ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ ವಿಡಿಯೋ ವೈರಲ್: ಇದು ಫೇಕ್​ ಎಂದ ಕಾಂಗ್ರೆಸ್ ನೂತನ ಶಾಸಕ

ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ನಿನ್ನೆ(ಮೇ.13) ಹೊರಬಿದ್ದಿದ್ದು, ಬೆಳಗಾವಿ (Belagavi) ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಶಾಸಕ ಆಸೀಫ್ ಸೇಠ್ ಗೆಲುವು ಸಾಧಿಸಿದ್ದರು. ಈ ವೇಳೆ ಪಾಕಿಸ್ತಾನ ಜಿಂದಾಬಾದ್​ ಎನ್ನುವ ವಿಡಿಯೋ ವೈರಲ್​ ಆಗಿದ್ದು, ಬಿಜೆಪಿಯ ಕೆಲವರು ಇಂತಹ ಕೆಲಸ ಮಾಡ್ತಿದ್ದಾರೆ ಎಂದು ಶಾಸಕ ಆಸೀಫ್ ಸೇಠ್ ಸ್ಪಷ್ಟನೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ ವಿಡಿಯೋ ವೈರಲ್: ಇದು ಫೇಕ್​ ಎಂದ ಕಾಂಗ್ರೆಸ್ ನೂತನ ಶಾಸಕ
ಕಾಂಗ್ರೆಸ್​ ಶಾಸಕ ಆಸೀಫ್ ಸೇಠ್
Follow us
ಕಿರಣ್ ಹನುಮಂತ್​ ಮಾದಾರ್
|

Updated on: May 14, 2023 | 2:35 PM

ಬೆಳಗಾವಿ: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ(Karnataka Assembly Elections 2023 Result)ನಿನ್ನೆ(ಮೇ.13) ಹೊರಬಿದ್ದಿದ್ದು, ಬೆಳಗಾವಿ (Belagavi) ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಶಾಸಕ ಆಸೀಫ್ ಸೇಠ್(Asif Seth) ಗೆಲುವು ಸಾಧಿಸಿದ್ದರು. ಈ ಹಿನ್ನಲೆ ಅವರ ಸಂಭ್ರಮದಲ್ಲಿ ಯಾರೋ ಕಿಡಿಗೇಡಿಗಳು ‘ಪಾಕಿಸ್ತಾನ್​ ಜಿಂದಾಬಾದ್’ ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿದೆ. ಈ ಕುರಿತು ಕಾಂಗ್ರೆಸ್ ಬೆಂಬಲಿಗರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇನ್ನು ಈ ಬಗ್ಗೆ ಸ್ಪಷ್ಟನೆ ನೀಡಿರುವ ಆಸೀಫ್ ಸೇಠ್ ‘ ಆ ವಿಡಿಯೋ ಫೇಕ್, ಬಿಜೆಪಿಯ ಕೆಲವರು ಇಂತಹ ಕೆಲಸ ಮಾಡ್ತಿದ್ದಾರೆ. ಚುನಾವಣೆ ಸಂದರ್ಭದಲ್ಲೂ ಬಿಜೆಪಿಯವರು ಇದನ್ನೇ ಮಾಡಿದ್ರು, ಈ ವಿಷಯ ಬೆಳಗಾವಿ ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಚರ್ಚಿಸುವೆ. ಮಾನನಷ್ಟ ಮೊಕದ್ದಮೆ ದಾಖಲಿಸಲು ಸಿದ್ಧತೆ ನಡೆಸಿದ್ದೇನೆ ಎಂದು ಹೇಳಿದರು.

ಘಟನೆ ವಿವರ

ಇನ್ನು ಶನಿವಾರ (ಮೇ.13) ನಗರದ ರಾಣಿ ಪಾರ್ವತಿದೇವಿ ಕಾಲೇಜಿನ ಮತ ಎಣಿಕೆ ಕೇಂದ್ರದ ಹೊರಗೆ ಮಧ್ಯಾಹ್ನ ಆಸೀಫ್ ಸೇ‌ಠ್​​ ಗೆಲುವು ಖಾತ್ರಿ ಆಗುತ್ತಿದ್ದಂತೆಯೇ ಅಪಾರ ಸಂಖ್ಯೆಯ ಯುವಕರು ಸುತ್ತ ಸೇರಿದ್ದರು. ಬಣ್ಣಗಳನ್ನು ಎರಚಿ, ಸಂಗೀತ ಹಾಕಿಕೊಂಡು ಕುಣಿದಿದ್ದರು. ಈ ವೇಳೆ ಕಾಂಗ್ರೆಸ್‌ ಧ್ವಜ ಹಿಡಿದು ಬಂದ ಕೆಲವರು ಜಿಂದಾಬಾದ್ ಜಿಂದಾಬಾದ್, ಪಾಕಿಸ್ತಾನ್ ಜಿಂದಾಬಾದ್ ಎಂದು ಮೂರು ಬಾರಿ ಘೋಷಣೆ ಮೊಳಗಿಸಿದ್ದರು. ಹತ್ತಿರದಲ್ಲೇ ಇದ್ದ ಕೆಲವು ಪೊಲೀಸರು ಯುವಕರ ಬಳಿ ಹೋಗಿ ತಾಕೀತು ಮಾಡಿದರು. ಈ ರೀತಿ ಬೇರೆ ಮಾತು ತೆಗೆದರೆ ಪರಿಸ್ಥಿತಿ ನೆಟ್ಟಗೆ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ:ಚುನಾವಣಾ ಆಯೋಗದ ವೆಬ್​ಸೈಟ್​ನಲ್ಲಿ​ ಫಲಿತಾಂಶದ ಅಧಿಕೃತ ಅಂಕಿ-ಸಂಖ್ಯೆ ತಿಳಿಯಿರಿ

ಜಗದೀಶ್ ಶೆಟ್ಟರ್ ಸೋಲು ನನಗೆ ಅತೀವ ಬೇಸರ ತರಿಸಿದೆ

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ‘ಜಗದೀಶ್ ಶೆಟ್ಟರ್ ಸೋಲು ನನಗೆ ಅತೀವ ಬೇಸರ ತರಿಸಿದೆ. ಶೆಟ್ಟರ್​ ನನ್ನ ಪರವಾಗಿಯೂ ಪ್ರಚಾರ ಮಾಡಿದ್ರು, ಬೆಳಗಾವಿಗೆ ಬಂದು ಪ್ರಚಾರ ಮಾಡಿದ್ದರಿಂದ ನಾನು ಗೆದ್ದೆ. ಯಾವಾಗಲೂ ಜಗದೀಶ್ ಶೆಟ್ಟರ್ ಜೊತೆಗೆ ಕಾಂಗ್ರೆಸ್ ಇರುತ್ತೆ. ಕಾಂಗ್ರೆಸ್ ಗೆಲುವಿನಿಂದ ಕರ್ನಾಟಕಕ್ಕೆ ಈಗ ಅಚ್ಛೇದಿನ್​​​ ಬಂತು. ಜೊತೆಗ ಮುಖ್ಯಮಂತ್ರಿ ಯಾರಾಗಬೇಕೆಂದು ಹೈಕಮಾಂಡ್ ನಿರ್ಧರಿಸುತ್ತೆ. ಸಿದ್ದರಾಮಯ್ಯ, ಡಿಕೆಶಿ, ಮಲ್ಲಿಕಾರ್ಜುನ ಖರ್ಗೆ ಸುರ್ಜೇವಾಲಾ ಪ್ರಯತ್ನದಿಂದ ರಾಜ್ಯದಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನ ಗೆದ್ದಿದೆ. ಸಂಜೆ‌ ಬೆಂಗಳೂರಿನಲ್ಲಿ ಸಿಎಲ್‌ಪಿ ಸಭೆ ಇದ್ದು, ಹೀಗಾಗಿ ಹೊರಟಿದ್ದೇವೆ ಎಂದರು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್