Rahul Gandhi Rally: ಮಲ್ಲಿಕಾರ್ಜುನ ಖರ್ಗೆ ತವರು ಜಿಲ್ಲೆಯಲ್ಲಿ ಇಂದು ರಾಹುಲ್ ಗಾಂಧಿ ಮತಬೇಟೆ

ಕಾಂಗ್ರೆಸ್,​ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಗುರಿಯಿಟ್ಟುಕೊಂಡಿದ್ದು, ಆದ್ದರಿಂದಲೇ ಇಂದು (ಏ.28) ವಿಶೇಷ ವಿಮಾನದ ಮೂಲಕ ಮಂಗಳೂರಿನಿಂದ ಕಲಬುರಗಿಗೆ ರಾಹುಲ್​ ಗಾಂಧಿ ಆಗಮಿಸಲಿದ್ದಾರೆ.

Rahul Gandhi Rally: ಮಲ್ಲಿಕಾರ್ಜುನ ಖರ್ಗೆ ತವರು ಜಿಲ್ಲೆಯಲ್ಲಿ ಇಂದು ರಾಹುಲ್ ಗಾಂಧಿ ಮತಬೇಟೆ
ರಾಹುಲ್​ ಗಾಂಧಿ
Follow us
|

Updated on:Apr 28, 2023 | 7:20 AM

ಕಲಬುರಗಿ: ವಿಧಾನಸಭೆ ಚುನಾವಣೆ(Karnataka Assembly Election)ಗೆ ಇನ್ನು ಸರಿಯಾಗಿ 12 ದಿನಗಳಿದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರಕ್ಕೀಳಿದಿದೆ. ಈ ಮಧ್ಯೆ ಕಾಂಗ್ರೆಸ್,​ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಗುರಿಯಿಟ್ಟುಕೊಂಡಿದೆ. ಆದ್ದರಿಂದಲೇ ಇಂದು (ಏ.28) ವಿಶೇಷ ವಿಮಾನದ ಮೂಲಕ ಮಂಗಳೂರಿನಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ರಾಹುಲ್​ ಗಾಂಧಿ(Rahul Gandhi) ಆಗಮಿಸಲಿದ್ದಾರೆ. ಇಂದು ಮುಂಜಾನೆ 10.45 ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಬಳಿಕ ಹೆಲಿಕಾಪ್ಟರ್ ಮೂಲಕ ಜಿಲ್ಲೆಯ ಜೇವರ್ಗಿ ಪಟ್ಟಣಕ್ಕೆ ತೆರಳಲಿದ್ದಾರೆ.

ಜೇವರ್ಗಿ ತಾಲೂಕು ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಸಮಾವೇಶ

ಹೌದು ಅಬ್ಬರದ ಪ್ರಚಾರ ಕೈಗೊಂಡಿರುವ ಕಾಂಗ್ರೆಸ್, ಜೇವರ್ಗಿ ತಾಲೂಕು ಕ್ರೀಡಾಂಗಣದಲ್ಲಿ ಬೃಹತ್​ ಸಮಾವೇಶ ಏರ್ಪಡಿಸಿದ್ದು, ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಇನ್ನು ಕಾರ್ಯಕ್ರಮಕ್ಕೆ ಜಿಲ್ಲೆಯ ಒಂಬತ್ತು ಕ್ಷೇತ್ರಗಳಿಂದ ಐವತ್ತು ಸಾವಿರಕ್ಕೂ ಹೆಚ್ಚು ಜನ ಸೇರಿಸಿ ಕೈ ಕಾರ್ಯಕರ್ತರು ಬೃಹತ್ ಸಮಾವೇಶ ಏರ್ಪಡಿಸಿದ್ದಾರೆ. ಇನ್ನು ಸಮಾವೇಶ ಮುಗಿಸಿಕೊಂಡು ಮಧ್ಯಾಹ್ನ 1.10 ಕ್ಕೆ ಜೇವರ್ಗಿಯಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ತೆರಳಿ, ಅಲ್ಲಿಂದ ವಿಶೇಷ ವಿಮಾನದ ಮೂಲಕ ರಾಹುಲ್ ಗಾಂಧಿ ಬಳ್ಳಾರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಇದನ್ನೂ ಓದಿ:ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ: ರಾಜಕೀಯ ಅಸ್ತ್ರವಾಗಿಸಿಕೊಂಡ ಬಿಜೆಪಿ ನಾಯಕರು

ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಇಂದು(ಏ.28) ರೋಡ್ ಶೋ ನಡೆಸಲಿರುವ ಸಿಎಂ ಬಸವರಾಜ್ ಬೊಮ್ಮಾಯಿ

ಕಲಬುರಗಿ: ಇಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಸಮಾವೇಶದ ಮಧ್ಯೆ, ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ರೋಡ್ ಶೋ ನಡೆಸಲಿದ್ದಾರೆ. ವಿಶೇಷ ವಿಮಾನ ಮೂಲಕ 10.45 ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬೊಮ್ಮಾಯಿ ಆಗಮಿಸಲಿದ್ದಾರೆ. ಬಳಿಕ ಅಲ್ಲಿಂದ ಸೇಡಂ ಪಟ್ಟಣಕ್ಕೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ತೆರಳಿ 11. 30 ಕ್ಕೆ ಸೇಡಂ ಪಟ್ಟಣದಲ್ಲಿ ಸೇಡಂ ಬಿಜೆಪಿ ಅಭ್ಯರ್ಥಿ ರಾಜಕುಮಾರ ಪಾಟೀಲ್ ತೇಲ್ಕೂರ್ ಪರ ರೋಡ್ ಶೋ ನಡೆಸಲಿದ್ದಾರೆ. ನಂತರ ಸೇಡಂನಿಂದ ಯಾದಗಿರಿ ಜಿಲ್ಲೆಯ ಶಹಪೂರ್ ಪಟ್ಟಣಕ್ಕೆ ಹೋಗಲಿದ್ದು, ಮಧ್ಯಾಹ್ನ 1.30 ಕ್ಕೆ ಶಹಾಪುರ ಪಟ್ಟಣದಲ್ಲಿ ರೋಡ್ ಶೋ ನಡೆಸಲಿದ್ದು, ಬಳಿಕ ಮಧ್ಯಾಹ್ನ 3.30 ಕ್ಕೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಸಂಜೆ 5ರಿಂದ ಕಲಬುರಗಿ ನಗರದ ಉತ್ತರ ಮತ್ತು ದಕ್ಷಿಣ ಕ್ಷೇತ್ರದಲ್ಲಿ ರೋಡ್ ಶೋ ಮತ್ತು ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ಜಿಲ್ಲೆಯಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.

ಜಿಲ್ಲೆಯಲ್ಲಿ ಇಂದು ಮಾಜಿ ಸಿಎಂ ಯಡಿಯೂರಪ್ಪ ಪ್ರಚಾರ

ಕಲಬುರಗಿ: ಜಿಲ್ಲೆಯಲ್ಲಿ ಇಂದು ಮಾಜಿ ಸಿಎಂ ಯಡಿಯೂರಪ್ಪ ಪ್ರಚಾರ ಮಾಡಲಿದ್ದಾರೆ. ಒಂದು ಕಡೆ ಸಿಎಂ ಬಸವರಾಜ ಬೊಮ್ಮಾಯಿ ರೋಡ್​ ಶೋ ಮಾಡುತ್ತಿದ್ದರೆ, ಇತ್ತ ಜಿಲ್ಲೆಯ ನಾಲ್ಕು ವಿಧಾನಸಭೆ ಕ್ಷೇತ್ರದಲ್ಲಿ ಯಡಿಯೂರಪ್ಪ ಪ್ರಚಾರ ಮಾಡಲಿದ್ದಾರೆ. ಇಂದು ಮುಂಜಾನೆ 10 ಗಂಟೆಗೆ ಕಮಲಾಪುರ ಪಟ್ಟಣದಲ್ಲಿ ಗ್ರಾಮೀಣ ಶಾಸಕ ಬಸವರಾಜ್ ಮತ್ತಿಮಡು ಪರ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಮಧ್ಯಾಹ್ನ 12 ಕ್ಕೆ ಅಫಜಲಪುರದಲ್ಲಿ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಭಾಗಿಯಾಗಿ, ಮಧ್ಯಾಹ 2.30 ಕ್ಕೆ ಜೇವರ್ಗಿ ಕ್ಷೇತ್ರದ ಯಡ್ರಾಮಿ ಪಟ್ಟಣದಲ್ಲಿ ಸಭೆ ಮಾಡಿ, ನಂತರ ಸಂಜೆ 5 ಕ್ಕೆ ಆಳಂದ ಪಟ್ಟಣದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:03 am, Fri, 28 April 23

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?