Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಬಿಜೆಪಿಗೆ ಯಾವುದೇ ಹೊಡೆತ ಆಗಲ್ಲ; ಪ್ರಲ್ಹಾದ್ ಜೋಶಿ

ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಸೇರಿರುವುದರಿಂದ ಬಿಜೆಪಿಗೆ ಯಾವುದೇ ಹೊಡೆತ ಆಗುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

Follow us
Ganapathi Sharma
|

Updated on:Apr 20, 2023 | 9:14 PM

ಬೆಳಗಾವಿ: ಜಗದೀಶ್ ಶೆಟ್ಟರ್ (Jagadish Shettar) ಅವರು ಕಾಂಗ್ರೆಸ್ ಸೇರಿರುವುದರಿಂದ ಬಿಜೆಪಿಗೆ ಯಾವುದೇ ಹೊಡೆತ ಆಗುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Josh) ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ಮತದಾರರು ಪಕ್ಷ ನೋಡಿ ಮತ ನೀಡುತ್ತಾರೆ. ಹತಾಶೆಯಿಂದ ಶೆಟ್ಟರ್​ ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ. ನಿಪ್ಪಾಣಿಗೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಯೋಗಿ ಆದಿತ್ಯನಾಥ್​ ಆಗಮಿಸಲಿದ್ದಾರೆ. ಡಬಲ್​ ಎಂಜಿನ್ ಸರ್ಕಾರದ ಕಾರ್ಯಗಳನ್ನು ಜನರು ಅರಿತಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್​​ವರು​ ಅಧಿಕಾರಕ್ಕೆ ಬಂದರೆ ಬಿಜೆಪಿ ನೀಡಿರುವ ಮೀಸಲಾತಿ ರದ್ದು ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಹೀಗಾಗಿ ಮತದಾರರು ಬಿಜೆಪಿ ಪರವಾಗಿದ್ದಾರೆ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಕಾಂಗ್ರೆಸ್ 130 ಸ್ಥಾನ ಗೆಲ್ಲಲಿದೆ

ಈ ಮಧ್ಯೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಜಗದೀಶ ಶೆಟ್ಟರ್, ಆಂತರಿಕ ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಪಕ್ಷ​ 130ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂಬುದು ತಿಳಿದುಬಂದಿದೆ ಎಂದು ಹೇಳಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಾತ್ರವಲ್ಲದೆ ಬೇರೆ ಜಿಲ್ಲೆಗಳಿಂದಲೂ ಚುಣಾವಣಾ ಪ್ರಚಾರಕ್ಕೆ ಆಹ್ವಾನಿಸುತ್ತಿದ್ದಾರೆ. ಕಾಂಗ್ರೆಸ್​ ಪಕ್ಷಕ್ಕೆ ಜನ ಬೆಂಬಲ ದೊಡ್ಡದಾಗಿದೆ. ಧಾರವಾಡ ಜಿಲ್ಲೆಯ 7 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ.

ಇದನ್ನೂ ಓದಿ: Karnataka Polls: ಲಿಂಗಾಯತ ವಿರೋಧ ಎದುರಿಸಲು ಬಿಜೆಪಿಗೆ ಯಡಿಯೂರಪ್ಪ ಗುರಾಣಿ; ಬೆಳಗಾವಿ ಬಂಡಾಯ ತಣಿಸಿದ ಸಂತೋಷ್ ತಂತ್ರ

ನನ್ನ ಬಗ್ಗೆ ಮಾತನಾಡಲು ಬಿಜೆಪಿಯ ಕೆಎಸ್ ಈಶ್ವರಪ್ಪಗೆ ಒತ್ತಡ ಇರಬಹುದು. ಮೊನ್ನೆ ನನಗೆ ಪತ್ರ ಬರೆದಿದ್ದರು. ಇದು ಪಕ್ಷದ ಒತ್ತಡದಿಂದ ಎಂದು ಶೆಟ್ಟರ್​ ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:03 pm, Thu, 20 April 23

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್