AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಪ್ರಚಾರಕ್ಕೆ ಬಂದಾಗ ಪ್ರಶ್ನಿಸಿದ ಮಹಿಳೆ ಮೇಲೆ ಪ್ರೀತಂಗೌಡ ಬೆಂಬಲಿಗನಿಂದ ಹಲ್ಲೆ: ಸಿಸಿಟಿವಿಯಲ್ಲಿ ಗಲಾಟೆ ದೃಶ್ಯ ಸೆರೆ

ರಾಜ್ಯ ವಿಧಾನಸಭೆ ಚುನಾವಣೆಗೆ ಕೇವಲ ಆರು ದಿನಗಳು ಬಾಕಿ ಉಳಿದಿವೆ ಅದರಂತೆ ಉಭಯ ಪಕ್ಷಗಳು ಪ್ರಚಾರದಲ್ಲಿ ತೊಡಗಿದೆ. ಅದರಂತೆ ಇದೀಗ ಚುನಾವಣಾ ಪ್ರಚಾರಕ್ಕೆ ಬಂದಾಗ, ಪ್ರಶ್ನೆ ಮಾಡಿದ ಮಹಿಳೆ ಮೇಲೆಯೇ ಹಲ್ಲೆ ಮಾಡಿದ ಆರೋಪ ಹೊಸಕೊಪ್ಪಲು ಬಡಾವಣೆಯ ಗಾಂಧಿನಗರದಲ್ಲಿ ಕೇಳಿಬಂದಿದೆ.

ಚುನಾವಣಾ ಪ್ರಚಾರಕ್ಕೆ ಬಂದಾಗ ಪ್ರಶ್ನಿಸಿದ ಮಹಿಳೆ ಮೇಲೆ ಪ್ರೀತಂಗೌಡ ಬೆಂಬಲಿಗನಿಂದ ಹಲ್ಲೆ: ಸಿಸಿಟಿವಿಯಲ್ಲಿ ಗಲಾಟೆ ದೃಶ್ಯ ಸೆರೆ
ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ
ಕಿರಣ್ ಹನುಮಂತ್​ ಮಾದಾರ್
|

Updated on:May 04, 2023 | 11:32 AM

Share

ಹಾಸನ: ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Election)ಗೆ ಕೇವಲ ಆರು ದಿನಗಳು ಬಾಕಿ ಉಳಿದಿವೆ ಅದರಂತೆ ಉಭಯ ಪಕ್ಷಗಳು ಪ್ರಚಾರದಲ್ಲಿ ತೊಡಗಿದೆ. ಅದರಂತೆ ಇದೀಗ ಚುನಾವಣಾ ಪ್ರಚಾರಕ್ಕೆ ಬಂದಾಗ, ಪ್ರಶ್ನೆ ಮಾಡಿದ ಮಹಿಳೆ ಮೇಲೆಯೇ ಹಲ್ಲೆ ಮಾಡಿದ ಆರೋಪ ಹೊಸಕೊಪ್ಪಲು ಬಡಾವಣೆಯ ಗಾಂಧಿನಗರದಲ್ಲಿ ಕೇಳಿಬಂದಿದೆ. ಹೌದು ನಿನ್ನೆ(ಮೇ.3) ರಾತ್ರಿ ಬಿಜೆಪಿ ಅಭ್ಯರ್ಥಿ ಶಾಸಕ ಪ್ರೀತಂಗೌಡ(Preethamgowda), ಬಿಜೆಪಿ ಮುಖಂಡ ಹಾಗೂ ನಗರಸಭೆ ಅಧ್ಯಕ್ಷ ಮೋಹನ್ ಕುಮಾರ್ ಪುತ್ರ ಚೇತನ್ ಮತ್ತು ಸಂಗಡಿಗರು ಪ್ರಚಾರಕ್ಕೆ ತೆರಳಿದ್ದರು. ಈ ವೇಳೆ ಗೀತಮ್ಮ ಎಂಬ ಮಹಿಳೆ ‘ನಮ್ಮ ಮನೆ ಬಳಿ ಕಸ ಸಂಗ್ರಹ ವಾಹನ ಬರೋದಿಲ್ಲ, ಬೀದಿ ದೀಪ ಇಲ್ಲ. ನಮ್ಮ ಬೇಡಿಕೆ ಈಡೇರಿಸಿ ಆನಂತರ ಮತ ಹಾಕುತ್ತೆವೆ ಎಂದಿದ್ದಾಳೆ. ಇದೇ ಕಾರಣಕ್ಕೆ ಮಹಿಳೆ ಗೀತಮ್ಮ ಮೇಲೆ ಹಲ್ಲೆ ಮಾಡಿ ಬೆದರಿಕೆ ಹಾಕಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಪ್ರಶ್ನೆ ಮಾಡಿದ ಮಹಿಳೆ ಮೇಲೆ ಹಲ್ಲೆ ಮಾಡಿ ಮನೆಯ ಗೇಟ್ ಒದ್ದು, ಮನೆ ಮುಂದೆ ಗಲಾಟೆ ಮಾಡೋ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನಗರಸಭೆ ಅದ್ಯಕ್ಷನ ಪುತ್ರ ಚೇತನ್ ಮತ್ತು ಸುಪ್ರಿತ್ ಎಂಬುವವರ ವಿರುಧ್ದ ಹಾಸನ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ:Sharad Pawar: ಶರದ್ ಪವಾರ್ ರಾಜೀನಾಮೆ: ಸುಪ್ರಿಯಾ ಸುಳೆಗೆ ಕರೆ ಮಾಡಿದ ರಾಹುಲ್ ಗಾಂಧಿ, ಎಂಕೆ ಸ್ಟಾಲಿನ್

ಸಚಿವ ನಾರಾಯಣಗೌಡ ಕಾರು ಅಡ್ಡಗಟ್ಟಿ ನಿಂದನೆ, ಕೈಕೈ ಮಿಲಾಯಿಸಿದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು

ಮಂಡ್ಯ: ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ರಾಜಘಟ್ಟ ಗೇಟ್ ಬಳಿ ಸಚಿವ ಕೆಸಿ ನಾರಾಯಣಗೌಡ ಕಾರು ಅಡ್ಡಗಟ್ಟಿ ನಿಂದನೆ ಮಾಡಿದ ಘಟನೆ ಬುಧವಾರ ಸಂಜೆ ನಡೆದಿತ್ತು. ಸಚಿವರು ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ನಾರಾಯಣಗೌಡ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದಾಗ 70ಕ್ಕೂ ಹೆಚ್ಚು ಜೆಡಿಎಸ್​ ಕಾರ್ಯಕರ್ತ ಏಕಾಏಕಿ ಕಾರು ತಡೆದಿದ್ದು, ಸಚಿವರನ್ನು ನಿಂದಿಸಿದ್ದಾರೆ. ಈ ವೇಳೆ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಪರಸ್ಪರ ಕೈಕೈ ಮಿಲಾಯಿಸಿದ್ದಾರೆ. ಕಾರು ಅಡ್ಡಗಟ್ಟಿದ ಜೆಡಿಎಸ್ ಕಾರ್ಯಕರ್ತರು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎನ್ನಲಾಗಿದೆ. ಮನಬಂದಂತೆ ನಿಂದಿಸಿ ತಳ್ಳಾಟ ನೂಕಾಟ ಮಾಡಿದ್ದಾರೆ. ತಕ್ಷಣ ಅಂಗರಕ್ಷಕರು ಸಚಿವ ಡಾ. ನಾರಾಯಣಗೌಡ ಅವರನ್ನು ರಕ್ಷಿಸಿದ್ದರು.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:30 am, Thu, 4 May 23

ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!