Tirumala Tirupati: ಕಾಲ್ನಡಿಗೆಯಲ್ಲೇ ಬೆಟ್ಟ ಹತ್ತಿ ತಿಮ್ಮಪ್ಪನ ದರ್ಶನ ಪಡೆದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಮತದಾನ ಮುಗಿದ ಬೆನ್ನಲ್ಲೇ ನೇರವಾಗಿ ತಿರುಪತಿಗೆ ತೆರಳಿ ಅಲ್ಲಿಂದ ತಿರುಮಲದವರೆಗೆ ಪಾದಯಾತ್ರೆಯಲ್ಲಿ ಮೆಟ್ಟಿಲುಗಳನ್ನು ಹತ್ತಿ ಶ್ರೀನಿವಾಸ ಸ್ವಾಮಿಯ ದರ್ಶನ ಪಡೆದಿದ್ದಾರೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ.
ತಿರುಪತಿ: ರಾಜ್ಯ ವಿಧಾನಸಭಾ ಚುನಾವಣೆಯ (Karnataka Assembly Election 2023) ಮತದಾನ (Voter) ಮುಗಿದ ಬೆನ್ನಲ್ಲೇ ಅಭ್ಯರ್ಥಿಗಳು, ಪಕ್ಷಗಳ ನಾಯಕರು, ಪ್ರಮುಖರು ರಿಲ್ಯಾಕ್ಸ್ ಮೂಡಿನಲ್ಲಿದ್ದಾರೆ. ಆದರೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು (Pralhad Joshi) ಮಾತ್ರ ವಿಶ್ರಾಂತಿಯತ್ತ ಮುಖ ಮಾಡದೇ ಮತ್ತಷ್ಟು ಶ್ರಮವಹಿಸಿ ತಿರುಪತಿಯ ಮೆಟ್ಟಿಲುಗಳನ್ನು ಹತ್ತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.
ಹೌದು, ಮತದಾನ ಮುಗಿದ ಬೆನ್ನಲ್ಲೇ ಗುರುವಾರ ಬೆಳ್ಳಂಬೆಳಗ್ಗೆ ನೇರವಾಗಿ ತಿರುಪತಿಗೆ ತೆರಳಿ ಅಲ್ಲಿಂದ ತಿರುಮಲದವರೆಗೆ ಪಾದಯಾತ್ರೆಯಲ್ಲಿ ಮೆಟ್ಟಿಲುಗಳನ್ನು ಹತ್ತಿ ಶ್ರೀನಿವಾಸ ಸ್ವಾಮಿಯ ದರ್ಶನ ಪಡೆದಿದ್ದಾರೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ. ಉಳಿದ ನಾಯಕರೆಲ್ಲ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಾ ರಿಲ್ಯಾಕ್ಸ್ ಆಗುತ್ತಿದ್ದರೆ, ಇತ್ತ ಪ್ರಲ್ಹಾದ ಜೋಶಿಯವರು ಪಾದಯಾತ್ರೆ ಮಾಡಿ ವೆಂಕಟೇಶ್ವರನ ದರ್ಶನ ಪಡೆದು ನಿರಾಳರಾಗಿದ್ದಾರೆ.
ಇದನ್ನೂ ಓದಿ:Lingayat: ಹುಬ್ಬಳ್ಳಿಯಲ್ಲಿ ಬಿಜೆಪಿ ಪರ ಲಿಂಗಾಯತ ಮುಖಂಡರ ಜೊತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬಿರುಸಿನ ಪ್ರಚಾರ
ಮತ ಎಣಿಕೆಗೆ ಈಗಾಗಲೇ ಕೌಂಟ್ ಡೌನ್ ಆರಂಭವಾಗಿದೆ. ಈಗಾಗಲೇ ಇವಿಎಂ ಸೇರಿರುವ ಅಭ್ಯರ್ಥಿಗಳ ಭವಿಷ್ಯ ಇದೇ 13ರಂದು ಬಹಿರಂಗವಾಗಲಿದೆ. ಅದಕ್ಕೂ ಮುನ್ನ ಕೇಂದ್ರ ಸಚಿವರು ತಿರುಪತಿಗೆ ಪಾದಯಾತ್ರೆ ನಡೆಸಿ ಪ್ರಾರ್ಥನೆ ಸಲ್ಲಿಸುವ ಮೂಲಕ ತಮ್ಮ ಬಿಡುವಿನ ದಿನದಲ್ಲಿ ದೇವರ ದರ್ಶನ ಪಡೆದಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಬುಧವಾರ ಮುಕ್ತಾಯಗೊಂಡಿದ್ದು, ದಾಖಲೆಯ ಶೇ 73.19ರಷ್ಟು ಮತದಾನವಾಗಿದೆ. ಶನಿವಾರ ಫಲಿತಾಂಶವೂ ಪ್ರಕಟಗೊಳ್ಳಲಿದೆ. ಕೆಲವು ಎಕ್ಸಿಟ್ ಪೋಲ್ಗಳು ಕಾಂಗ್ರೆಸ್ ಪಕ್ಷಕ್ಕೆ ಸರಳ ಬಹುಮತದ ಸನಿಹದ ಸ್ಥಾನಗಳು ದೊರೆಯಲಿವೆ ಎಂದಿದ್ದರೆ ಇನ್ನು ಕೆಲವು ಅತಂತ್ರ ವಿಧಾನಸಭೆ ನಿರ್ಮಣವಾಗುವ ಸುಳಿವು ನೀಡಿವೆ. ಕೆಲವು ಮತಗಟ್ಟೆ ಸಮೀಕ್ಷೆಗಳು ಬಿಜೆಪಿಗೆ ಸರಳ ಬಹುಮತ ದೊರೆಯಲಿವೆ ಎಂದಿವೆ. ಈ ಮಧ್ಯೆ ರಾಜಕೀಯ ಪಕ್ಷಗಳ ನಾಯಕರು ರಿಲ್ಯಾಕ್ಸ್ ಮೂಡಿನಲ್ಲಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 9:09 pm, Thu, 11 May 23