AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು ಹೆಸರಲ್ಲಿ ಆಸ್ಪತ್ರೆ ಕಟ್ಟಿದ್ದು ಸೋಮಣ್ಣ, ಆದರೆ ಶಿವಣ್ಣ ಸಿದ್ದರಾಮಯ್ಯ ಪರ ಪ್ರಚಾರ ಮಾಡ್ತಿದಾರೆ! ಪ್ರತಾಪ್ ಸಿಂಹ ಪ್ರಹಾರ

ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪರ ನಟ ಶಿವರಾಜ್ ಕುಮಾರ್ ಪ್ರಚಾರ ನಡೆಸುತ್ತಿದ್ದಾರೆ. ಈ ಬಗ್ಗೆ ಸಂಸದ ಪ್ರತಾಪ್ ಸಿಂಹ ಅವರು ಟ್ವೀಟ್ ಮಾಡಿ ಶಿವಣ್ಣಗೆ ಸಖತ್ತಾಗಿ ಟಾಂಗ್ ಕೊಟ್ಟಿದ್ದಾರೆ.

ಅಪ್ಪು ಹೆಸರಲ್ಲಿ ಆಸ್ಪತ್ರೆ ಕಟ್ಟಿದ್ದು ಸೋಮಣ್ಣ, ಆದರೆ ಶಿವಣ್ಣ ಸಿದ್ದರಾಮಯ್ಯ ಪರ ಪ್ರಚಾರ ಮಾಡ್ತಿದಾರೆ! ಪ್ರತಾಪ್ ಸಿಂಹ ಪ್ರಹಾರ
ಸಿದ್ದರಾಮಯ್ಯ ಪರ ಪ್ರಚಾರ ನಡೆಸುತ್ತಿರುವ ಶಿವ ರಾಜ್​ಕುಮಾರ್​ಗೆ ಟ್ವೀಟ್ ಮೂಲಕ ಟಾಂಗ್ ಕೊಟ್ಟ ಪ್ರತಾಪ್ ಸಿಂಹ
Rakesh Nayak Manchi
Rakesh Nayak Manchi|

Updated on:May 04, 2023 | 4:16 PM

Share

ಮೈಸೂರು: ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ (Siddaramaiah) ಪರ ನಟ ಶಿವರಾಜ್ ಕುಮಾರ್ (Shiva Rajkumar) ಪ್ರಚಾರ ನಡೆಸುತ್ತಿದ್ದಾರೆ. ಈ ಬಗ್ಗೆ ಸಂಸದ ಪ್ರತಾಪ್ ಸಿಂಹ (Pratap Simha) ಅವರು ಟ್ವಿಟರ್ ಹಾಗೂ ಫೇಸ್​ಬುಕ್​ನಲ್ಲಿ ಶಿವಣ್ಣಗೆ ಟಾಂಗ್ ಕೊಟ್ಟಿದ್ದಾರೆ. ದಿವಂಗತ ನಟ ಪುನೀತ್ ರಾಜ್​ಕುಮಾರ್ ಹೆಸರಿನಲ್ಲಿ ಸಚಿವ ಸೋಮಣ್ಣ (V Somanna) ಅವರು ಆಸ್ಪತ್ರೆ ಕಟ್ಟಿದ್ದಾರೆ. ಈ ಆಸ್ಪತ್ರೆ ಉದ್ಘಾಟನೆಗೆ ಆಗಮಿಸಿದ್ದ ರಾಘವೇಂದ್ರ ರಾಜ್​ಕುಮಾರ್, ಸೋಮಣ್ಣರ ಕಾರ್ಯವನ್ನು ಶ್ಲಾಘಿಸಿದ್ದರು. ಇದನ್ನೇ ಮುಂದಿಟ್ಟುಕೊಂಡು ಪ್ರತಾಪ್ ಸಿಂಹ ಅವರು ಶಿವರಾಜ್ ಕುಮಾರ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

“ಪುನೀತ್ ರಾಜಕುಮಾರ್ ಸರ್ ಹೆಸರಿನಲ್ಲಿ ಆಸ್ಪತ್ರೆ ಕಟ್ಟಿದ ಸೋಮಣ್ಣ, ಮನ ಮೆಚ್ಚಿ ಶ್ಲಾಘಿಸಿದ ರಾಘಣ್ಣ, ಸಿದ್ರಾಮಣ್ಣನ ಪರವಾಗಿ ಪ್ರಚಾರಕ್ಕೆ ಇಳಿದ ಶಿವಣ್ಣ! ಅವರವರ ಭಾವ ಭಕುತಿಗೆ” ಎಂದು ಪ್ರತಾಪ್ ಸಿಂಹ ಅವರು ಟ್ವೀಟ್ ಮಾಡಿ ಸೋಮಣ್ಣ ಅವರನ್ನು ರಾಘಣ್ಣ ಹೊಗಳಿದ ವಿಡಿಯೋ ಹಾಗೂ ಶಿವಣ್ಣ ಸಿದ್ದರಾಮಯ್ಯ ಪರ ಪ್ರಚಾರ ನಡೆಸುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Karnataka Assembly Polls; ಕಾಂಗ್ರೆಸ್ ನಾಯಕರಿಗೆ ರಾಮನೂ ಬೇಕಿಲ್ಲ ಹನುಮನೂ ಬೇಕಿಲ್ಲ: ವಿ ಸೋಮಣ್ಣ

ಕೊರೋನಾದಿಂದ ಆರ್ಥಿಕತೆ ಬುಡಮೇಲಾದ ಹಿನ್ನೆಲೆ ಪುನೀತ್ ಹೆಸರಿನಲ್ಲಿ ಸೋಮಣ್ಣ ಅವರು ಉಚಿತ ಆಸ್ಪತ್ರೆ ಕಟ್ಟಲಾಗಿದೆ. ಈ ಬಗ್ಗೆ ಉದ್ಘಾಟನೆಗೆ ಆಗಮಿಸಿದ್ದ ರಾಘವೇಂದ್ರ ಅವರು ಸೋಮಣ್ಣ ಅವರ ಕಾರ್ಯ ಹೊಗಳಿದ್ದರು. 2023ರ ಈ ಕಾಲದಲ್ಲಿ ಬಡವರಿಗಾಗಿ ಇಂತಹ ಉಚಿತ ಆಸ್ಪತ್ರೆ ಯಾರು ಕಟ್ಟುತ್ತಾರೆ? ಎಷ್ಟು ಪುಣ್ಯ ಮಾಡಿದ್ದೇವೆ ನಾವು ನೀವು, ಸೋಮಣ್ಣ ಅವರಿಗೆ ಸೆಲ್ಯುಟ್ ಬಿಟ್ಟರೆ ಬೇರೆ ಏನೂ ಹೇಳಲು ಆಗಲ್ಲ ಎಂದಿದ್ದರು.

ಅಲ್ಲದೆ, ಈ ಆಸ್ಪತ್ರೆಯನ್ನು ಆಸ್ಪತ್ರೆ ಅಂತ ಭಾವಿಸಬೇಡಿ, ದೇವಸ್ಥಾನ ಅಂತ ಭಾವಿಸಿ. ಸೋಮಣ್ಣ ಅವರೆ ನಿಮ್ಮ ಈ ಕಾರ್ಯಕ್ಕೆ ಧನ್ಯವಾದ ಹೇಳಿದರೆ ತುಂಬಾ ಕಡಿಮೆಯಾಗುತ್ತದೆ. ನಿಮಗೊಂದು ಸಾಷ್ಟಾಂಗ ನಮಸ್ಕಾರ ಹಾಕಿದರೆ ಸರಿ ಅನಿಸುತ್ತದೆ ಎಂದು ರಾಘಣ್ಣ ಅವರು ಸೋಮಣ್ಣ ಅವರನ್ನು ಹೊಗಳಿಕೆಯ ಮಾತುಗಳನ್ನಾಡಿದ್ದರು.

ಗೀತಾ ಶಿವರಾಜ್​ಕುಮಾರ್ ಪ್ರಚಾರಕ್ಕೆ ಬಂದರೆ ತಕರಾರು ಇಲ್ಲ: ಪ್ರತಾಪ್ ಸಿಂಹ

ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಪ್ರತಾಪ್ ಸಿಂಹ, ಡಾ.ರಾಜ್​ ಕುಟುಂಬವನ್ನು ರಾಜಕೀಯ ಹೊರತಾಗಿ ನೋಡುತ್ತೇವೆ ಎಂದರು. ಶಿವಮೊಗ್ಗದಲ್ಲಿ ಯಡಿಯೂರಪ್ಪ ವಿರುದ್ಧ ಗೀತಾ ಸ್ಪರ್ಧೆ ಮಾಡಿದ್ದರು. ಆಗಲೂ ನಟ ಶಿವರಾಜ್​ಕುಮಾರ್​ ಪ್ರಚಾರಕ್ಕೆ ಹೋಗಿರಲಿಲ್ಲ. ಡಾ.ರಾಜ್​ ಕುಟುಂಬವನ್ನು ರಾಜಕೀಯದ ಆಚೆಗೆ ನೋಡುತ್ತಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ಗೀತಾ ಸ್ಪರ್ಧಿಸಿದಾಗಲೂ ಸರಿ ಕಾಣಲಿಲ್ಲ. ಬಿಜೆಪಿ ಸಂಸದನಾಗಿ ಈ ವಿಚಾರವನ್ನು ಹೇಳುತ್ತಿಲ್ಲ. ಗೀತಾ ಶಿವರಾಜ್​ಕುಮಾರ್ ರಾಜಕೀಯ ಕುಟುಂಬದಿಂದ ಬಂದಿದ್ದು. ಅವರ ತಂದೆ ಎಸ್.ಬಂಗಾರಪ್ಪ ಕರ್ನಾಟಕದ ಸಿಎಂ ಆಗಿದ್ದವರು. ಗೀತಾ ಶಿವರಾಜ್​ಕುಮಾರ್ ಪ್ರಚಾರಕ್ಕೆ ಬಂದರೆ ತಕರಾರು ಇಲ್ಲ ಎಂದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:27 pm, Thu, 4 May 23

Follow Us
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ; ತೀವ್ರ ಸ್ವರೂಪ ಪಡೆದ ಜಗಳ
ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ; ತೀವ್ರ ಸ್ವರೂಪ ಪಡೆದ ಜಗಳ
ಕಸ್ತೂರಿರಂಗನ್ ಯೋಜನೆ ಜನರಪರವಾದದ್ದು: ಉಪನ್ಯಾಸಕ ಡಾ. ಎಲ್. ಕೆ ಶ್ರೀಪತಿ
ಕಸ್ತೂರಿರಂಗನ್ ಯೋಜನೆ ಜನರಪರವಾದದ್ದು: ಉಪನ್ಯಾಸಕ ಡಾ. ಎಲ್. ಕೆ ಶ್ರೀಪತಿ