ಮೇ.03 ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಮಂಗಳೂರು-ಉಡುಪಿ ಹೆದ್ದಾರಿಯಲ್ಲಿ ಬದಲಿ ಸಂಚಾರ ವ್ಯವಸ್ಥೆ

|

Updated on: May 02, 2023 | 3:16 PM

ಬುಧವಾರ (ಮೇ.03) ರಂದು ಕರಾವಳಿಗೆ ಆಗಮಿಸಲಿದ್ದು, ಬೆಳಗ್ಗೆ 10.30 ಕ್ಕೆ ಮಂಗಳೂರಿನ ಮುಲ್ಕಿಯಲ್ಲಿ ನಡೆಯುವ ಬಿಜೆಪಿ ಬೃಹತ್ ಪ್ರಚಾರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಮೇ.03 ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಮಂಗಳೂರು-ಉಡುಪಿ ಹೆದ್ದಾರಿಯಲ್ಲಿ ಬದಲಿ ಸಂಚಾರ ವ್ಯವಸ್ಥೆ
ಪ್ರಧಾನಿ ನರೇಂದ್ರ ಮೋದಿ
Follow us on

ಮಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಹಿನ್ನೆಲೆ ಮತಯಾಚನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ರಾಜ್ಯ ಪ್ರವಾಸದಲ್ಲಿದ್ದು ಇಂದು ಮತ್ತು ನಾಳೆ (ಮೇ.02,03) ವಿವಿಧ ಜಿಲ್ಲೆಗಳಲ್ಲಿ ಅಬ್ಬರದ ಪ್ರಚಾರ ಮತ್ತು ರೋಡ್​ ಶೋ ನಡೆಸಲಿದ್ದಾರೆ. ಬುಧವಾರ (ಮೇ.03) ರಂದು ಕರಾವಳಿಗೆ ಆಗಮಿಸಲಿದ್ದು, ಬೆಳಗ್ಗೆ 10.30 ಕ್ಕೆ ಮಂಗಳೂರಿನ (Mangaluru) ಮುಲ್ಕಿಯಲ್ಲಿ ನಡೆಯುವ ಬಿಜೆಪಿ (BJP) ಬೃಹತ್ ಪ್ರಚಾರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ (Dakshina Kannada) ಮತ್ತು ಉಡುಪಿ (Udupi) ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಎರಡು ಜಿಲ್ಲೆಯಿಂದ ಎರಡುವರೆ ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ. ಇನ್ನು ಪ್ರಧಾನಿ ಮೋದಿಯವರು ಬರುವ ಹಿನ್ನೆಲೆ ಪ್ರತಿ ಬೂತ್ ಮಟ್ಟದಲ್ಲಿ ಬಿಜೆಪಿ ಸಭೆ ನಡೆಸಿದೆ.

ಪ್ರಾಧಾನಿ ಮೋದಿಯವರ ಹೆಲಿಕಾಪ್ಟರ್​ ಲ್ಯಾಂಡಿಂಗ್​​ಗಾಗಿ ಮೂರು ಹೆಲಿಪ್ಯಾಡ್​ಗಳನ್ನು ನಿರ್ಮಿಸಲಾಗಿದೆ. ಎನ್.ಎಮ್.ಪಿ.ಎ, ಎಮ್.ಆರ್.ಪಿ.ಎಲ್ ಒಳಗೆ ಎರಡು ಮತ್ತು ಮುಲ್ಕಿಯ ಕಾರ್ಯಕ್ರಮ ಸ್ಥಳದಲ್ಲಿ ಒಂದು ಹೆಲಿಪ್ಯಾಡ್ ಸಿದ್ದಪಡಿಸಲಾಗಿದೆ. ಮೂರರಲ್ಲಿ ಒಂದು ಹೆಲಿಪ್ಯಾಡ್​​ಗೆ ಪ್ರಧಾನಿ ಬಂದು ಇಳಿಯಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಕಾರ್ಯಕ್ರಮ ಸ್ಥಳಕ್ಕೆ ತೆರಳಲಿದ್ದಾರೆ. ಮುಲ್ಕಿ ಹೆಲಿಪ್ಯಾಡ್ ಮತ್ತು ಕಾರ್ಯಕ್ರಮ ಸ್ಥಳ ಸುಮಾರು ಅರ್ದ ಕಿಲೋಮೀಟರ್ ಅಂತರದಲ್ಲಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಕಾಲಿಗೆ ಬೀಳಬಾರದು, ಯಾಕೆ ಗೊತ್ತಾ? ಯತ್ನಾಳ್ ನೀಡಿದ ಕಾರಣ ಇಲ್ಲಿದೆ

ಮಂಗಳೂರು-ಉಡುಪಿ ಹೆದ್ದಾರಿಯಲ್ಲಿ ಬದಲಿ ಸಂಚಾರ ವ್ಯವಸ್ಥೆ

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಬರುವ ಎಲ್ಲಾ ರೀತಿಯ ವಾಹನಗಳು ಮುಲ್ಕಿ ವಿಜಯ ಸನ್ನಿಧಿಯ ಬಳಿ ಎಡಕ್ಕೆ ಚಲಸಿ ಕಿನ್ನಿಗೋಳಿ ಕಟೀಲು ಬಜಪೆ ಕಾವೂರು ಮಾರ್ಗವಾಗಿ ಮಂಗಳೂರು ಕಡೆಗೆ ಸಂಚರಿಸುವುದು. ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುವ ಎಲ್ಲಾ ರೀತಿಯ ವಾಹನಗಳು ಕೆ.ಪಿ.ಟಿ ಜಂಕ್ಷನ್ ನಲ್ಲಿ ಬಲಕ್ಕೆ ಚಲಿಸಿ ಕಾವೂರು ಬಜಪೆ ಕಟೀಲು ಕಿನ್ನಿಗೋಳಿ ಮುಲ್ಕಿ ಕಡೆಗೆ ಅಥವಾ ಕೂಳೂರು ಜಂಕ್ಷನ್‌ನಿಂದ ಬಲಕ್ಕೆ ಚಲಸಿ ಕಾವೂರು ಬಜಪೆ ಕಟೀಲು ಕಿನ್ನಿಗೋಳಿ ಮಾರ್ಗವಾಗಿ ಮುಲ್ಕಿ ಕಡೆಗೆ ಸಂಚರಿಸುವುದು.

ಮಂಗಳೂರು, ಸುರತ್ಕಲ್ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಹಳೆಯಂಗಡಿ ಜಂಕ್ಷನ್ ಬಳಿ ಬಲಕ್ಕೆ ತಿರುಗಿ ಪಕ್ಷಿಕೆರೆ ಎಸ್-ಕೋಡಿ ಮಾರ್ಗವಾಗಿ ಮುಲ್ಕಿ ಕಡೆಗೆ ಸಂಚರಿಸುವುದು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ