ಈಶ್ವರಪ್ಪಗೆ ಪ್ರಧಾನಿ ದೂರವಾಣಿ ಕರೆ: ರಾಜಕೀಯ ನಡೆಗೆ ಪ್ರಶಂಸೆ ಜತೆಗೆ ಮಹತ್ವದ ಭರವಸೆ ನೀಡಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ದಿಢೀರ್​ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮಹತ್ವದ ಭರವಸೆಯೊಂದನ್ನು ನೀಡಿದ್ದಾರೆ.

ಈಶ್ವರಪ್ಪಗೆ ಪ್ರಧಾನಿ ದೂರವಾಣಿ ಕರೆ: ರಾಜಕೀಯ ನಡೆಗೆ ಪ್ರಶಂಸೆ ಜತೆಗೆ ಮಹತ್ವದ ಭರವಸೆ ನೀಡಿದ ಮೋದಿ
ಸಾಂದರ್ಭಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on:Apr 21, 2023 | 11:32 AM

ಶಿಮಮೊಗ್ಗ:  ಮಾಜಿ ಸಚಿವ ಕೆಎಸ್​ ಈಶ್ವರಪ್ಪ(KS Eshwarappa) ಅವರು ಕರ್ನಾಟಕ ಚುನಾವಣಾ ರಾಜಕೀಯಕ್ಕೆ ಸ್ವಯಂ ನಿವೃತ್ತಿ ಘೋಷಣೆ (Electoral Politics Retirement )ಮಾಡಿದ್ದು, ಇದೀಗ ಇದಕ್ಕೆ ಪ್ರಧಾನಿ ನರೇಂದ್ರ ಮೋದಿ( Narendra Modi)ಅವರು ಪ್ರಶಂಶಿಸಿದ್ದಾರೆ. ಇಂದು ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರು ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಅವರ ರಾಜಕೀಯ ಪ್ರಬುದ್ಧ ನಡೆಯನ್ನು ಪ್ರಶಂಶಿಸಿದರು. ಅಲ್ಲದೇ ಪಕ್ಷ ಸದಾ ನಿಮ್ಮ ಜೊತೆ ಇದೆ ಎಂದು ಭರವಸೆ ನೀಡಿದರು. ಇದರಿಂದ ಕೆಎಸ್ ಈಶ್ವರಪ್ಪ ಫುಲ್ ಖುಷ್ ಆಗಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿರುವ ಬಗ್ಗೆ ಈಶ್ವರಪ್ಪನವರು ಟಿವಿ9ಗೆ ಪ್ರತಿಕ್ರಿಯಿಸಿದ್ದು, ಮೋದಿ ಬೆಳಗ್ಗೆ ಕಾಲ್ ಮಾಡಿದಾಗ ನನಗೆ ಅಚ್ಚರಿ ಆಯ್ತು. ಮೋದಿ ಅವರು ಹೀಗೆ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸುತ್ತಿರುವುದು ಸಂತೋಷವಾಗಿದೆ. ಇದು ಎಲ್ಲ ಕಾರ್ಯಕರ್ತ ರಿಗೆ ಸ್ಫೂರ್ತಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕೊನೆ ಕ್ಷಣದಲ್ಲಿ ಶಿವಮೊಗ್ಗ ನಗರ ಬಿಜೆಪಿ ಟಿಕೆಟ್​ ಕೈತಪ್ಪಿದ್ದಕ್ಕೆ ಈಶ್ವರಪ್ಪ, ಕಾಂತೇಶ್​ ಹೇಳಿದ್ದೇನು?

ಕೇಂದ್ರ ವರಿಷ್ಠರ ಸೂಚನೆಯಂತೆ ಚುನಾವಣೆ ನಿವೃತ್ತಿ ತೆಗೆದುಕೊಂಡಿದ್ದು, 10 ನಿಮಿಷದಲ್ಲಿ ಅವರ ಸೂಚನೆಯಂತೆ ನಾನು ವರಿಷ್ಠರಿಗೆ ಪತ್ರ ಬರೆದಿದ್ದೆ. ಈ ಬೆಳವಣಿಗೆಯಿಂದ ಈಗ ಆಶ್ಚರ್ಯ ಮತ್ತು ಸಂತಸ ಆಗಿದೆ.   ಪಕ್ಷದ ಸೂಚನೆಯಂತೆ ಶಿಸ್ತು ಪಾಲನೆ ಮಾಡಿದ್ದಕ್ಕೆ ಮೋದಿ ಸಂತಸ ವ್ಯಕ್ತಪಡಿಸಿದ್ದು, ರಾಜ್ಯಕ್ಕೆ ಬಂದ ಸಮಯದಲ್ಲಿ ಭೇಟಿಯಾಗುವುದಾಗಿ ತಿಳಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಬಿಜೆಪಿ ಸರಕಾರ ಮತ್ತೆ ಅಧಿಕಾರಕ್ಕೆ ಬರಲು ಮೋದಿ ಸೂಚನೆ ನೀಡಿದ್ದಾರೆ ಎಂದು ಈಶ್ವರಪ್ಪ ಹೇಳಿದರು.

ಮೋದಿ-ಈಶ್ವರಪ್ಪ ಮಾತುಕತೆಯ ವಿಡಿಯೋ ಇಲ್ಲಿದೆ

ನಿವೃತ್ತಿ ಘೋಷಿಸಿದ್ದ ಈಶ್ವರಪ್ಪ

ಶಿಮಮೊಗ್ಗ ನಗರ ಟಿಕೆಟ್​ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಹೈಕಮಾಂಡ್​ ಸೂಚನೆ ಮೇರೆಗೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದರು. ಬಳಿಕ ಶಿವಮೊಗ್ಗ ನಗರ ಟಿಕೆಟ್​ ತಮ್ಮ ಪುತ್ರ ಕಾಂತೇಶ್​​ಗೆ ನೀಡುವಂತೆ ಈಶ್ವರಪ್ಪ ಮನವಿ ಮಾಡಿದ್ದರು. ಈ ಬಗ್ಗೆ ವರಿಷ್ಠರ ಗಮನಕ್ಕೂ ತಂದಿದ್ದರು. ಆದ್ರೆ, ಕೊನೆ ಗಳಿಗೆಯಲ್ಲಿ ಕಾಂತೇಶ್​ಗೂ ಟಿಕೆಟ್​ ಸಿಕ್ಕಿಲ್ಲ.ಬದಲಾಗಿ ಚನ್ನಬಸಪ್ಪ ಅವರಿಗೆ ಹೈಕಮಾಂಡ್ ಮಣೆ ಹಾಕಿದೆ, ಆದರೂ ಈಶ್ವರಪ್ಪ ಬೇಸರಗೊಳ್ಳದೇ ಪಕ್ಷಕ್ಕಾಗಿ ದುಡಿಯುತ್ತೇನೆ.  ಚನ್ನಬಸಪ್ಪnವರ ಗೆಲುವಿಗೆ ಶ್ರಮಿಸುತ್ತೇನೆ ಎಂದು ಹೇಳಿದ್ದರು.

ಈಶ್ವರಪ್ಪನವರ ಈ ನಡೆಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ ಸ್ವತಃ ಪ್ರಧಾನಿ ನರೇಂದ್ರ ಮೋದಿ ಸಹ ಫೋನ್ ಮಾಡಿ ಈಶ್ವರಪ್ಪನವರ ಪ್ರಬುದ್ಧ ನಡೆಗೆ ಪ್ರಶಂಶಿಸಿದ್ದಾರೆ. ಜೊತೆಗೆ ಪಕ್ಷ ಸದಾ ನಿಮ್ಮ ಜೊತೆ ಇರುತ್ತದೆ ಎಂದು ಮಹತ್ವದ ಭರವಸೆ ನೀಡಿದ್ದು, ಕುತೂಃಲ ಮೂಡಿಸಿದೆ. ಹಾಗಾದ್ರೆ, ಈಶ್ವರಪ್ಪನವರು ಮುಂದೆ ಸೂಕ್ತ ಸ್ಥಾಮಾನ ಸಿಗಲಿದ್ಯಾ ಎನ್ನುವ ಚರ್ಚೆಗಳು ಆರಂಭವಾಗಿವೆ.

ಕರ್ನಾಟಕ ವಿಧಾನಸಭೆ ಚುನಾವಣೆಯ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:02 am, Fri, 21 April 23

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ