ಕೋಲಾರ: ಭಾರತ ಜೋಡೋ (Bharth Jodo Yatra) ಯಾತ್ರೆ ನಂತರ ಕಾಂಗ್ರೆಸ್ (Congress) ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ (Rahul Gandhi) ಎರಡನೇ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದು ಕೋಲಾರದಲ್ಲಿ ನಡೆಯಲಿರುವ “ಸತ್ಯಮೇವ ಜಯತೆ” ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಪೂರ್ವ ನಿಗದಿಯಂತೆ ರಾಹುಲ್ ಗಾಂಧಿ ಏಪ್ರಿಲ್ 5 ರಂದು ರಾಜ್ಯಕ್ಕೆ ಆಗಮಿಸಬೇಕಿತ್ತು, ಆದರೆ ಏಪ್ರಿಲ್ 9ಕ್ಕೆ ಮರುನಿಗದಿಯಾಗಿದೆ. ಇನ್ನು ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ್ದಕ್ಕೆ ಕೋಲಾರದಿಂದಲೇ (Kolar) ಪ್ರತ್ಯುತ್ತರ ನೀಡಲು ಕಾಂಗ್ರೆಸಿಗರು ಮುಂದಾಗಿದ್ದಾರೆ. ರಾಹುಲ್ ಗಾಂಧಿ ರಾಜ್ಯ ಪ್ರವಾಸ ಭೇಟಿ ಹಿನ್ನೆಲೆ ನಿಗದಿಯಾಗಿದ್ದ ಸಭೆ ಕೂಡ ಮೊಟಕುಗೊಂಡಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಡಾ. ಜಿ. ಪರಮೇಶ್ವರ್, ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್, ಭೈರತಿ ಸುರೇಶ್, ಅಖಂಡ ಶ್ರೀನಿವಾಸ್ ಮೂರ್ತಿ ಇನ್ನೀತರ ನಾಯಕರು ಭಾಗಿಯಾಗಲಿದ್ದರು. ಇನ್ನು ಪೂರ್ವ ಸಿದ್ದತೆಗಳ ಪರಿಶೀಲನೆಗೆ ನಾಳೆ (ಏ.01) ರಂದು ಕೋಲಾರಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭೇಟಿ ನೀಡಲಿದ್ದಾರೆ.
ಇದನ್ನೂ ಓದಿ: ನಮ್ಮ ಮನೆಯೇ ನಿಮ್ಮ ಮನೆ: ರಾಜ್ಯ ಕಾಂಗ್ರೆಸ್ ನಾಯಕರಿಂದ ರಾಹುಲ್ ಗಾಂಧಿಗೆ ಆಹ್ವಾನ
2ನೇ ಹಂತದಲ್ಲಿ ಕಾಂಗ್ರೆಸ್ನ 100 ಟಿಕೆಟ್ ಕ್ಲಿಯರ್ ಮಾಡುತ್ತೇವೆ. ನಿನ್ನೆ ಕಾಂಗ್ರೆಸ್ನ ಚುನಾವಣಾ ಸಮಿತಿ ಸಭೆ ನಡೆದಿದೆ. 3 ಅಥವಾ 4 ಕ್ಷೇತ್ರ ಬಿಟ್ಟು ಉಳಿದೆಲ್ಲ ಕ್ಷೇತ್ರಗಳನ್ನು ಕ್ಲಿಯರ್ ಮಾಡುವೆ. ಹಾಲಿ ಶಾಸಕರಿಗೆ ಟಿಕೆಟ್ ನೀಡುತ್ತೇವೆ, ಈ ಬಗ್ಗೆ ಚರ್ಚೆ ಆಗುತ್ತಿದೆ. ಟಿಕೆಟ್ ವಿಚಾರದಲ್ಲಿ ಯಾವುದೇ ಊಹಾಪೋಹ ಬೇಡವೆಂದು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:09 pm, Fri, 31 March 23