ಬೆಳಗಾವಿ: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ(Karnataka Assembly Elections 2023 Result)ನಿನ್ನೆ(ಮೇ.13) ಹೊರಬಿದ್ದಿದ್ದು, ಬೆಳಗಾವಿ (Belagavi) ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನ ಶಾಸಕ ಆಸೀಫ್ ಸೇಠ್(Asif Seth) ಗೆಲುವು ಸಾಧಿಸಿದ್ದರು. ಈ ಹಿನ್ನಲೆ ಅವರ ಸಂಭ್ರಮದಲ್ಲಿ ಯಾರೋ ಕಿಡಿಗೇಡಿಗಳು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿದೆ. ಈ ಕುರಿತು ಕಾಂಗ್ರೆಸ್ ಬೆಂಬಲಿಗರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇನ್ನು ಈ ಬಗ್ಗೆ ಸ್ಪಷ್ಟನೆ ನೀಡಿರುವ ಆಸೀಫ್ ಸೇಠ್ ‘ ಆ ವಿಡಿಯೋ ಫೇಕ್, ಬಿಜೆಪಿಯ ಕೆಲವರು ಇಂತಹ ಕೆಲಸ ಮಾಡ್ತಿದ್ದಾರೆ. ಚುನಾವಣೆ ಸಂದರ್ಭದಲ್ಲೂ ಬಿಜೆಪಿಯವರು ಇದನ್ನೇ ಮಾಡಿದ್ರು, ಈ ವಿಷಯ ಬೆಳಗಾವಿ ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಚರ್ಚಿಸುವೆ. ಮಾನನಷ್ಟ ಮೊಕದ್ದಮೆ ದಾಖಲಿಸಲು ಸಿದ್ಧತೆ ನಡೆಸಿದ್ದೇನೆ ಎಂದು ಹೇಳಿದರು.
ಘಟನೆ ವಿವರ
ಇನ್ನು ಶನಿವಾರ (ಮೇ.13) ನಗರದ ರಾಣಿ ಪಾರ್ವತಿದೇವಿ ಕಾಲೇಜಿನ ಮತ ಎಣಿಕೆ ಕೇಂದ್ರದ ಹೊರಗೆ ಮಧ್ಯಾಹ್ನ ಆಸೀಫ್ ಸೇಠ್ ಗೆಲುವು ಖಾತ್ರಿ ಆಗುತ್ತಿದ್ದಂತೆಯೇ ಅಪಾರ ಸಂಖ್ಯೆಯ ಯುವಕರು ಸುತ್ತ ಸೇರಿದ್ದರು. ಬಣ್ಣಗಳನ್ನು ಎರಚಿ, ಸಂಗೀತ ಹಾಕಿಕೊಂಡು ಕುಣಿದಿದ್ದರು. ಈ ವೇಳೆ ಕಾಂಗ್ರೆಸ್ ಧ್ವಜ ಹಿಡಿದು ಬಂದ ಕೆಲವರು ಜಿಂದಾಬಾದ್ ಜಿಂದಾಬಾದ್, ಪಾಕಿಸ್ತಾನ್ ಜಿಂದಾಬಾದ್ ಎಂದು ಮೂರು ಬಾರಿ ಘೋಷಣೆ ಮೊಳಗಿಸಿದ್ದರು. ಹತ್ತಿರದಲ್ಲೇ ಇದ್ದ ಕೆಲವು ಪೊಲೀಸರು ಯುವಕರ ಬಳಿ ಹೋಗಿ ತಾಕೀತು ಮಾಡಿದರು. ಈ ರೀತಿ ಬೇರೆ ಮಾತು ತೆಗೆದರೆ ಪರಿಸ್ಥಿತಿ ನೆಟ್ಟಗೆ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.
They are saying “Asif Sait Zindabad”.
Hello @DgpKarnataka, any action against this person?? https://t.co/tesVUcWs6U
— Md Asif Khan (@imMAK02) May 13, 2023
ಇದನ್ನೂ ಓದಿ:ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿ ಫಲಿತಾಂಶದ ಅಧಿಕೃತ ಅಂಕಿ-ಸಂಖ್ಯೆ ತಿಳಿಯಿರಿ
ಜಗದೀಶ್ ಶೆಟ್ಟರ್ ಸೋಲು ನನಗೆ ಅತೀವ ಬೇಸರ ತರಿಸಿದೆ
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ‘ಜಗದೀಶ್ ಶೆಟ್ಟರ್ ಸೋಲು ನನಗೆ ಅತೀವ ಬೇಸರ ತರಿಸಿದೆ. ಶೆಟ್ಟರ್ ನನ್ನ ಪರವಾಗಿಯೂ ಪ್ರಚಾರ ಮಾಡಿದ್ರು, ಬೆಳಗಾವಿಗೆ ಬಂದು ಪ್ರಚಾರ ಮಾಡಿದ್ದರಿಂದ ನಾನು ಗೆದ್ದೆ. ಯಾವಾಗಲೂ ಜಗದೀಶ್ ಶೆಟ್ಟರ್ ಜೊತೆಗೆ ಕಾಂಗ್ರೆಸ್ ಇರುತ್ತೆ. ಕಾಂಗ್ರೆಸ್ ಗೆಲುವಿನಿಂದ ಕರ್ನಾಟಕಕ್ಕೆ ಈಗ ಅಚ್ಛೇದಿನ್ ಬಂತು. ಜೊತೆಗ ಮುಖ್ಯಮಂತ್ರಿ ಯಾರಾಗಬೇಕೆಂದು ಹೈಕಮಾಂಡ್ ನಿರ್ಧರಿಸುತ್ತೆ. ಸಿದ್ದರಾಮಯ್ಯ, ಡಿಕೆಶಿ, ಮಲ್ಲಿಕಾರ್ಜುನ ಖರ್ಗೆ ಸುರ್ಜೇವಾಲಾ ಪ್ರಯತ್ನದಿಂದ ರಾಜ್ಯದಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನ ಗೆದ್ದಿದೆ. ಸಂಜೆ ಬೆಂಗಳೂರಿನಲ್ಲಿ ಸಿಎಲ್‌ಪಿ ಸಭೆ ಇದ್ದು, ಹೀಗಾಗಿ ಹೊರಟಿದ್ದೇವೆ ಎಂದರು.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ