ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ (Karmnataka Assembly Elections 203) ಪ್ರಚಾರದ ಬಿಸಿ ತಾರಕಕ್ಕೇರಿದೆ. ದೆಹಲಿ ನಾಯಕರು ಸಮಾವೇಶ, ಸಭೆ, ರೋಡ್ ಶೋಗಳ ಮೂಲಕ ಅಬ್ಬರಿಸುತ್ತಿದ್ದಾರೆ. ಪ್ರಚಾರದ ಬ್ಯುಸಿಯಾಗಿದ್ದ ನಾಯಕರು ಪ್ರಣಾಳಿಕೆಯತ್ತ ಚಿತ್ತ ಹರಿಸಿದ್ದಾರೆ. ಅದರಲ್ಲೂ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಗೆ ಮುನ್ನವೇ ಪ್ರಚಾರದ ಮಧ್ಯೆ ಮಧ್ಯೆ ಗ್ಯಾರಂಟಿ ಮೇಲೆ ಗ್ಯಾರಂಟಿ ಘೋಷಿಸುತ್ತಿದೆ. ಈಗಾಗಲೇ ಐದು ಗ್ಯಾರಂಟಿ ಘೋಷಣೆ ಮಾಡಿರುವ ಕಾಂಗ್ರೆಸ್ ಇದೀಗ 6ನೇ ಗ್ಯಾರಂಟಿ ಬಿಡುಗಡೆ ಮಾಡಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ರೂಪಾಯಿ ಮತ್ತು ಬಿಸಿಯೂಟ ನೌಕರರಿಗೆ ಐದು ಸಾವಿರ ರೂಪಾಯಿ ವೇತನ ನೀಡುವುದಾಗಿ ಬೆಳಗಾವಿಯಲ್ಲಿ ಕ್ರಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಘೋಷಿಸಿದ್ದಾರೆ. ಇದು ಕಾಂಗ್ರೆಸ್ 6ನೇ ಗ್ಯಾರಂಟಿಯಾಗಿದೆ.
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಗು ಬಿಸಿಯೂಟ ಅಡುಗೆ ಕಾರ್ಯಕರ್ತರಿಗೆ ಶ್ರೀಮತಿ ಪ್ರಿಯಾಂಕಾ ಗಾಂಧಿಯವರು ಇಂದು ಗೌರವ ಧನ ಹೆಚ್ಚಳದ ಕಾಂಗ್ರೆಸ್ ಗ್ಯಾರಂಟಿಯನ್ನು ಘೋಷಿಸಿದ್ದಾರೆ.
ಮಹಿಳಾ ಸಬಲೀಕರಣಕ್ಕೆ ಕಾಂಗ್ರೆಸ್ ಗ್ಯಾರಂಟಿ
– @priyankagandhi #ಕಾಂಗ್ರೆಸ್_ಬರಲಿದೆ_ಪ್ರಗತಿ_ತರಲಿದೆ pic.twitter.com/9I4GQuO8D0
— Karnataka Congress (@INCKarnataka) April 30, 2023
ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಭಾನುವಾರ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಿಯಾಂಗಾ ಗಾಂಧಿ ಅವರು, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಲಿ 11,500ರೂ.ಗಳಿಂದ 15,000 ಸಾವಿರ ರೂ., ಸಹಾಯಕಿಯರಿಗೆ ಹಾಲಿ 7,500 ರೂ.ದಿಂದ 10,000 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ ಈಗ ಇರುವ 5,000 ರೂ.ಗಳಿಂದ 8,000 ರೂ. ಹಾಗೂ ಬಿಸಿಯೂಟ ಅಡುಗೆ ಕಾರ್ಯಕರ್ತೆಯರಿಗೆ ಹಾಲಿ 3,700 ರೂ.ದಿಂದ 5,000 ರೂ.ಗಳಿಗೆ ಗೌರವಧನ ಪರಿಷ್ಕರಣೆ ಮಾಡುವುದಾಗಿ ಘೋಷಿಸಿದರು.
ಪ್ರತಿ ಮನೆಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಪದವೀಧರರಿಗೆ ಮಾಸಿಕ 3 ಸಾವಿರ ರೂ, ನಿರುದ್ಯೋಗ ಭತ್ಯೆ ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ. ಸಹಾಯಧನ, ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಕಾಂಗ್ರೆಸ್ ಈಗಾಗಲೇ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇದೀಗ ಆರನೇ ಗ್ಯಾರಂಟಿ ಘೋಷಿಸಿದ್ದು, ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಈ ಗ್ಯಾರಂಟಿಗಳನ್ನು ಜಾರಿಗೆ ತರವುದಾಗಿ ಹೇಳಿದೆ.