AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಮತದಾನ: ಗಡಿ ಭಾಗದಲ್ಲಿ ಸೆಕ್ಯುರಿಟಿ ಹೇಗಿದೆ? ಮಾಹಿತಿ ಇಲ್ಲಿದೆ

ರಾಜ್ಯ ವಿಧಾನಸಭೆ ಚುನಾವಣೆ ಕಾವು ಜೋರಾಗಿದೆ. ಬಹಿರಂಗ ಪ್ರಚಾರ ನಿನ್ನೆ(ಮೇ.8) ಕೊನೆಯಾಗಿದ್ದು, ನಾಳೆ ಮತದಾನ ನಡೆಯಲಿದೆ. ಈ ಹಿನ್ನಲೆ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಬೀಗಿ ಬಂದೋಬಸ್ತ್​ ಕೈಗೊಳ್ಳಲಾಗಿದೆ. ಹೊರ ರಾಜ್ಯದಿಂದ ಬರುವ ವಾಹನಗಳ ಮೇಲೆ ನಿಗಾವಹಿಸಲಾಗಿದ್ದು, ಪ್ರತಿಯೊಂದು ವಾಹನವನ್ನ ತಪಾಸಣೆ ಮಾಡುವ ಮೂಲಕ ರಾಜ್ಯಕ್ಕೆ ಪ್ರವೇಶ ಮಾಡಿಕೊಳ್ಳಲಾಗುತ್ತಿದೆ.

ನಾಳೆ ಮತದಾನ:  ಗಡಿ ಭಾಗದಲ್ಲಿ ಸೆಕ್ಯುರಿಟಿ ಹೇಗಿದೆ? ಮಾಹಿತಿ ಇಲ್ಲಿದೆ
ಉತ್ತರ ಕನ್ನಡ ಗೋವಾ ಚೆಕ್​​ಪೋಸ್ಟ್​
ಕಿರಣ್ ಹನುಮಂತ್​ ಮಾದಾರ್
|

Updated on: May 09, 2023 | 9:32 AM

Share

ಉತ್ತರ ಕನ್ನಡ: ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Election) ಕಾವು ಜೋರಾಗಿದೆ. ಬಹಿರಂಗ ಪ್ರಚಾರ ನಿನ್ನೆ(ಮೇ.8) ಕೊನೆಯಾಗಿದ್ದು, ನಾಳೆ ಮತದಾನ ನಡೆಯಲಿದೆ. ಈ ಹಿನ್ನಲೆ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಬೀಗಿ ಬಂದೋಬಸ್ತ್​ ಕೈಗೊಳ್ಳಲಾಗಿದೆ. ಹೊರ ರಾಜ್ಯದಿಂದ ಬರುವ ವಾಹನಗಳ ಮೇಲೆ ನಿಗಾವಹಿಸಲಾಗಿದ್ದು, ಪ್ರತಿಯೊಂದು ವಾಹನವನ್ನ ತಪಾಸಣೆ ಮಾಡುವ ಮೂಲಕ ರಾಜ್ಯಕ್ಕೆ ಪ್ರವೇಶ ಮಾಡಿಕೊಳ್ಳಲಾಗುತ್ತಿದೆ. ಚುನಾವಣೆ ಸಿಬ್ಬಂದಿ, ಪೊಲೀಸ್, ಅಬಕಾರಿ ಸೇರಿದಂತೆ 10 ಕ್ಕೂ ಹೆಚ್ಚು ಸಿಬ್ಬಂದಿಗಳನ್ನ ಗಡಿಯಲ್ಲಿ ನಿಯೋಜನೆ ಮಾಡಲಾಗಿದೆ. ಗೋವಾದಲ್ಲಿ ಕಡಿಮೆ ದರದಲ್ಲಿ ಮದ್ಯ ಸೀಗುವ ಕಾರಣ ಗೋವಾ ರಾಜ್ಯದೊಂದಿಗೆ ಗಡಿ ಹಂಚಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಯ ಚೆಕ್ ಪೋಸ್ಟ್‌ನಲ್ಲಿ ಹದ್ದಿನ ಕಣ್ಣು ಇಡಲಾಗಿದೆ.

ಇನ್ನು ಜಿಲ್ಲೆಯಲ್ಲಿ 11,94,714 ಲಕ್ಷ ಮತದಾರರಿದ್ದು, 1435 ಮತಗಟ್ಟೆಗಳನ್ನ ತೆರೆಯಲಾಗಿದೆ. ಅದರಲ್ಲಿ 287 ಅತಿ ಸೂಕ್ಷ್ಮ ಮತಗಟ್ಟೆಗಳಿವೆ. ಇನ್ನು ಚುನಾವಣೆ ಕರ್ತವ್ಯಕ್ಕೆ 6416 ಅಧಿಕಾರಿಗಳನ್ನ ನೇಮಕ ಮಾಡಲಾಗಿದೆ. 2059 ಪೊಲೀಸ್​ ಸಿಬ್ಬಂದಿಗಳನ್ನ ಹಾಗೂ 18 ಸಿಆರ್​ಪಿಎಫ್ ಅವರನ್ನ​ ನಿಯೋಜನೆ ಮಾಡಲಾಗಿದೆ. ಇನ್ನು ನೀತಿ ಸಂಹಿತೆ ಶುರುವಾದಾಗಿನಿಂದ 1,70,93,985 ಹಣವನ್ನ ಈವರಗೆ ಜಪ್ತಿ ಮಾಡಲಾಗಿದ್ದು, 2,11,13,395 ಮದ್ಯ, 1,44,000 ಬೆಲೆ ಬಾಳುವ ಮಾದಕ ವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ. ಇನ್ನು ಜಿಲ್ಲೆಯ ಕುಮಟಾ ತಾಲೂಕಿನA.V ಬಿಳಿಗಾ ಕಾಮರ್ಸ್ ಕಾಲೇಜಿನಲ್ಲಿ ಮೇ.13 ರಂದು ಮತಎಣಿಕೆ ನಡೆಯುತ್ತದೆ.

ಇದನ್ನೂ ಓದಿ:Karnataka Election: ವಿಧಾನಸಭೆ ಚುನಾವಣೆಗೆ ವಿಶೇಷ ರೈಲು, ಹೆಚ್ಚುವರಿ ಕೋಚ್; ವಿವರ ಇಲ್ಲಿದೆ

ಇನ್ನು ಉತ್ತರ ಕನ್ನಡ ಜಿಲ್ಲೆಯು ರಾಜ್ಯದಲ್ಲಿಯೇ ಅತೀ ಹೆಚ್ಚು ತಾಲೂಕುಗಳನ್ನ ಹೊಂದಿದ ಜಿಲ್ಲೆಯಾಗಿದೆ. ಇದರಲ್ಲಿ 6 ವಿಧಾನಸಭಾ ಕ್ಷೇತ್ರಗಳಿದ್ದು, ಈ ಬಾರಿ ತೀವ್ರ ಕುತೂಹಲ ಮೂಡಿಸಿದೆ. ಮತದಾರ ಪ್ರಭುಗಳು ಯಾರಿಗೆ ಒಲಿಯಲಿದ್ದಾರೆಂದು ಕಾದು ನೋಡಬೇಕಿದೆ. ಜಿಲ್ಲೆಯು ಗೋವಾ ಗಡಿ ಭಾಗವನ್ನ ಹೊಂದಿಕೊಂಡಿದ್ದು, ಇಲ್ಲಿ ಕಡಿಮೆ ದರದಲ್ಲಿ ಮದ್ಯ ಸೀಗುವ ಹಿನ್ನಲೆ ಹದ್ದಿನ ಕಣ್ಣು ಇಡಲಾಗಿದೆ.  ಗೋವಾದಿಂದ ಬರುವ ಪ್ರತಿಯೊಂದು ವಾಹನವನ್ನ ಚೆಕ್​ ಮಾಡಿಯೇ ಪ್ರವೇಶ ನೀಡಲಾಗುತ್ತಿದೆ. ನೀತಿ ಸಂಹಿತೆ ಜಾರಿಯಾದಾಗಿನಿಂದ ಈವೆರೆಗೂ ಅಧಿಕ ಮದ್ಯವನ್ನ ಸೀಜ್​ ಮಾಡಲಾಗಿದೆ. ಈ ಕಾರಣಕ್ಕೆ ಇಂದು ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದೆ.

ಇನ್ನಷ್ಟು ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ