ವಾಹನ ಸವಾರರ ಗಮನಕ್ಕೆ: ಇಂದು ಸಂಜೆ ಬೆಂಗಳೂರಿಗೆ ಮೋದಿ, ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ

ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಕೆಲ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗ ಅನುಸರಿಸುವಂತೆ ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ.

ವಾಹನ ಸವಾರರ ಗಮನಕ್ಕೆ: ಇಂದು ಸಂಜೆ ಬೆಂಗಳೂರಿಗೆ ಮೋದಿ, ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ
Follow us
ರಮೇಶ್ ಬಿ. ಜವಳಗೇರಾ
|

Updated on:May 05, 2023 | 9:41 AM

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ (Karnataka Assembly Elections 2023) ಕಾವು ರಂಗೇರಿದ್ದು, ಮೂರು ಪಕ್ಷಗಳು ಬಿಡುವಿಲ್ಲದೆ ಅಬ್ಬರದ ಪ್ರಚಾರ ಮಾಡುತ್ತಿವೆ. ಸದ್ಯ ಬಿಜೆಪಿ ಕೂಡ ಅಖಾಡದಲ್ಲಿ ಜೋರಾಗಿ ಪ್ರಚಾರ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಏಪ್ರಿಲ್ 29ರಿಂದ ರಾಜ್ಯದಲ್ಲಿ ಸರಣಿ ಸಮಾವೇಶ, ರೋಡ್ ಶೋಗಳ ಮೂಲಕ ಕೊನೆ ಕ್ಷಣದಲ್ಲಿ ಗೇಮ್ ಚೇಂಜ್ ಮಾಡಲು ಹೊರಟಿದ್ದಾರೆ. ನಿನ್ನೆ(ಮೇ 04) ರಾಜ್ಯದಲ್ಲಿ ಪ್ರಚಾರಕ್ಕೆ ಬಿಡುವು ನೀಡಿದ್ದ ಪ್ರಧಾನಿ ಇಂದು(ಮೇ 05 ಮತ್ತೆ ಮತಬೇಟೆಯ ಅಖಾಡಕ್ಕೆ ಇಳಿಯುತ್ತಿದ್ದಾರೆ. ತಮಕೂರು, ಬಳ್ಳಾರಿಯಲ್ಲಿ ಸಮಾವೇಶ ಮುಗಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಬೆಂಗಳೂರಿಗೆ (Bengaluru) ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಲ ರಸ್ತೆಗಳಲ್ಲಿ ವಾಹನನ ಸಂಚಾರ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: odi Road Show: ಶನಿವಾರ ಮಾತ್ರವಲ್ಲ ಭಾನುವಾರವೂ ಬೆಂಗಳೂರಿನಲ್ಲಿ ಮೋದಿ ರೋಡ್​ ಶೋ: ಇಲ್ಲಿದೆ ರೂಟ್​ ಮ್ಯಾಪ್

ಮೇ   7ರಂದು ರೋಡ್​ ಶೋ ಮಾಡಲು ಇಂದು ಸಂಜೆ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೀಗಾಗಿ ಇಂದು ಸಾಯಂಕಾಲ 5.30ರಿಂದ ರಾತ್ರಿ 7 ಗಂಟೆ ವರೆಗೆ ಈ ಕೆಳಕಂಡ ರಸ್ತೆಗಳ ಬದಲಿಗೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ವಾಹನ ಸವಾರರಿಗೆ ಬೆಂಗಳೂರು ನಗರ ಸಂಚಾರಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಯಾವೆಲ್ಲ ರಸ್ತೆಗಳು ನಿರ್ಬಂಧ?

  • ಹಳೆ ವಿಮಾನ ನಿಲ್ದಾಣ ರಸ್ತೆ
  • ಕೇಂಬ್ರಡ್ಜ್ ಲೇಔಟ್ ರಸ್ತೆ
  • ಇಂದಿರಾ ನಗರ 100 ಅಡಿ ರಸ್ತೆ
  • ಅರಳಿ ಕಟ್ಟೆ
  • ಎ.ಎಸ್.ಸಿ ಸೆಂಟರ್
  • ಟ್ರಿನಿಟಿ ವೃತ್ತ
  • ರಾಜಭವನ ರಸ್ತೆ​
  • ಎಂಜಿ ರಸ್ತೆ
  • ಡಿಕನ್​ಸನ್​ ರಸ್ತೆ
  • ಮಣಿಪಾಲ್ ಸೆಂಟರ್
  • ಕಬ್ಬನ್ ರಸ್ತೆ
  • ಬಿಆರ್​ವಿ ಜಂಕ್ಷನ್
  • ಸಿಟಿಓ ಜಂಕ್ಷನ್
  • ಇನ್​ಫೆಂಟ್ರಿ ರಸ್ತೆ

ಮೇಲಿನ ಎಲ್ಲಾ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂದಿಸಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಟ್ರಾಫಿಕ್ ಪೊಲೀಸ್ ಮನವಿ ಮಾಡಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:31 am, Fri, 5 May 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ