Elction: ಮೇ.05ರಿಂದ ಪ್ರಧಾನಿ ಮೋದಿ ಮೂರು ದಿನ ರಾಜ್ಯ ಪ್ರವಾಸ; ಇಲ್ಲಿದೆ ವೇಳಾಪಟ್ಟಿ
ಪ್ರಧಾನಿ ನರೇಂದ್ರ ಮೋದಿ
Follow us
ವಿವೇಕ ಬಿರಾದಾರ
|

Updated on:May 03, 2023 | 10:34 AM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elction) ಕಾವು ಜೋರಾಗಿದೆ. ರಣರಂಗಕ್ಕೆ ಬಿಜೆಪಿ (BJP) ಕೇಂದ್ರ ನಾಯಕರು ಪ್ರವೇಶಿಸಿದ್ದಾರೆ. ಈಗಾಗಲೆ ಪಕ್ಷದ ಕೇಂದ್ರ ನಾಯಕರಾದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಗೃಹ ಸಚಿವ ಅಮಿತ್ (Amit Shah)​ ಶಾ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಹೀಗೆ ಹಲವು ನಾಯಕರು ರಾಜ್ಯದಲ್ಲಿ ಮತಯಾಚನೆ ಮಾಡುತ್ತಿದ್ದಾರೆ. ಇನ್ನು ಪ್ರಧಾನಿ ಮೋದಿಯವರು ಅಖಾಡದಲ್ಲಿ ಘರ್ಜಿಸುತ್ತಿದ್ದು, ಕಾಂಗ್ರೆಸ್ (Congress)​ ಮತ್ತು ಜೆಡಿಎಸ್ (JDS)​​ ಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ. ಅಲ್ಲದೇ ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಎಂದು ಎಲ್ಲಡೆ ಘೋಷವಾಕ್ಯವನ್ನು ಮೊಳಗಿಸುತ್ತಿದ್ದಾರೆ. ವೇಳಾಪಟ್ಟಿ ಪ್ರಕಾರ ಮೇ 5, 6 ಮತ್ತು 7 ರಂದು ಮತ್ತೆ ಮೂರು ದಿನಗಳ‌ ಕಾಲ‌ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ‌ಪ್ರಚಾರ ನಡೆಸಲಿದ್ದಾರೆ.

ಮೇ 5, 6 ಮತ್ತು 7 ಪ್ರಧಾನಿ ಮೋದಿ ರಾಜ್ಯ ಪ್ರವಾಸ

ಮೇ. 05 ರಂದು ಮಧ್ಯಾಹ್ನ 2.30 ಕ್ಕೆ ಬಳ್ಳಾರಿಯಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ತುಮಕೂರಿನಲ್ಲಿ ಮತಯಾಚಿಸಲಿದ್ದಾರೆ. ಅಂದು ರಾತ್ರಿ ಬೆಂಗಳೂರಿನ ರಾಜ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮೇ 6 ರಂದು ಇಡೀ ದಿನ ಬೆಂಗಳೂರಿನಲ್ಲಿ 2 ರೋಡ್ ಶೋ ನಡೆಸಲಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೊದಲ ರೋಡ್ ಶೋ ನಡೆಯಲಿದ್ದು, ಸಿ.ವಿ. ರಾಮನ್ ನಗರದ ಕೆಂಪೇಗೌಡ ಪ್ರತಿಮೆಯಿಂದ ಬ್ರಿಗೇಡ್ ರೋಡ್ ವಾರ್ ಮೆಮೋರಿಯಲ್​ವರೆಗೆ ಮೆರವಣಿಗೆ ಸಾಗುತ್ತದೆ.

ಮಧ್ಯಾಹ್ನ 3 ಗಂಟೆಗೆ ಎರಡನೇ ರೋಡ್​ ಶೋ ಆರಂಭವಾಗಲಿದ್ದು, ರಾತ್ರಿ 8.30 ರವರೆಗೆ ನಡೆಯುತ್ತದೆ. ಕೋಣನಕುಂಟೆ, ಬ್ರಿಗೇಡ್ ಮಿಲೇನಿಯಂನಿಂದ, ಸ್ಯಾಂಕಿ ಟ್ಯಾಂಕ್​​ವರೆಗೆ ನಡೆಯಲಿದೆ. ಐದೂವರೆ ಗಂಟೆಗಳ ಕಾಲ ರೋಡ್ ಶೋ ನಡೆಯಲಿದೆ. ಮೇ 6 ರಂದು ರಾತ್ರಿ ರಾಜಭವನದಲ್ಲಿ ತಂಗಲಿದ್ದಾರೆ.

ಇದನ್ನೂ ಓದಿ: ಮೋದಿ ಸೇರಿದಂತೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್​ ನಾಯಕರ ಪ್ರಚಾರ: ಇಂದು ಯಾರು ಎಲ್ಲೆಲ್ಲಿ ಮತಬೇಟೆ? ಇಲ್ಲಿದೆ ಮಾಹಿತಿ

ಮೇ 7 ರಂದು ಬೆಳಗ್ಗೆ 11 ಗಂಟೆಗೆ ಬಾದಾಮಿಯಲ್ಲಿ ನಡೆಯುವ ಸಾರ್ವಜನಿಕ ಸಾಮೇಶದಲ್ಲಿ ಭಾಗಿಯಾಗುತ್ತಾರೆ. ಮಧ್ಯಾಹ್ನ 1 ಗಂಟೆಗೆ ಹಾವೇರಿಯಲ್ಲಿ, 3 ಗಂಟೆಗೆ ಶಿವಮೊಗ್ಗ ಗ್ರಾಮಾಂತರ, ಸಂಜೆ 5.45ಕ್ಕೆ ನಂಜನಗೂಡಿನಲ್ಲಿ ಮತಯಾಚಿಸಲಿದ್ದಾರೆ. ರಾತ್ರಿ 7 ಗಂಟೆಗೆ ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ರಾತ್ರಿ 8 ಗಂಟೆಗೆ ಮೈಸೂರಿನಿಂದ ದೆಹಲಿಗೆ ನಿರ್ಗಮಿಸಲಿದ್ದಾರೆ.

ಪ್ರಧಾನಿ ಮೋದಿ ಇಂದಿನ ರಾಜ್ಯ ಪ್ರವಾಸ

ಇಂದು (ಮೇ.03) ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮೂಡಬಿದಿರೆ ಕ್ಷೇತ್ರದ ಮುಲ್ಕಿಯಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಯಲಿದೆ. ಮಧ್ಯಾಹ್ನ 1.15 ಕ್ಕೆ ಅಂಕೋಲಾದಲ್ಲಿ, ಮಧ್ಯಾಹ್ನ 3.15 ಕ್ಕೆ ಬೈಲಹೊಂಗಲದಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಸಿ ಸಂಜೆ 4.40ಕ್ಕೆ ಬೆಳಗಾವಿಯಿಯಿಂದ ದೆಹಲಿಗೆ ಮೋದಿ ನಿರ್ಗಮಿಸಲಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:09 am, Wed, 3 May 23

ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ