Karnataka Elections: ಚುನಾವಣಾ ಡ್ಯೂಟಿಗಾಗಿ ನಡುರಸ್ತೆಯಲ್ಲೇ ಸರ್ಕಾರಿ ವಾಹನ ವಶಕ್ಕೆ ಪಡೆಯುತ್ತಿರುವ ಪೊಲೀಸರು, ಆರ್​ಟಿಓ ಅಧಿಕಾರಿಗಳು!

ಪೊಲೀಸರು ಮತ್ತು ಆರ್​ಟಿಓ ಅಧಿಕಾರಿಗಳು ಗೂಂಡಗಳಂತೆ ವರ್ತಿಸಿದ್ದಾರೆ. ಮಾನಸಿಕವಾಗಿ ನಮಗೆ ಹಿಂಸೆ ಆಗುತ್ತದೆ. ದಯವಿಟ್ಟು ಖಾಸಗಿ ವಾಹನಗಳನ್ನು ಬಳಸಿಕೊಳ್ಳಿ ನಮ್ಮನ್ನು ಬಿಟ್ಟು ಬಿಡಿ ಎಂದು ಸರ್ಕಾರಿ ವಾಹನ ಚಾಲಕರ ಸಂಘ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಮನವಿ ಮಾಡಿದೆ.

Karnataka Elections: ಚುನಾವಣಾ ಡ್ಯೂಟಿಗಾಗಿ ನಡುರಸ್ತೆಯಲ್ಲೇ ಸರ್ಕಾರಿ ವಾಹನ ವಶಕ್ಕೆ ಪಡೆಯುತ್ತಿರುವ ಪೊಲೀಸರು, ಆರ್​ಟಿಓ ಅಧಿಕಾರಿಗಳು!
ಚುನಾವಣಾ ಆಯೋಗಕ್ಕೆ ದೂರು ನೀಡಿದ ಕರ್ನಾಟಕ ರಾಜ್ಯ ಸರ್ಕಾರಿ ವಾಹನ ಚಾಲಕರ ಸಂಘ (ಎಡ ಚಿತ್ರ)
Follow us
Rakesh Nayak Manchi
|

Updated on:Apr 05, 2023 | 10:23 PM

ಬೆಂಗಳೂರು: ಚುನಾವಣೆ (Karnataka Assembly Elections 2023) ಸಮಯದಲ್ಲಿ ಪೋಲಿಸರು ಮತ್ತು ಆರ್​ಟಿಓ (RTO) ಅಧಿಕಾರಿಗಳು ಸರ್ಕಾರಿ ವಾಹನ ಚಾಲಕರ ಮೇಲೆ ದೌರ್ಜನ್ಯ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಚುನಾವಣಾ ಡ್ಯೂಟಿಗೆ ಕಾರು ಬೇಕು ‌ಎಂದು ನಡು ರಸ್ತೆಯಲ್ಲಿ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ. ವಾಹನ ಕೊಡಲ್ಲವೆಂದರೆ ಹೆದರಿಸಿ ಬೆದರಿಸಿ ಕೀ ಕಸಿದುಕೊಂಡು ಕಳಿಸುತ್ತಿದ್ದಾರೆ. ಈ ವೇಳೆ ಪೊಲೀಸರು ಮತ್ತು ಆರ್​ಟಿಓ ಅಧಿಕಾರಿಗಳು ಚಾಲಕರಿಗೆ ಅವಾಚ್ಯ ಪದಗಳನ್ನು ಬಳಿಸಿ ರೌಡಿಗಳಂತೆ ವರ್ತಿಸಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಸರ್ಕಾರಿ ವಾಹನ ಚಾಲಕರ ಸಂಘವು (Karnataka Government Vehicle Drivers Association) ಚುನಾವಣಾ ಆಯೋಗಕ್ಕೆ (Elections Commission) ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.

ಪೊಲೀಸರು ಮತ್ತು ಆರ್​ಟಿಓ ಅಧಿಕಾರಿಗಳು ಕೇಳಿದಾಗ ವಾಹನ ನೀಡದಿದ್ದರೆ ಪೊಲೀಸರು ‌ಮತ್ತು ಆರ್​ಟಿಓ ಅಧಿಕಾರಿಗಳು ಬಿಡಲ್ಲ, ವಾಹನ ಕೊಟ್ಟರೆ ತಮ್ಮ ಇಲಾಖೆ ಮತ್ತು ಅಧಿಕಾರಿಗಳಿಂದ ಶಿಕ್ಷೆ ಎದುರಿಸಬೇಕಾಗಿದೆ. ವಾಹನಗಳನ್ನು ತೆಗೆದುಕೊಂಡು ಹೋದರೆ ಊಟ, ವಸತಿ ಕೊಡಲ್ಲ. ಡ್ಯೂಟಿ ಮಾಡಲು ಹೋದರೆ ಎಲೆಕ್ಷನ್ ಕಮೀಷನ್ ನೀಡುವ ಸಂಭಾವನೆಯನ್ನು ಇವರೇ ಹೊಡೆದು ತಿನ್ನುತ್ತಾರೆ. ಇದರಿಂದ ಮಾನಸಿಕವಾಗಿ ನಮಗೆ ಹಿಂಸೆ ಆಗುತ್ತದೆ. ದಯವಿಟ್ಟು ಖಾಸಗಿ ವಾಹನಗಳನ್ನು ಬಳಸಿಕೊಳ್ಳಿ ನಮ್ಮನ್ನು ಬಿಟ್ಟುಬಿಡಿ ಎಂದು ಚುನಾವಣಾ ಆಯೋಗಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪರ ಪ್ರಚಾರಕ್ಕಿಳಿದ ಕಿಚ್ಚ ಸುದೀಪ್: ಉತ್ತರ ಕರ್ನಾಟಕದ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್​ಗೆ ಡ್ಯಾಮೇಜ್!

ನಮ್ಮ ಮೇಲೆ ದೈಹಿಕ ದೌರ್ಜನ್ಯದ ಜೊತೆಗೆ ಮಾನಸಿಕ ಹಿಂಸೆ ಕೊಡುತ್ತಿದ್ದಾರೆ ಅಂತ ಕಿಡಿ ಕಾರಿದ್ದು, ನಿಯಮಗಳ ಪ್ರಕಾರ ಚುನಾವಣಾ ಸಮಯದಲ್ಲಿ ಸರ್ಕಾರಿ ವಾಹನಗಳ ಸದ್ಬಳಕೆ ಆಗಬೇಕು. ಆದರೆ ಸಂಬಂಧ ಪಟ್ಟ ಇಲಾಖೆಯ ಮುಖ್ಯಸ್ಥರಿಗೆ ಪತ್ರ ಬರೆದು ಆ ಮೂಲಕ ವಾಹನಗಳನ್ನು ಬಳಕೆ ಮಾಡಿಕೊಳ್ಳಬೇಕು. ಅದು ಬಿಟ್ಟು ಏಕಾಏಕಿ ಗೂಂಡಾಗಳ ಹಾಗೇ ನಡು ರಸ್ತೆಯಲ್ಲಿ ವಾಹನಗಳನ್ನು ತಡೆದು ವಶಪಡಿಸಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲದೇ ಅವಾಚ್ಯ ಶಬ್ದಗಳಿಂದ ನಮ್ಮನ್ನು ನಿಂದನೆ ಮಾಡಿ ಅವಮಾನಿಸಿದ್ದಾರೆ. ಹೀಗಾಗಿ ಬೈಸಿಕೊಂಡು ವಾಹನ ನೀಡಬೇಕಿದೆ. ಕಳೆದ ಒಂದೂವರೆ ತಿಂಗಳಿನಿಂದ ಎಲೆಕ್ಷನ್ ಡ್ಯೂಟಿ ಹೆಸರಲ್ಲಿ ನಮಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ. ಎಂದು ರಾಜ್ಯ ಸರ್ಕಾರ ಹಾಗೂ ಸ್ವಾಮ್ಯ ಸಂಫ ಸಂಸ್ಥೆಗಳ ವಾಹನ ಚಾಲಕರ ಒಕ್ಕೂಟದ ಅಧ್ಯಕ್ಷ ವೇಣುಗೋಪಾಲ್ ಅವರು ಅಸಮಾಧಾನ ಹೊರಹಾಕಿದ್ದಾರೆ.

ಒಂದೆಡೆ, ಖಾಸಗಿ ವಾಹನ ಚಾಲಕರ ಸಂಘವು ನಮ್ಮ ವಾಹನಗಳನ್ನು ಮುಟ್ಟಬೇಡಿ ಬಲವಂತವಾಗಿ ನೀವು ರೋಡ್​ಗಳಲ್ಲಿ ನಮ್ಮ ಕ್ಯಾಬ್​ಗಳನ್ನು ವಶಕ್ಕೆ ತೆಗೆದುಕೊಂಡರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರೆ, ಇನ್ನೊಂದೆಡೆ ಸರ್ಕಾರಿ ವಾಹನ ಚಾಲಕರ ಸಂಘವು ನಮ್ಮ ವಾಹನಗಳನ್ನು ಮುಟ್ಟಬೇಡಿ ಖಾಸಗಿ ವಾಹನಗಳನ್ನು ತೆಗೆದುಕೊಂಡು ಎಲೆಕ್ಷನ್ ಮಾಡಿ ಅಂತಿವೆ. ಆದರೆ ಆರ್​ಟಿಓ ಅಧಿಕಾರಿಗಳು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕಿದೆ.

ವರದಿ: ಕಿರಣ್ ಸೂರ್ಯ, ಟಿವಿ9 ಬೆಂಗಳೂರು

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:23 pm, Wed, 5 April 23

ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಜಮೀರ್ ಅಹ್ಮದ್ ಮಾಡಿದ ಕಾಮೆಂಟ್​​ಗೆ ನಾವ್ಯಾರೂ ಪ್ರತಿಕ್ರಿಯಿಸಿಲ್ಲ: ನಿಖಿಲ್
ಜಮೀರ್ ಅಹ್ಮದ್ ಮಾಡಿದ ಕಾಮೆಂಟ್​​ಗೆ ನಾವ್ಯಾರೂ ಪ್ರತಿಕ್ರಿಯಿಸಿಲ್ಲ: ನಿಖಿಲ್