ಬೆಳಗಾವಿ: ಜಗದೀಶ್ ಶೆಟ್ಟರ್ (Jagadish Shettar) ಅವರು ಕಾಂಗ್ರೆಸ್ ಸೇರಿರುವುದರಿಂದ ಬಿಜೆಪಿಗೆ ಯಾವುದೇ ಹೊಡೆತ ಆಗುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Josh) ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ಮತದಾರರು ಪಕ್ಷ ನೋಡಿ ಮತ ನೀಡುತ್ತಾರೆ. ಹತಾಶೆಯಿಂದ ಶೆಟ್ಟರ್ ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ. ನಿಪ್ಪಾಣಿಗೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಯೋಗಿ ಆದಿತ್ಯನಾಥ್ ಆಗಮಿಸಲಿದ್ದಾರೆ. ಡಬಲ್ ಎಂಜಿನ್ ಸರ್ಕಾರದ ಕಾರ್ಯಗಳನ್ನು ಜನರು ಅರಿತಿದ್ದಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ವರು ಅಧಿಕಾರಕ್ಕೆ ಬಂದರೆ ಬಿಜೆಪಿ ನೀಡಿರುವ ಮೀಸಲಾತಿ ರದ್ದು ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಹೀಗಾಗಿ ಮತದಾರರು ಬಿಜೆಪಿ ಪರವಾಗಿದ್ದಾರೆ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಈ ಮಧ್ಯೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಜಗದೀಶ ಶೆಟ್ಟರ್, ಆಂತರಿಕ ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಪಕ್ಷ 130ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂಬುದು ತಿಳಿದುಬಂದಿದೆ ಎಂದು ಹೇಳಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಾತ್ರವಲ್ಲದೆ ಬೇರೆ ಜಿಲ್ಲೆಗಳಿಂದಲೂ ಚುಣಾವಣಾ ಪ್ರಚಾರಕ್ಕೆ ಆಹ್ವಾನಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಜನ ಬೆಂಬಲ ದೊಡ್ಡದಾಗಿದೆ. ಧಾರವಾಡ ಜಿಲ್ಲೆಯ 7 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ.
ಇದನ್ನೂ ಓದಿ: Karnataka Polls: ಲಿಂಗಾಯತ ವಿರೋಧ ಎದುರಿಸಲು ಬಿಜೆಪಿಗೆ ಯಡಿಯೂರಪ್ಪ ಗುರಾಣಿ; ಬೆಳಗಾವಿ ಬಂಡಾಯ ತಣಿಸಿದ ಸಂತೋಷ್ ತಂತ್ರ
ನನ್ನ ಬಗ್ಗೆ ಮಾತನಾಡಲು ಬಿಜೆಪಿಯ ಕೆಎಸ್ ಈಶ್ವರಪ್ಪಗೆ ಒತ್ತಡ ಇರಬಹುದು. ಮೊನ್ನೆ ನನಗೆ ಪತ್ರ ಬರೆದಿದ್ದರು. ಇದು ಪಕ್ಷದ ಒತ್ತಡದಿಂದ ಎಂದು ಶೆಟ್ಟರ್ ಹೇಳಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 8:03 pm, Thu, 20 April 23