BJP Manifesto: ಬಿಜೆಪಿ ಚುನಾವಣಾ ಪ್ರಣಾಳಿಕೆಗೆ ಮೆಚ್ಚುಗೆ ಸೂಚಿಸಿದ ಪ್ರಧಾನಿ ಮೋದಿ, ಕನ್ನಡದಲ್ಲೇ ಟ್ವೀಟ್
ಕರ್ನಾಟಕ ವಿಧಾನಸಭೆ ಚುಣಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ‘ಪ್ರಜಾ ಪ್ರಣಾಳಿಕೆ’ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.
ನವದೆಹಲಿ: ಕರ್ನಾಟಕ ವಿಧಾನಸಭೆ ಚುಣಾವಣೆಗೆ (Karnataka Assembly Elections 2023) ಬಿಜೆಪಿ ಬಿಡುಗಡೆ ಮಾಡಿರುವ ‘ಪ್ರಜಾ ಪ್ರಣಾಳಿಕೆ’ (BJP Manifesto) ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ. ಬಿಜೆಪಿಯು ಮತದಾರರನ್ನು ಓಲೈಸಲು ಪ್ರಣಾಳಿಕೆಯಲ್ಲಿ ಭರಪೂರ ಯೋಜನೆಗಳನ್ನು ಘೋಷಿಸಿದ್ದರ ಜತೆಗೆ, ಹಿಂದುತ್ವ ಐಡಿಯಾಲಜಿಗೆ ಸಂಬಂಧಿಸಿದ ಹಲವು ಘೋಷಣೆಗಳನ್ನೂ ಮಾಡಿದೆ. ಅಧಿಕಾರಕ್ಕೆ ಬಂದರೆ ಬಿಪಿಎಲ್ ಕಾರ್ಡ್‌ದಾರರಿಗೆ ಮೂರು ಅಡುಗೆ ಸಿಲಿಂಡರ್ಗಳು ಹಾಗೂ ಪ್ರತಿನಿತ್ಯ ಅರ್ಧ ಲೀಟರ್ ಹಾಲು ಉಚಿವಾಗಿ ಕೊಡುವ ಘೋಷಣೆಯನ್ನೂ ಮಾಡಲಾಗಿದೆ.
‘ಭಾರತೀಯ ಜನತಾ ಪಾರ್ಟಿಯ ಪ್ರಣಾಳಿಕೆಯು ಅಭಿವೃದ್ಧಿ ಕೇಂದ್ರಿತವಾಗಿದೆ ಮತ್ತು ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಉತ್ತಮ ಕೆಲಸಗಳಿಗೆ ಅನುಗುಣವಾಗಿದೆ’ ಎಂದು ಮೋದಿ ಟ್ವೀಟ್ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ.
ನವ ಕರ್ನಾಟಕದ ಮೂಲಕ ಭವ್ಯ ಭಾರತ ನಿರ್ಮಾಣಕ್ಕೆ, ಮುಂದಿನ ಐದು ವರ್ಷಗಳ ದಾರಿಸೂಚಕವಾದ ಬಿಜೆಪಿ ಪ್ರಜಾ ಪ್ರಣಾಳಿಕೆ 2023 ಲೋಕಾರ್ಪಣೆಗೊಂಡಿದೆ. ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ, ಪ್ರಜೆಗಳ ಸಲಹೆಗಳಿಂದಲೇ ರಚನೆಗೊಂಡ ಬಿಜೆಪಿ ಪ್ರಜಾ ಪ್ರಣಾಳಿಕೆ ಈಗ ನಿಮ್ಮ ಮುಂದಿದೆ ಎಂದು ಬಿಜೆಪಿ ಕರ್ನಾಟಕ ಟ್ವೀಟ್ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಪ್ರಣಾಳಿಕೆ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.
ಭಾರತೀಯ ಜನತಾ ಪಾರ್ಟಿಯ ಪ್ರಣಾಳಿಕೆಯು ಅಭಿವೃದ್ಧಿ ಕೇಂದ್ರಿತವಾಗಿದೆ ಮತ್ತು ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ @BJP4Karnataka ಸರ್ಕಾರವು ಮಾಡಿರುವ ಉತ್ತಮ ಕೆಲಸಗಳಿಗೆ ಅನುಗುಣವಾಗಿದೆ. #BJPPrajaPranalike2023 https://t.co/MsIIH7VWPW
— Narendra Modi (@narendramodi) May 1, 2023
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಟಲ್ ಆಹಾರ ಕೇಂದ್ರ ಸ್ಥಾಪನೆ, ಪಿಎಲ್ ಕುಟುಂಬಗಳಿಗೆ ಉಚಿತ 3 ಗ್ಯಾಸ್ (ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ), ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಅನೇಕ ಭರವಸೆಗಳನ್ನು ಬಿಜೆಪಿ ಪ್ರಣಾಳಿಕೆಯಲ್ಲಿ ನೀಡಲಾಗಿದೆ. ಜತೆಗೆ ಹಿಂದುತ್ವದ ಅಜೆಂಡಾಗೆ ಪೂರಕವಾಗಿ ದೇಗುಲಗಳನ್ನು ಸರ್ಕಾರದ ಹಿಡಿತದಿಂದ ಮುಕ್ತಗೊಳಿಸಿ ಸ್ವಾಯತ್ತ ಆಡಳಿತ ಸಂಸ್ಥೆಗಳನ್ನಾಗಿ ಮಾಡುವುದು ಮತ್ತು ತಿರುಪತಿ, ಅಯೋಧ್ಯೆ, ಕಾಶಿ, ರಾಮೇಶ್ವರಂ, ಶಬರಿಮಲೆ ಮತ್ತು ಕೇದಾರನಾಥದಂತಹ ಸ್ಥಳಗಳಿಗೆ ‘ತೀರ್ಥಯಾತ್ರೆ’ ಕೈಗೊಳ್ಳಲು ಬಡ ಕುಟುಂಬಗಳಿಗೆ 25,000 ರೂ ಒಂದು ಬಾರಿಯ ಸಹಾಯಧನ ನೀಡುವ ಬಗ್ಗೆಯೂ ಭರವಸೆ ನೀಡಲಾಗಿದೆ.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ