Karnataka Assembly Election Results: ಕರ್ನಾಟಕದಲ್ಲಿ ಕಾಂಗ್ರೆಸ್​ ಗೆಲುವಿಗೆ ದೇವರ ಮೊರೆ ಹೋದ ಪ್ರಿಯಾಂಕಾ ಗಾಂಧಿ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆ ಇಂದು ಎಐಸಿಸಿ ಪ್ರಧಾನಿ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಶಿಮ್ಲಾದ ಜಖುವಿನಲ್ಲಿರುವ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿ "ದೇಶ, ಕರ್ನಾಟಕದ ಶಾಂತಿ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

Karnataka Assembly Election Results: ಕರ್ನಾಟಕದಲ್ಲಿ ಕಾಂಗ್ರೆಸ್​ ಗೆಲುವಿಗೆ ದೇವರ ಮೊರೆ ಹೋದ ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ
Follow us
ಕಿರಣ್ ಹನುಮಂತ್​ ಮಾದಾರ್
|

Updated on: May 13, 2023 | 10:36 AM

ಶಿಮ್ಲಾ: ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮೇ.10 ರಂದು ಭರ್ಜರಿಯಾಗಿ ನಡೆದಿದ್ದು, ಇಂದು(ಮೇ.13) ಬೆಳಗ್ಗೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಇತ್ತ ಮತ ಎಣಿಕೆ ನಡೆಯುತ್ತಿದ್ದಂತೆ ಕಾಂಗ್ರೆಸ್ ನಾಯಕಿ, ಎಐಸಿಸಿ ಪ್ರಧಾನಿ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ(Priyanka Gandhi Vadra) ಅವರು ಶಿಮ್ಲಾದ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಹೌದು ಶಿಮ್ಲಾದ ಜಖುವಿನ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿ “ದೇಶ ಮತ್ತು ಕರ್ನಾಟಕದ ಶಾಂತಿ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸುತ್ತಿದ್ದರು” ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಇನ್ನು ಬೆಳಿಗ್ಗೆ 8 ಗಂಟೆಯಿಂದ ರಾಜ್ಯದಲ್ಲಿ ಮತ ಎಣಿಕೆ ಶುರುವಾಗಿದ್ದು, ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ. ಕೇವಲ ಒಂದೇ ಗಂಟೆಯಲ್ಲಿ ಮ್ಯಾಜಿಕ್​ ನಂಬರ್​ನ ಅರ್ಧ ಪ್ರತಿಶತ ಗಡಿಯನ್ನು ದಾಟಿತು. ಅಧಿಕಾರದಲ್ಲಿರುವ ಬಿಜೆಪಿ ಸದ್ಯದ ಮಟ್ಟಿಗೆ ಹಿನ್ನಡೆ ಅನುಭವಿಸಿದೆ. ಈ ಕುರಿತು ಕಾಂಗ್ರೆಸ್ ಒಂದು ಟ್ವೀಟ್ ಮಾಡಿದ್ದು “ನಾವು ಗೆಲ್ಲುತ್ತೇವೆ, ಈ ಕುರಿತು ತುಂಬಾ ಆತ್ಮವಿಶ್ವಾಸ ಹೊಂದಿದ್ದೇನೆ ಎಂದು ಟ್ವಿಟ್​ ಮಾಡಿದ್ದಾರೆ.

ಇದನ್ನೂ ಓದಿ:Karnataka Assembly Election 2023 Result Live: ಕರ್ನಾಟಕ ಚುನಾವಣಾ ಫಲಿತಾಂಶ ನೇರಪ್ರಸಾರ

ಇದರ ಜೊತೆಗೆ 224 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದು ಕಾಂಗ್ರೆಸ್ ನಾಯಕರು ವಿಶ್ವಾಸ ವ್ಯಕ್ತಪಡಿಸಿದರು. ಇನ್ನು ಒಂದು ವೇಳೆ ಕಾಂಗ್ರೆಸ್​ ಗೆಲುವು ಸಾಧಿಸಿದರೂ ಕೂಡ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರು ರೇಸ್​ನಲಿದ್ದು, ಪಕ್ಷಕ್ಕೆ ದೊಡ್ಡ ಸವಾಲಾಗಬಹುದು.

ಇನ್ನಷ್ಟು ಚುನಾವಣಾ ಫಲಿತಾಂಶದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!