AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್‌ ಪರ ಐತಿಹಾಸಿಕ ತೀರ್ಪು ನೀಡಿದ ಕರ್ನಾಟಕದ ಜನತೆಗೆ ಧನ್ಯವಾದ ಹೇಳಿದ ಪ್ರಿಯಾಂಕಾ ಗಾಂಧಿ ವಾದ್ರಾ

ನಾವು ಕೆಲವು ಭರವಸೆಗಳೊಂದಿಗೆ ಜನರ ಬಳಿಗೆ ಹೋಗಿದ್ದೇವೆ ಮತ್ತು ನಾವು ಅವುಗಳನ್ನು ಪೂರೈಸಬೇಕು. ಜನರಿಗಾಗಿ ಕೆಲಸ ಮಾಡಬೇಕು. ಮುಂದೆ ಏನಾಗುತ್ತದೆ ಎಂಬುದನ್ನು ಸಾರ್ವಜನಿಕರು ನಮಗೆ ತಿಳಿಸುತ್ತಾರೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್‌ ಪರ ಐತಿಹಾಸಿಕ ತೀರ್ಪು ನೀಡಿದ ಕರ್ನಾಟಕದ ಜನತೆಗೆ ಧನ್ಯವಾದ ಹೇಳಿದ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ ವಾದ್ರಾ
ರಶ್ಮಿ ಕಲ್ಲಕಟ್ಟ
|

Updated on: May 13, 2023 | 5:47 PM

Share

ಬೆಂಗಳೂರು: ರಾಜ್ಯ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷ 130 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕರ್ನಾಟಕದಲ್ಲಿ (Karnataka Assembly Election) “ಐತಿಹಾಸಿಕ ಜನಾದೇಶ ನೀಡಿದ” ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ  ವಾದ್ರಾ (Priyanka Gandhi Vadra) ಧನ್ಯವಾದ ಹೇಳಿದ್ದಾರೆ.

ಕಾಂಗ್ರೆಸ್‌ ಪಕ್ಷದ ಪರ ಐತಿಹಾಸಿಕ ತೀರ್ಪು ನೀಡಿದ ಕರ್ನಾಟಕದ ಜನತೆಗೆ ತುಂಬು ಹೃದಯದ ಧನ್ಯವಾದಗಳು. ಭ್ರಷ್ಟಾಚಾರ, ಕೋಮುವಾದ, ಬೆಲೆ ಏರಿಕೆ ವಿರುದ್ಧ ಕನ್ನಡಿಗರು ಕೈ ಏರಿಸಿದ್ದಾರೆ ಮತ್ತು ನಮ್ಮ ರಾಷ್ಟ್ರವನ್ನು ಒಗ್ಗೂಡಿಸುವುದಕ್ಕಾಗಿ ಕರ್ನಾಟಕದ ಜನತೆ ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಕಾಂಗ್ರೆಸ್‌ ಕಾರ್ಯಕರ್ತರಿಗೆ ಮತ್ತು ಕರ್ನಾಟಕ ಕಾಂಗ್ರೆಸ್‌ನ ನಾಯಕರಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ ಶ್ರಮಕ್ಕೆ ಪ್ರತಿಫಲ ಸಿಕ್ಕಿದೆ. ಕರ್ನಾಟಕದ ಜನತೆಗೆ ಕಾಂಗ್ರೆಸ್‌ ಪಕ್ಷವು ನೀಡಿದ್ದ ಭರವಸೆಗಳನ್ನು ಪೂರ್ಣಗೊಳಿಸಲು ಬದ್ಧವಾಗಿದೆ. ಜೈ ಕರ್ನಾಟಕ, ಜೈ ಕಾಂಗ್ರೆಸ್‌ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.

ಇಂದು ಸಂಜೆ ಮಾಧ್ಯಮದವರೊಂದಿಗೆ ಮಾತನಾಡಿದ  ಪ್ರಿಯಾಂಕಾ, ನಾನು ಹೇಳಿದಂತೆ, ಇದು (ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವುದು) ದೊಡ್ಡ ಜವಾಬ್ದಾರಿಯಾಗಿದೆ. ನಾವು ಕೆಲವು ಭರವಸೆಗಳೊಂದಿಗೆ ಜನರ ಬಳಿಗೆ ಹೋಗಿದ್ದೇವೆ ಮತ್ತು ನಾವು ಅವುಗಳನ್ನು ಪೂರೈಸಬೇಕು. ಜನರಿಗಾಗಿ ಕೆಲಸ ಮಾಡಬೇಕು. ಮುಂದೆ ಏನಾಗುತ್ತದೆ ಎಂಬುದನ್ನು ಸಾರ್ವಜನಿಕರು ನಮಗೆ ತಿಳಿಸುತ್ತಾರೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದರು.

ಚುನಾವಣೆ ಫಲಿತಾಂಶ ಲೈವ್​ ಅಪ್ಡೇಟ್​ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ