AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್‌ 25ರಂದು ಮೈಸೂರಿಗೆ ಪ್ರಿಯಾಂಕಾ ಗಾಂಧಿ; ಕ್ಷೇತ್ರ ಪ್ರವಾಸ ಹೀಗಿದೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಕರ್ನಾಟಕ ಪ್ರವಾಸ ಮಾಡಿದ್ದಾರೆ. ಇದರ ಬೆನ್ನಲ್ಲೇ ಕೈ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಮೈಸೂರು ಪ್ರವಾಸಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಏಪ್ರಿಲ್ 25ರಂದು ಪ್ರಿಯಾಂಕಾ ಗಾಂಧಿ ಜಿಲ್ಲಾ ಪ್ರವಾಸ ಮಾಡಲಿದ್ದಾರೆ.

ಏಪ್ರಿಲ್‌ 25ರಂದು ಮೈಸೂರಿಗೆ ಪ್ರಿಯಾಂಕಾ ಗಾಂಧಿ; ಕ್ಷೇತ್ರ ಪ್ರವಾಸ ಹೀಗಿದೆ
ಏಪ್ರಿಲ್ 25ರಂದು ಪ್ರಿಯಾಂಕಾ ಗಾಂಧಿ ಮೈಸೂರು ಜಿಲ್ಲಾ ಪ್ರವಾಸImage Credit source: ANI
Rakesh Nayak Manchi
|

Updated on:Apr 23, 2023 | 10:41 PM

Share

ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಬಹುಮತದೊಂದಿಗೆ ಗೆಲುವು ಸಾಧಿಸಿ ಸರ್ಕಾರ ರಚಿಸಲು ಶತಾಯ ಗತಾಯವಾಗಿ ಪ್ರಯತ್ನಿಸುತ್ತಿರುವ ರಾಜ್ಯ ಕಾಂಗ್ರೆಸ್ (Congress)​ ನಾಯಕರಿಗೆ ಶಕ್ತಿ ತುಂಬಲು ಹೈಕಮಾಂಡ್ ನಾಯಕರು ಕರ್ನಾಟಕ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇಂದು (ಏಪ್ರಿಲ್ 23) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಪ್ರಚಾರ ನಡೆಸಿದ್ದಾರೆ. ಇದರ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ (Priyanka Gandhi) ಮೈಸೂರು ಜಿಲ್ಲಾ ಪ್ರವಾಸಕ್ಕೂ ಮುಹೂರ್ತ ಫಿಕ್ಸ್‌ ಆಗಿದೆ. ಹೌದು, ಏಪ್ರಿಲ್‌ 25ರಂದು ಪ್ರಿಯಾಂಕಾ ಗಾಂಧಿ ಮೈಸೂರು (Mysuru) ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ನಡೆಯುವ ಸಾರ್ವಜನಿಕ‌ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಜಿಲ್ಲೆಯ ಟಿ.ನರಸೀಪುರ ಕ್ಷೇತ್ರದ ಹೆಳವರಹುಂಡಿಯಲ್ಲಿ ಮಧ್ಯಾಹ್ನ 12ರಿಂದ 1 ಗಂಟೆವರೆಗೆ ನಡೆಯುವ ಸಾರ್ವಜನಿಕ‌ ಸಭೆಯಲ್ಲಿ ಪಾಲ್ಗೊಂಡ ನಂತರ ಪ್ರಿಯಾಂಕಾ ಗಾಂಧಿ, ಮಧ್ಯಾಹ್ನ 2.30ಕ್ಕೆ ಹನೂರು ಕ್ಷೇತ್ರಕ್ಕೆ ತೆರಳಲಿದ್ದಾರೆ. ಅಲ್ಲಿ ಗೌರಿಶಂಕರ್ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಿರುವ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3ರಿಂದ ಸಂಜೆ 4 ಗಂಟೆವರೆಗೆ ಮಹಿಳೆಯರ ಜೊತೆ ಸಂವಾದ ನಡೆಸಲಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಹೆಸರು ಪ್ರಸ್ತಾಪಿಸಿದ ಚಿತ್ತರಗಿ ಶ್ರೀ, ಪೇಚಿಗೆ ಸಿಲುಕಿದ ಸಂಘಟಕರು

ಸಂವಾದ ಕಾರ್ಯಕ್ರಮದ ಬಳಿಕ ಪ್ರಿಯಾಂಕಾ ಗಾಂಧಿ ಅವರು 4.15ಕ್ಕೆ ಕೆ.ಆರ್.ನಗರಕ್ಕೆ ತೆರಳಲಿದ್ದಾರೆ. ಸಂಜೆ 5.30ರಿಂದ 6.30ರವರೆಗೆ ಅಲ್ಲಿ ನಡೆಯುವ ರೋಡ್‌ಶೋನಲ್ಲಿ ಭಾಗಿಯಾಗಲಿದ್ದಾರೆ. ತೋಪಮ್ಮನ ದೇವಸ್ಥಾನದಿಂದ ಸುಮಾರು‌ 2 ಕಿ.ಮೀ. ವರೆಗೆ ಈ ರೋಡ್‌ ಶೋ ನಡೆಯಲಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:41 pm, Sun, 23 April 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ