Karnataka Assembly Election 2023: ಮೈಸೂರಲ್ಲಿ ಮತಕ್ಕಾಗಿ ಮಕ್ಕಳ ಮೂಲಕ ಹಣ-ಹೆಂಡ ಹಂಚಿಕೆ

ರಾಜಕಾರಣಿಗಳು ಪ್ರಚಾರಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳುತ್ತಿದ್ದು, ಮಕ್ಕಳ ಕೈಯಲ್ಲಿ ಹಣ, ಗಿಫ್ಟ್​​ಗಳನ್ನು ಕೊಟ್ಟು, ಸೂಚಿಸಿದ ಮತದಾರರ ಮನೆಗೆ ಹೋಗಿ ಕೊಟ್ಟು ಬಾ ಎನ್ನುವ ಮೂಲಕ ಅಡ್ಡ ದಾರಿ ಹಿಡಿದಿದ್ದಾರೆ.

Karnataka Assembly Election 2023: ಮೈಸೂರಲ್ಲಿ ಮತಕ್ಕಾಗಿ ಮಕ್ಕಳ ಮೂಲಕ ಹಣ-ಹೆಂಡ ಹಂಚಿಕೆ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Apr 03, 2023 | 10:51 AM

ಮೈಸೂರು: ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ (Model Code of Conduct) ಜಾರಿಯಲ್ಲಿದ್ದು, ರಾಜಕಾರಣಿಗಳ (Politicians) ಕೈ ಕಟ್ಟಿದಂತಾಗಿದೆ. ಚುನಾವಣೆ ಸಂದರ್ಭದಲ್ಲಿ ಜನರಿಗೆ ಆಮಿಷಗಳನ್ನು ಒಡ್ಡಲು ರಾಜಕಾರಿಣಿಗಳು ಮುಂದಾಗಿದ್ದಾರೆ. ಆದರೆ ಚುನಾವಣಾ ಅಧಿಕಾರಿಗಳ ಹದ್ದಿನ ಕಣ್ಣಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈಗಾಗಲೆ ಚುನಾವಣಾ ಅಧಿಕಾರಿಗಳ (Election Commission Officers) ಸೂಚನೆ ಮೇರೆಗೆ ರಾಜ್ಯಾದ್ಯಂತ ಪೊಲೀಸರು, ಅಬಕಾರಿ ಇಲಾಖೆ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮೈಯಲ್ಲಾ ಕಣ್ಣಾಸಿಕೊಂಡು ಸುತ್ತಿದ್ದು, ಸ್ವಲ್ಪ ಅನುಮಾನ ಬಂದರೂ ದಾಳಿ ಮಾಡುತ್ತಿದ್ದಾರೆ. ಆದರೆ ಅಭ್ಯರ್ಥಿಗಳು ಹದ್ದಿನ ಕಣ್ಣನನ್ನು ತಪ್ಪಿಸಿ ತಮ್ಮ ಪ್ರಚಾರಕ್ಕಾಗಿ ಮಕ್ಕಳನ್ನು (Children) ಬಳಸಿಕೊಳ್ಳುತ್ತಿದ್ದಾರೆ. ಹೌದು ಮಕ್ಕಳ ಕೈಯಲ್ಲಿ ಹಣ, ಗಿಫ್ಟ್​​ಗಳನ್ನು ಕೊಟ್ಟು, ಸೂಚಿಸಿದ ಮತದಾರರ ಮನೆಗೆ ಹೋಗಿ ಕೊಟ್ಟು ಬಾ ಎನ್ನುವ ಮೂಲಕ ಅಡ್ಡ ದಾರಿ ಹಿಡಿದಿದ್ದಾರೆ.

ಈಗ ಬೇಸಗೆ ರಜೆ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ತಮ್ಮ ಪ್ರಚಾರಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳುತ್ತಿದ್ದಾರೆ. ತಮ್ಮ ಪರವಾಗಿ ಮತ ಚಲಾಯಿಸುವಂತೆ ಮಕ್ಕಳ ಕೈಯಿಂದ ಹಣ ಮತ್ತು ಉಡುಗೊರೆಯನ್ನು ಜನರಿಗೆ ವಿತರಿಸುತ್ತಿದ್ದಾರೆ. ಈ ಹಿಂದೆ ಮೈಸೂರು ಗ್ರಾಮ ಪಂಚಾಯಿತಿ ಚುನಾವಣೆ ಸಮಯದಲ್ಲಿ ಈ ರೀತಿ ಕಂಡು ಬಂದಿತ್ತು.

ಈ ವೇಳೆ 10 ವರ್ಷದ ಒಳಗಿನ ಮಕ್ಕಳಿಗೆ 500 ರೂ. ಅನ್ನು ನೀಡಿ ಪ್ರತಿ ಕುಟುಂಬಕ್ಕೆ ನೀಡುವಂತೆ ಸೂಚಿಸಲಾಗಿತ್ತು. ಮಕ್ಕಳ ಈ ಕೆಲಸಕ್ಕೆ ಕೊನೆಗೆ ಅಭ್ಯರ್ಥಿಗಳು ಹಣವನ್ನು ನೀಡುತ್ತಿದ್ದರು. ಮಕ್ಕಳು ಪೊಲೀಸರು ಹಾಗೂ ಅಧಿಕಾರಿಗಳ ಕೈಗೆ ಸಿಕ್ಕಿ ಬೀಳದ ಕಾರಣ ರಾಜಕಾರಣಿಗಳು ಇದನ್ನು ಮತ್ತೊಮ್ಮೆ ಪ್ರಯೋಗಿಸಲು ಯೋಚಿಸುತ್ತಿದ್ದಾರೆ ಎಂದು ಓರ್ವ ಸರ್ಕಾರಿ ಶಾಲಾ ಶಿಕ್ಷಕರು ಹೇಳಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ದಿ ನ್ಯೂ ಇಂಡಿಯನ್​ ಎಕ್ಸಪ್ರೆಸ್​ ವರದಿ ಮಾಡಿದೆ.

ಇದನ್ನೂ ಓದಿ: ಇಂದು ಜೆಡಿಎಸ್​ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ, ಹಾಸನ ಟಿಕೆಟ್ ಯಾರಿಗೆ?

ಮೈಸೂರು ಜಿಲ್ಲೆ ಮಾತ್ರವಲ್ಲದೆ, ಹಳೆ ಮೈಸೂರು ಭಾಗದ, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿಯೂ ಕೂಡ ಮಕ್ಕಳನ್ನು ಈ ರೀತಿ ಅಭ್ಯರ್ಥಿಗಳು ಬಳಸಿಕೊಳ್ಳುತ್ತಿದ್ದಾರೆ. ಇಷ್ಟೆ ಅಲ್ಲದೆ ರಾಜಕಾರಣಿಗಳ ಏಜೆಂಟ್​ಗಳು ಗ್ರಾಮಗಳಲ್ಲಿ ಮತದಾರರಿಗೆ ಮದ್ಯ, ಹಣ ಪೂರೈಕೆ ಮಾಡಲು ಮಕ್ಕಳಿಗೆ 100 ರೂ. ನೀಡುತ್ತಿದ್ದಾರೆಂದು ಗುಂಡ್ಲುಪೇಟೆ ನಿವಾಸಿ ಚಿಕ್ಕಣ್ಣ ಎಂಬುವರು ಹೇಳಿದ್ದಾರೆ.

ಅಲ್ಲದೆ, ಚುನಾವಣಾ ಅಧಿಕಾರಿಗಳು ಸಾಮಾನ್ಯವಾಗಿ ಆಹಾರ ವಿತರಣಾ ಕಾರ್ಯನಿರ್ವಾಹಕರ ಮೇಲೆ ನಿಗಾ ಇಡದ ಕಾರಣ ರಾಜಕಾರಣಿಗಳ ಏಜೆಂಟ್​ಗಳು ಫುಡ್ ಡೆಲಿವರಿ ಸಂಸ್ಥೆಗಳು, ಡೆಲಿವರಿ ಅಪ್ಲಿಕೇಶನ್‌ಗಳು, ಪಿಕ್-ಅಪ್ ಮತ್ತು ಡ್ರಾಪ್ ಸೇವಾ ಪೂರೈಕೆದಾರರನ್ನೂ ಬಳಸಿಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ.

ಈ ಹಿಂದೆ, ಈ ಪ್ರಯೋಗವನ್ನು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ನಡೆಸಲಾಗಿತ್ತು. ಆಗ ನಮ್ಮ ಡೆಲವೆರಿ ಸಹೋದ್ಯೋಗಿ ಕೈಯಲ್ಲಿ ಆಹಾರದ ಜೊತೆಗೆ ಮದ್ಯದ ಬಾಟಲಿಯನ್ನೂ ರವಾನಿಸಲಾಗಿತ್ತು. ಈ ಸಂಬಂಧ ಡೆಲೆವರಿ ಮಾಡುವ ವ್ಯಕ್ತಿಗೆ ಹೆಚ್ಚಿನ ಹಣವನ್ನು ನೀಡಲಾಗಿತ್ತು. ಅಲ್ಲದೇ ಮುಂಬರುವ ಚುನಾವಣೆ ಸಮಯದಲ್ಲಿ ಮತ್ತೆ ಇವರನ್ನು ಬಳಕೆ ಮಾಡಿಕೊಳ್ಳಲು ದೂರವಾಣಿ ಸಂಖ್ಯೆಗಳನ್ನು ತೆಗೆದುಕೊಂಡಿದ್ದರು. ಇಂತಹ ಚಟುವಟಿಕೆಗಳ ಮೇಲೂ ನಿಗಾ ಇಡುವಂತೆ ಆಹಾರ ವಿತರಣಾ ಕಾರ್ಯನಿರ್ವಾಹಕರೊಬ್ಬರು ಹೇಳಿದ್ದಾರೆ.

ಚುನಾವಣಾ ಪ್ರಚಾರ ಕಾರ್ಯಗಳಿಗೆ ಮಕ್ಕಳ ಬಳಕೆ ಮಾಡದಂತೆ ಆದೇಶ ಹೊರಡಿಸಲಾಗಿದ್ದು, ಒಂದು ವೇಳೆ ಆದೇಶ ಉಲ್ಲಂಘನೆ ಮಾಡಿದರೆ ಕ್ರಮಕೈಗೊಳ್ಳಲಾಗುವುದು. ಮತ್ತು ಅಂತಹ ಚಟುವಟಿಕೆಗಳಿಗೆ ಮಕ್ಕಳ ದುರುಪಯೋಗವನ್ನು ಪರಿಶೀಲಿಸಲು ಬೂತ್ ಮಟ್ಟದ ಸಮಿತಿಗಳನ್ನು ರಚಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ರಾಜೇಂದ್ರ ತಿಳಿಸಿದ್ದಾರೆ.

ಆಹಾರ ವಿತರಣಾ ಕಾರ್ಯನಿರ್ವಾಹಕರ ಬಳಕೆಯ ಬಗ್ಗೆ ಮಾತನಾಡಿ, ವಿಜಿಲೆನ್ಸ್ ತಂಡವು ಅಂತಹ ಎಲ್ಲಾ ಚಟುವಟಿಕೆಗಳ ಮೇಲೆ ನಿಗಾವಹಿಸಿದೆ. ಅಂತಹ ಚಟುವಟಿಕೆಗಳು ವರದಿಯಾದಾಗ, ಕಠಿಣ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ನಿಯಮ ಉಲ್ಲಂಘಿಸಿದ ಆರು ಮದ್ಯದಂಗಡಿಗಳ ಪರವಾನಿಗೆಯನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:41 am, Mon, 3 April 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ