ಕೋಲಾರದಲ್ಲಿ ಸಿದ್ದರಾಮಯ್ಯ ಬದಲಿಗೆ ಬೇರೆ ಅಭ್ಯರ್ಥಿ ರೆಡಿ, ಬಾದಾಮಿಯಲ್ಲಿ ಮತ್ತೆ ಚಿಗುರೊಡೆದ ಸಿದ್ದು ಅಭಿಮಾನಿಗಳ ಆಸೆ

ವರುಣಾದಿಂದ ಸ್ಪರ್ಧೆ ಮಾಡುವಂತೆ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ ನೀಡುತ್ತಿದ್ದಂತೆಯೇ ಇತ್ತ ಕೋಲಾರ ಹಾಗೂ ಬಾದಾಮಿಯಲ್ಲಿ ಮಹತ್ವದ ರಾಜಕೀಯವ ಬೆಳವಣಿಗೆಗಳು ನಡೆಯುತ್ತಿವೆ.

ಕೋಲಾರದಲ್ಲಿ ಸಿದ್ದರಾಮಯ್ಯ ಬದಲಿಗೆ ಬೇರೆ ಅಭ್ಯರ್ಥಿ ರೆಡಿ, ಬಾದಾಮಿಯಲ್ಲಿ ಮತ್ತೆ ಚಿಗುರೊಡೆದ ಸಿದ್ದು ಅಭಿಮಾನಿಗಳ ಆಸೆ
ಸಿದ್ದರಾಮಯ್ಯ
Follow us
ರಮೇಶ್ ಬಿ. ಜವಳಗೇರಾ
|

Updated on: Mar 19, 2023 | 2:03 PM

ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ(Karnataka Assembly Elections 2023) ಬಾದಾಮಿ(Badami ಬಿಟ್ಟು ಕೋಲಾರದಿಂದ(Kolar) ಅಖಾಡಕ್ಕಿಳಿಯಲು ಸಿದ್ದರಾಮಯ್ಯ(Siddarmaiah) ತೀರ್ಮಾನಿಸಿದ್ದರು. ಆದ್ರೆ, ರಾಹುಲ್ ಗಾಂಧಿ ಕೋಲಾರದಿಂದ ಬೇಡ, ವರುಣಾದಿಂದಲೇ ಸ್ಪರ್ಧಿಸಿ ಎಂದು ಸಿದ್ದರಾಮಯ್ಯಗೆ ಸಲಹೆ ನೀಡಿದ್ದಾರೆ. ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಬೇಡ. ಕೋಲಾರಕ್ಕಿಂತಲೂ ವರುಣಾ ಕ್ಷೇತ್ರವೇ ಸೇಫ್ ಇದೆ. ಆಂತರಿಕ ಸಮೀಕ್ಷೆಗಳಲ್ಲೂ ಕೋಲಾರದಲ್ಲಿ ಗೆಲುವು ಕಷ್ಟ ಅಂತಿದೆ. ಹೀಗಾಗಿ ವರುಣಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವುದು ಉತ್ತಮ ಎಂದು ರಾಹುಲ್ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವ ಕ್ಷೆತ್ರದಿಂದ ಸ್ಪರ್ಧಿಸಬೇಕೆಂದು ಸಿದ್ದರಾಮಯ್ಯಗೆ ದಿಕ್ಮುತೋಚದಂತಾಗಿದೆ. ರಾಹುಲ್ ಸಲಹೆ ಬೆನ್ನಲ್ಲೇ ಕೋಲಾರದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದರೆ ಮತ್ತೊಂದೆಡೆ ಬಾದಾಮಿಯಲ್ಲಿ ಸಿದ್ದರಾಮಯ್ಯ ಅಭಿಮಾನಿಗಳ ಆಸೆ ಮತ್ತೆ ಚಿಗುರೊಡೆದಿದೆ.

ಇದನ್ನೂ ಓದಿ: Siddaramaiah: ಕೋಲಾರ ಕಣದಿಂದ ಹಿಂದೆ ಸರಿದ ಸಿದ್ದರಾಮಯ್ಯ; ಎರಡು ದಿನಗಳಲ್ಲಿ ಅಂತಿಮ ನಿರ್ಧಾರ

ಕೋಲಾರದಲ್ಲಿ ಪರ್ಯಾಯ ಅಭ್ಯರ್ಥಿ ಜತೆ ಡಿಕೆಶಿ ಚರ್ಚೆ

ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿಯುವ ಮುನ್ಸೂನೆಗಳು ಸಿಕ್ಕಿವೆ. ಇದಕ್ಕೆ ಪೂರಕವೆಂಬಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಅವರೊಂದಿಗೆ ಮಾತನಾಡಿದ್ದು, ಚುನಾವಣೆಗೆ ಸಿದ್ದವಾಗುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಗೋವಿಂದಗೌಡ ಕೋಲಾರ ಹಾಗೂ ಶಿಡ್ಲಘಟ್ಟ ಕ್ಷೇತ್ರದ ಆಕಾಂಕ್ಷಿಯಾಗಿದ್ದರು. ಆದ್ರೆ, ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಾರೆ ಎಂದು ತಿಳಿಯುತ್ತಿದ್ದಂತೆಯೇ ಅವರು ಸೈಡ್​ ಆಗಿದ್ದರು. ಇದೀಗ ರಾಹುಲ್​ ಗಾಂಧಿಯವರು ಕೋಲಾರದಲ್ಲಿ ನಿಲ್ಲದಂತೆ ಸಿದ್ದರಾಮಯ್ಯಗೆ ಸಲಹೆ ನೀಡಿರುವ ಬೆನ್ನಲ್ಲೇ ಗೋವಿಂದಗೌಡ ಅವರು ಕೋಲಾರಿಂದ ಅಖಾಡಕ್ಕಿಳಿಯುಲು ಸಜ್ಜಾಗಿದ್ದಾರೆ.

ಈ ಕುರಿತು ನಮ್ಮ‌ ಪ್ರತಿ‌ನಿಧಿ ರಾಜೇಂದ್ರಸಿಂಹ ಬ್ಯಾಲಹಳ್ಳಿ, ಗೋವಿಂದಗೌಡ ಅವರನ್ನು ಮತನಾಡಿಸಿದ್ದು, ಡಿಕೆಶಿ ಶಿವಕುಮಾರ್ ಅವರು ಎರಡು ದಿನಕ್ಕೊಮ್ಮೆ ನಮ್ಮ ಜೊತೆ ಮಾತನಾಡುತ್ತಾರೆ. ಕಾಂಗ್ರೆಸ್ ಪಕ್ಷ ಗೆಲ್ಲುವುದು ಅವರಿಗೆ ಮುಖ್ಯವಾಗಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೋಲಾರದಿಂದ‌ ಇನ್ನು ಹಿಂದೆ ಸರಿದಿಲ್ಲ. ಹೈಕಮಾಂಡ್ ಇನ್ನು ಸ್ಪಷ್ಟವಾಗಿ‌ ಎಲ್ಲೂ ಹೇಳಿಲ್ಲ. ನಾನು ಒಬ್ಬ ಅಕಾಂಕ್ಷಿಯಾಗಿದ್ದಾನೆ. ಆದ್ರೆ, ಸಿದ್ದರಾಮಯ್ಯ ಅವರು ಕೋಲಾರ ಕ್ಷೇತ್ರದಿಂದ ರೂಲ್ಡ್​ ಔಟ್ ಆಗಿಲ್ಲ. ಅವರು ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಇಂಗಿತ‌ ನಮ್ಮಗಿದೆ.

ಸಿದ್ದು ಅಭಿಮಾನಿಗಳಲ್ಲಿ ಮತ್ತೆ ಚಿಗುರೊಡೆದ ಆಸೆ

ಈ ಹಿಂದೆ ಬಾದಾಮಿಯಿಂದ ಸ್ಪರ್ಧೆ ಮಾಡುವುದಿಲ್ಲ. ಬದಲಿಗೆ ಕೋಲಾರಿಂದ ಸ್ಪರ್ಧಿಸುವೇ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಬಾದಾಮಿಯಿಂದಲೇ ಮತ್ತೆ ಸ್ಪರ್ಧೆ ಮಾಡಬೇಕು ಎಂದು ಕ್ಷೇತ್ರದ ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರು ಬೆಂಗಳೂರಿನ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿ ಆಗ್ರಹಿಸಿದ್ದರು. ಬಾದಾಮಿಯಿಂದ ಸುಮಾರು 250ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸಿದ್ದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಗ್ರಹಿಸಿದ್ದರು. ಇದೀಗ ಕೋಲಾರ ಸೇಫ್ ಅಲ್ಲ ಅಂದ ಮೇಲೆ ಬಾದಾಮಿಯಿಂದ ಸ್ಪರ್ಧೆ ಮಾಡಬೇಕು ಎಂದು ಮತ್ತೆ ಅಭಿಮಾನಿಗಳು ಸಿದ್ದರಾಮಯ್ಯನವರನ್ನು ಒತ್ತಾಯಿಸುತ್ತಿದ್ದಾರೆ.

ಇದರ ಮಧ್ಯೆ ಇದೇ ಮಾರ್ಚ್​ 24 ರಂದು ಸಿದ್ದರಾಮಯ್ಯ ತಮ್ಮ ಬಾದಾಮಿ ಕ್ಷೇತ್ರ ಪ್ರವಾಸ ಕೈಗೊಂಡಿದ್ದು, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಅಡಿಗಲ್ಲು ಹಾಕಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಾದಾಮಿ ಎಪಿಎಂಸಿ ಆವರಣದಲ್ಲಿ ಬೃಹತ್​ ಕಾರ್ಯಕ್ರಮದ ಸಿದ್ಧತೆಗಳು ನಡೆದಿವೆ. ಮಾ.24ರಂದು ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಸಿದ್ದರಾಮಯ್ಯ ಮತ್ತೆ ಬಾದಾಮಿಯದ ಸ್ಪರ್ಧೆ ಮಾಡುವಂತೆ ಒತ್ತಡ ಹೇರಲು ಅಭಿಮಾನಿಗಳು ತೀರ್ಮಾನಿಸಿದ್ದಾರೆ. ಒಂದು ವೇಳೆ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೂ ಎರಡನೇ ಕ್ಷೇತ್ರ ಬಾದಾಮಿ ಆಗಲಿ ಎನ್ನುವುದು ಅಭಿಮಾನಿಗಳ ಮಾತಗಳಾಗಿವೆ. ಈ ಬಗ್ಗೆ ಮತ್ತೊಮ್ಮೆ ಬೆಂಗಳೂರಿಗೆ ತೆರಳಿ ಒತ್ತಾಯಿಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಾ. 24 ರಂದು ಸಿದ್ದರಾಮಯ್ಯ ಕೋಲಾರ ಸ್ಪರ್ಧೆ ನಿರ್ಧಾರ ಬದಲಾವಣೆ ಮಾಡುತ್ತಾರಾ ಎನ್ನುವ ಕುತೂಹಲ ಮೂಡಿಸಿದೆ.

ಒಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವುದು ಮತ್ತೆ ಕುತೂಹಲಕ್ಕೆ ಕಾರಣವಾಗಿದೆ.

ಇನ್ನಷ್ಟು ರಾಜಕೀಯ ಹಾಗೂ ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ