ದಾವಣಗೆರೆ: ಕಾಂಗ್ರೆಸ್ ಶಾಸಕ ಶಾಮನೂರ ಶಿವಶಂಕರಪ್ಪ ಭಾವಚಿತ್ರವಿದ್ದ ಲಕ್ಷಾಂತರ ಮೌಲ್ಯದ ಅಡುಗೆ ಸಲಕರಣೆ ಪತ್ತೆ

ದಾವಣಗೆರೆಯ ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಭಗತ್ ಸಿಂಗ್ ನಗರದಲ್ಲಿ ಮತದಾರರಿಗೆ ಹಂಚಲೆಂದು ಸಂಗ್ರಹಿಸಿದ್ದ 7.19 ಲಕ್ಷ ರೂಪಾಯಿ ಮೌಲ್ಯದ ಅಡುಗೆ ಸಲಕರಣೆಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ದಾವಣಗೆರೆ: ಕಾಂಗ್ರೆಸ್ ಶಾಸಕ ಶಾಮನೂರ ಶಿವಶಂಕರಪ್ಪ ಭಾವಚಿತ್ರವಿದ್ದ ಲಕ್ಷಾಂತರ ಮೌಲ್ಯದ ಅಡುಗೆ ಸಲಕರಣೆ ಪತ್ತೆ
ಶಾಮನೂರು ಶಿವಶಂಕ್ರಪ್ಪ ಭಾವಚಿತ್ರವಿರುವ ಅಡುಗೆ ಸಲಕರಣೆ ಪತ್ತೆ
Follow us
ವಿವೇಕ ಬಿರಾದಾರ
|

Updated on:Mar 29, 2023 | 7:01 AM

ದಾವಣಗೆರೆ:  ದಾವಣಗೆರೆಯ (Davangere) ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಭಗತ್ ಸಿಂಗ್ ನಗರದಲ್ಲಿ ಮತದಾರರಿಗೆ ಹಂಚಲೆಂದು ಸಂಗ್ರಹಿಸಿದ್ದ 7.19 ಲಕ್ಷ ರೂಪಾಯಿ ಮೌಲ್ಯದ ಅಡುಗೆ ಸಲಕರಣೆಯನ್ನು ಪೊಲೀಸರು (Police) ಜಪ್ತಿ ಮಾಡಿದ್ದಾರೆ. ಅಡುಗೆ ಸಲಕರಣೆಗಳ ಮೇಲೆ ಕಾಂಗ್ರೆಸ್ ಶಾಸಕ ಶಾಮನೂರ ಶಿವಶಂಕರಪ್ಪ ಹಾಗೂ ಪುತ್ರ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭಾವಚಿತ್ರವಿದ್ದ ಅಡುಗೆ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾಡಜ್ಜಿ ಹನಮಂತಪ್ಪ ಎಂಬುವರ ವಿರುದ್ಧ ದೂರು ದಾಖಲಾಗಿದೆ.

ರಕ್ಷಣಾ ಸಿಬ್ಬಂದಿಗಾಗಿ ಮಾರಾಟಕ್ಕಿದ್ದ 4ಲಕ್ಷ ರೂ. ಮೌಲ್ಯದ ಮದ್ಯ ಜಪ್ತಿ

ಬಳ್ಳಾರಿ: ರಕ್ಷಣಾ ಸಿಬ್ಬಂದಿಗಾಗಿ ಮಾರಾಟಕ್ಕಿರುವ ಮದ್ಯದ ಬಾಟಲಿಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ಜಿಲ್ಲಾ ಅಬಕಾರಿ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ, ದುಬಾರಿ ಬೆಲೆಯ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ವಿಮ್ಸ್‌ ಹಿಂಭಾಗದಲ್ಲಿನ ವಿದ್ಯಾನಗರದ ನಿವಾಸಿ ಈಶ್ವರ ರವಿಚಂದ್ರ ಮನೆ ಮೇಲೆ, ಖಚಿತ ಮಾಹಿತಿ ಮೇರೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ರಕ್ಷಣಾ ಸಿಬ್ಬಂದಿಗಾಗಿ ಮಾರಾಟಕ್ಕಿದ್ದ ದುಬಾರಿ ಬೆಲೆಯ ಒಟ್ಟು 4.01ಲಕ್ಷ ರೂ. ಮೌಲ್ಯದ 142 ಮದ್ಯದ ಬಾಟಲ್‌ಗಳನ್ನು ವಶಪಡಿಸಿಕೊಂಡು, ಆರೋಪಿಯನ್ನು ಬಂಧಿಸಿದ್ದಾರೆ. ದಾಳಿ ವೇಳೆ ಅಬಕಾರಿ ನಿರೀಕ್ಷ ಕರಾದ ಜ್ಯೋತಿಬಾಯಿ, ಉಪನಿರೀಕ್ಷಕ ರುದ್ರೇಗೌಡ, ಗೌಡಪ್ಪ, ಪೇದೆಗಳಾದ ಖಾಜಾ ಹುಸೇನ್‌ ಪೀರನ್‌, ಸದ್ದಾಂ ಹುಸೇನ್‌, ವಾಹನ ಚಾಲಕಿ ಗಾಯತ್ರಿ ಇದ್ದರು.

ಇದನ್ನೂ ಓದಿ: ಲಕ್ಷಾಂತರ ಮೌಲ್ಯದ ಹೆಲ್ಮೆಟ್​, ಕ್ರೀಡಾ ಕಿಟ್​ ಪತ್ತೆ: ಕಾಂಗ್ರೆಸ್​ ನಾಯಕನಿಗೆ ಸೇರಿದ ದಾಖಲೆ ಇಲ್ಲದ ಹಣ ಜಪ್ತಿ

ಸಕ್ಕರೆ ಕಾರ್ಖಾನೆಯ ಗೋದಾಮಿನಲ್ಲಿ ರಾಶಿ ರಾಶಿ ಟೀ-ಶರ್ಟ್​ ಮತ್ತು ವಿವಿಧ ವಸ್ತುಗಳು ಪತ್ತೆ​

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಯರಗಲ್ ಮದರಿ ಬಳಿಯ ಬಾಲಾಜಿ ಸಕ್ಕರೆ ಕಾರ್ಖಾನೆ ಗೋದಾಮಿನಲ್ಲಿ ಪರವಾನಿಗೆ ಪಡೆಯದೆ ಸಂಗ್ರಹಿಸಿಟ್ಟಿದ್ದ ರಾಶಿ ರಾಶಿ ಟೀ-ಶರ್ಟ್ ಹಾಗೂ ಹಾಗೂ ಗೋಡೆ ಗಡಿಯಾರ​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಾಜಿ ವಿಧಾನ ಪರಿಷತ್ ಸದಸ್ಯಎಸ್ ಆರ್ ಪಾಟೀಲ್ ಭಾವಚಿತ್ರ ಇರುವ ಗೋಡೆ ಗಡಿಯಾರಗಳು ಮತ್ತು ಎಸ್​.ಆರ್​.ಪಿ ಭಾವಚಿತ್ರವಿರುವ ಟಿ-ಶರ್ಟ್​ಗಳು ಪತ್ತೆಯಾಗಿವೆ. ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಹಾಗೂ ಎಸ್ಪಿ ಹೆಚ್​.ಡಿ ಆನಂದಕುಮಾರ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಅಂದಾಜು ಎರಡೂವರೆ ಕೋಟಿ ರೂಪಾಯಿ ಮೌಲ್ಯದ 36,800 ಗೋಡೆ ಗಡಿಯಾರ, 50,000 ಟೀ-ಶರ್ಟ್ ಪತ್ತೆಯಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:57 am, Wed, 29 March 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ