ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್, ನಿರುದ್ಯೋಗಿ ಯುವಕರಿಗೆ 3 ಸಾವಿರ ರೂ : ರಾಹುಲ್
ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ, ಆಗ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಹೇಳಿದ್ದಾರೆ.
ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ, ಆಗ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಹೇಳಿದ್ದಾರೆ. ಜೈ ಭಾರತ್ ಸಮಾವೇಶದಲ್ಲಿ ಮಾತನಾಡಿರು ಅವರು, ಕರ್ನಾಟಕದ ಜನತೆಗೆ ಈಗಾಗಲೇ 4 ಭರವಸೆಯನ್ನು ನೀಡಿದ್ದೇವೆ. ಮನೆ ಯಜಮಾನರಿಗೆ 2 ಸಾವಿರ ರೂ ಹಾಗೂ 200 ಯೂನಿಟ್ ಉಚಿತ ವಿದ್ಯುತ್, ಉಚಿತವಾಗಿ 10 ಕೆಜಿ ಅಕ್ಕಿ, ವಿದ್ಯಾವಂತ ನಿರುದ್ಯೋಗಿಗಳಿಗೆ ಕೆಲಸ, ಡಿಪ್ಲೊಮಾ ಪದವೀಧರರಿಗೆ 1,500 ರೂ., ಪದವೀಧರರಿಗೆ 3000 ಸಾವಿರ ರೂ ನೀಡಲಾಗುತ್ತದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಈ ಬೇಡಿಕೆಯನ್ನು ಈಡೇರಿಸುತ್ತೇವೆ, ನಾವು ಜನರ ಪರವಾಗಿ ಕೆಲಸ ಮಾಡುತ್ತೇವೆ ಎಂದಿದ್ದಾರೆ.
ಸಮಾವೇಶದಲ್ಲಿ 1 ಲಕ್ಷ ಜನರು ಸೇರಿದ್ದಾರೆ, 2019ರ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಕೋಲಾರದಲ್ಲಿ ಮಾಡಿದ ಭಾಷಣದ ಹಿನ್ನೆಲೆ ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆಯಲ್ಲಿ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಹಾಗೆಯೇ ಇಲ್ಲಿಂದಲೇ 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸುತ್ತಿದ್ದಾರೆ.
ಮತ್ತಷ್ಟು ಓದಿ: ಕೋಲಾರಕ್ಕೆ ರಾಹುಲ್ ಗಾಂಧಿ ಆಗಮನ; ಜೈ ಭಾರತ್ ಸಮಾವೇಶಕ್ಕೆ ಲಕ್ಷ ಜನ ಸೇರುವ ನಿರೀಕ್ಷೆ
ಕಾಂಗ್ರೆಸ್ ನಾಯಕ ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸಿದ್ದು, ಎರಡು ದಿನಗಳ ಕಾಲ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಪ್ರಮುಖ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದಾರೆ.
ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:08 pm, Sun, 16 April 23