AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6ನೇ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್: ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರಿಗೆ ಬಂಪರ್

ಐದು “ಗ್ಯಾರಂಟಿ’ ಘೋಷಿಸಿ ಉತ್ಸಾಹದಲ್ಲಿರುವ ಕಾಂಗ್ರೆಸ್‌ ಈಗ ಮತ್ತೂಂದು ಗ್ಯಾರಂಟಿ ಘೋಷಿಸಿದೆ. ಅಂಗನವಾಡಿ, ಆಶಾ ಹಾಗೂ ಬಿಸಿಯೂಟ ಅಡುಗೆ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡುವುದಾಗಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಕಟಿಸಿದ್ದಾರೆ.

6ನೇ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್: ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರಿಗೆ ಬಂಪರ್
ರಮೇಶ್ ಬಿ. ಜವಳಗೇರಾ
|

Updated on: May 01, 2023 | 8:46 AM

Share

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ (Karmnataka Assembly Elections 203) ಪ್ರಚಾರದ ಬಿಸಿ ತಾರಕಕ್ಕೇರಿದೆ. ದೆಹಲಿ ನಾಯಕರು ಸಮಾವೇಶ, ಸಭೆ, ರೋಡ್​ ಶೋಗಳ ಮೂಲಕ ಅಬ್ಬರಿಸುತ್ತಿದ್ದಾರೆ. ಪ್ರಚಾರದ ಬ್ಯುಸಿಯಾಗಿದ್ದ ನಾಯಕರು ಪ್ರಣಾಳಿಕೆಯತ್ತ ಚಿತ್ತ ಹರಿಸಿದ್ದಾರೆ. ಅದರಲ್ಲೂ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಗೆ ಮುನ್ನವೇ ಪ್ರಚಾರದ ಮಧ್ಯೆ ಮಧ್ಯೆ​​​ ಗ್ಯಾರಂಟಿ ಮೇಲೆ ಗ್ಯಾರಂಟಿ ಘೋಷಿಸುತ್ತಿದೆ. ಈಗಾಗಲೇ ಐದು ಗ್ಯಾರಂಟಿ ಘೋಷಣೆ ಮಾಡಿರುವ ಕಾಂಗ್ರೆಸ್ ಇದೀಗ 6ನೇ ಗ್ಯಾರಂಟಿ ಬಿಡುಗಡೆ ಮಾಡಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ರೂಪಾಯಿ ಮತ್ತು ಬಿಸಿಯೂಟ ನೌಕರರಿಗೆ ಐದು ಸಾವಿರ ರೂಪಾಯಿ ವೇತನ ನೀಡುವುದಾಗಿ ಬೆಳಗಾವಿಯಲ್ಲಿ ಕ್ರಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಘೋಷಿಸಿದ್ದಾರೆ. ಇದು ಕಾಂಗ್ರೆಸ್​ 6ನೇ ಗ್ಯಾರಂಟಿಯಾಗಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಭಾನುವಾರ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಿಯಾಂಗಾ ಗಾಂಧಿ ಅವರು, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಲಿ 11,500ರೂ.ಗಳಿಂದ 15,000 ಸಾವಿರ ರೂ., ಸಹಾಯಕಿಯರಿಗೆ ಹಾಲಿ 7,500 ರೂ.ದಿಂದ 10,000 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ ಈಗ ಇರುವ 5,000 ರೂ.ಗಳಿಂದ 8,000 ರೂ. ಹಾಗೂ ಬಿಸಿಯೂಟ ಅಡುಗೆ ಕಾರ್ಯಕರ್ತೆಯರಿಗೆ ಹಾಲಿ 3,700 ರೂ.ದಿಂದ 5,000 ರೂ.ಗಳಿಗೆ ಗೌರವಧನ ಪರಿಷ್ಕರಣೆ ಮಾಡುವುದಾಗಿ ಘೋಷಿಸಿದರು.

ಪ್ರತಿ ಮನೆಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಪದವೀಧರರಿಗೆ ಮಾಸಿಕ 3 ಸಾವಿರ ರೂ, ನಿರುದ್ಯೋಗ ಭತ್ಯೆ ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ. ಸಹಾಯಧನ, ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಕಾಂಗ್ರೆಸ್ ಈಗಾಗಲೇ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇದೀಗ ಆರನೇ ಗ್ಯಾರಂಟಿ ಘೋಷಿಸಿದ್ದು, ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಈ ಗ್ಯಾರಂಟಿಗಳನ್ನು ಜಾರಿಗೆ ತರವುದಾಗಿ ಹೇಳಿದೆ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?