ರಾಯಚೂರು: ಬಿಜೆಪಿ ಪ್ರಚಾರ ವಾಹನದ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಲ್ಲು ತೂರಾಟ ಆರೋಪ; ಪ್ರಕರಣ ದಾಖಲು

ವಿಧಾನಸಭೆ ಚುನಾವಣೆಗೆ ಇನ್ನು 11 ದಿನಗಳು ಬಾಕಿಯಿದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿದೆ. ಈ ಮಧ್ಯೆ ಮೈಸೂರು, ತುಮಕೂರು ಭಾಗದಲ್ಲಿ ಕಲ್ಲು ತೂರಾಟಗಳಾದ ಬೆನ್ನಲ್ಲೆ ಇದೀಗ ರಾಯಚೂರಿನಲ್ಲೂ ಕಲ್ಲುತೂರಾಟವಾಗಿದೆ. ಹೌದು ಜಿಲ್ಲೆಯ ಸಿಂಧನೂರು ತಾಲೂಕಿನ ಮಸ್ಕಿ ವಿಧಾನಸಭಾ ಕ್ಷೇತ್ರದ ತುರ್ವಿಹಾಳ ಪಟ್ಟಣದಲ್ಲಿ ಬಿಜೆಪಿ ಪ್ರಚಾರ ವಾಹನದ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಲ್ಲು ತೂರಾಟ ಆರೋಪ ಕೇಳಿಬಂದಿದೆ.

ರಾಯಚೂರು: ಬಿಜೆಪಿ ಪ್ರಚಾರ ವಾಹನದ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಲ್ಲು ತೂರಾಟ ಆರೋಪ; ಪ್ರಕರಣ ದಾಖಲು
ರಾಯಚೂರಿನಲ್ಲಿ ಕಲ್ಲು ತೂರಾಟ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Apr 29, 2023 | 10:57 AM

ರಾಯಚೂರು: ವಿಧಾನಸಭೆ ಚುನಾವಣೆ(Karnataka Assembly Election)ಗೆ ಇನ್ನು 11 ದಿನಗಳು ಬಾಕಿಯಿದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿದೆ. ಈ ಮಧ್ಯೆ ಮೈಸೂರು, ತುಮಕೂರು ಭಾಗದಲ್ಲಿ ಕಲ್ಲು ತೂರಾಟಗಳಾದ ಬೆನ್ನಲ್ಲೆ ಇದೀಗ ರಾಯಚೂರಿನಲ್ಲಿಯೂ ಕಲ್ಲು ತೂರಾಟವಾಗಿದೆ. ಹೌದು ಜಿಲ್ಲೆಯ ಸಿಂಧನೂರು(Sindhanur)ತಾಲೂಕಿನ ಮಸ್ಕಿ ವಿಧಾನಸಭಾ ಕ್ಷೇತ್ರದ ತುರ್ವಿಹಾಳ ಪಟ್ಟಣದಲ್ಲಿ ಬಿಜೆಪಿ(BJP) ಪ್ರಚಾರ ವಾಹನದ ಮೇಲೆ ಕಾಂಗ್ರೆಸ್(Congress) ಕಾರ್ಯಕರ್ತರಿಂದ ಕಲ್ಲು ತೂರಾಟ ಆರೋಪ ಕೇಳಿಬಂದಿದೆ. ನಿನ್ನೆ(ಏ.28) ಬೆಳಿಗ್ಗೆಯಿಂದ ಕ್ರುಸರ್ ವಾಹನದ ಮೂಲಕ ಬಿಜೆಪಿ ಕಾರ್ಯಕರ್ತರು ಮಸ್ಕಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರ ಪ್ರಚಾರ ಮಾಡುತ್ತಿದ್ದು, ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಬೆಂಬಲಿಗರಿಂದ ಕ್ರುಸರ್ ವಾಹನದ ಗಾಜು ಒಡೆದು ಅಟ್ಟಹಾಸ ಮೆರೆದಿರುವ ಆರೋಪ ಕೇಳಿಬಂದಿದ್ದು, ತುರ್ವಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಜೆಡಿಎಸ್​ ಕಾರ್ಯಕರ್ತರ ನಡುವೆ ಗಲಾಟೆ

ಹಾಸನ: ಜಿಲ್ಲೆಯ ಅರಸೀಕೆರೆ ತಾಲೂಕಿನ ನಾಗರಹಳ್ಳಿಯಲ್ಲಿ ಕಾಂಗ್ರೆಸ್ ಜೆಡಿಎಸ್​ ಕಾರ್ಯಕರ್ತರ ನಡುವೆ ಗಲಾಟೆಯಾಗಿದೆ. ಗ್ರಾಮದ ಜೆಡಿಎಸ್​ ಕಾರ್ಯಕರ್ತ ಕಿರಣ್ ಮೇಲೆ ಬ್ಲೇಡ್‌ನಿಂದ ಇರಿದು ಕಾಂಗ್ರೆಸ್​ ಕಾರ್ಯಕರ್ತರಿಂದ ಹಲ್ಲೆ ಆರೋಪ ಕೇಳಿಬಂದಿದೆ. ನಿನ್ನೆ(ಏ.28) ರಾತ್ರಿ ಅರಸೀಕೆರೆ ‘ಕೈ’ ಅಭ್ಯರ್ಥಿ ಶಿವಲಿಂಗೇಗೌಡ ಪರ ಪ್ರಚಾರಕ್ಕೆ ಪತ್ನಿ ಹಾಗೂ ಪುತ್ರ ತೆರಳಿದ್ದರು. ಈ ವೇಳೆ ಯಾಕೆ ಜೋರಾಗಿ ಜೈಕಾರ ಹಾಕುತ್ತಿದ್ದೀರಾ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಶ್ನೆ ಮಾಡಿದ್ದಕ್ಕೆ ಯುವಕರ ಗುಂಪು ಕಿರಣ್ ಮೇಲೆ ಹಲ್ಲೆ ಮಾಡಿದೆ. ಗಾಯಾಳು ಜೆಡಿಎಸ್​ ಕಾರ್ಯಕರ್ತ ಕಿರಣ್​ಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಡಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಯಡಿಯೂರಪ್ಪ ಮನೆಗೆ ಕಲ್ಲು ತೂರಾಟ ಕಾಂಗ್ರೆಸ್ ಪ್ರಚೋದನೆ; ಸಿಎಂ ಬಸವರಾಜ ಬೊಮ್ಮಾಯಿ

ನಿನ್ನೆ(ಏ.28) ತುಮಕೂರಿನಲ್ಲಿ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ ಮೇಲೆ ಕಲ್ಲೆಸೆದಿದ್ದ ದುಷ್ಕರ್ಮಿ

ತುಮಕೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳು ಮತಬೇಟೆಯಲ್ಲಿ ನಿರತರಾಗಿದ್ದಾರೆ. ಈ ಹೊತ್ತಿನಲ್ಲಿ ಜಿಲ್ಲೆಯ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಲ್ಲೆಸೆತ ಪ್ರಕರಣ ಕಾನೂನು ಸುವ್ಯವಸ್ಥೆಯನ್ನ ಭಂಗವುಂಟು ಮಾಡಿದಂತಾಗಿದೆ. ಹೌದು, ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿರುವ ಕೊರಟಗೆರೆ ಕ್ಷೇತ್ರದಲ್ಲಿ ನಿನ್ನೆ(ಏ.28) ಪ್ರಚಾರ ನಿರತ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ ಮೇಲೆ ಕಿಡಿಗೇಡಿ ಕಲ್ಲೆಸೆದಿದ್ದ. ಮುಂಜಾನೆಯಿಂದಲೂ ಕ್ಷೇತ್ರದಲ್ಲಿ ತಮ್ಮ ಅಪಾರ ಕಾರ್ಯಕರ್ತರೊಟ್ಟಿಗೆ ಪ್ರಚಾರ ನಡೆಸುತ್ತಿದ್ದ ಪರಮೇಶ್ವರ್, ಮಧ್ಯಾಹ್ನದ ವೇಳೆಗೆ ಕೊರಟಗೆರೆ ತಾಲ್ಲೂಕಿನ ಭೈರೇನಹಳ್ಳಿಗೆ ಆಗಮಿಸಿದ್ದರು. ಈ ವೇಳೆ ಜೆಸಿಬಿ ಮೂಲಕ ಹೂ ಸುರಿಯಲು, ಕ್ರೇನ್ ಮೂಲಕ ಬೃಹತ್ ಹೂವಿನ ಹಾರ ಹಾಕಲು ಅಣಿಯಾಗಿದ್ದ ಕಾರ್ಯಕರ್ತರು, ಪರಮೇಶ್ವರ್ ಆಗಮಿಸಿದ ಕೂಡಲೇ ಅವರನ್ನ ಹೆಗಲ ಮೇಲೆ ಎತ್ತಿ ಕುಣಿಸಿದ್ದಾರೆ. ಹೂ ಸುರಿಯೋ ವೇಳೆಗೆ ದಿಢೀರನೇ ಕಲ್ಲೊಂದು ಪರಮೇಶ್ವರ್ ತಲೆಗೆ ತಾಗಿ ರಕ್ತಸ್ರಾವವಾಗಿತ್ತು. ಕೂಡಲೇ ಪರಮೇಶ್ವರ್ ಅವರನ್ನ ಕೆಳಗಿಳಿಸಿದ ಕಾರ್ಯಕರ್ತರು, ಹತ್ತಿರದ ಅಕ್ಕಿರಾಂಪುರ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು. ಬಳಿಕ ತುಮಕೂರಿನ ಸಿದ್ದಾರ್ಥನಗರದ ತಮ್ಮ ನಿವಾಸಕ್ಕೆ ರವಾನಿಸಿ ವೈದ್ಯರ ತಂಡ ಚಿಕಿತ್ಸೆ ನೀಡಿತ್ತು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:57 am, Sat, 29 April 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್