ಕರ್ನಾಟಕ ವಿಧಾನಸಭಾ ಚುನಾವಣೆ(Karnataka Assembly Elections)ಗೆ ಇದೀಗ ಮತದಾನ ಆರಂಭಗೊಂಡಿದೆ, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಮತದಾರರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಲು ಮನವಿ ಮಾಡಿದ್ದಾರೆ. ಕರ್ನಾಟಕದ ಜನತೆ, ವಿಶೇಷವಾಗಿ ಯುವಕರು ಮತ್ತು ಮೊದಲ ಬಾರಿಗೆ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮತ್ತು ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮಿಸುವಂತೆ ಹೇಳಿದ್ದಾರೆ. ಮತದಾನದ ದಿನದಂದು, ಕರ್ನಾಟಕದ ನಮ್ಮ ಸಹೋದರ ಮತ್ತು ಸಹೋದರಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಾಜ್ಯದಲ್ಲಿ ಉತ್ತಮ ಆಡಳಿತ, ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ಮತದಾನ ಮಾಡಿ ಎಂದು ವಿನಂತಿಸುತ್ತೇನೆ.
Urging the people of Karnataka, particularly young and first time voters to vote in large numbers and enrich the festival of democracy.
— Narendra Modi (@narendramodi) May 10, 2023
ನಿಮ್ಮ ಒಂದು ಮತವು ರಾಜ್ಯವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವುದನ್ನು ಮುಂದುವರಿಸುವ ಜನಪರ ಮತ್ತು ಪ್ರಗತಿಪರ ಸರ್ಕಾರವನ್ನು ಖಚಿತಪಡಿಸುತ್ತದೆ ಎಂದು ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಮೇ 13 ರಂದು ಫಲಿತಾಂಶ ಹೊರಬೀಳಲಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:17 am, Wed, 10 May 23