Kalghatagi Election Results: ಕಲಘಟಗಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ನಾಗರಾಜ ಛಬ್ಬಿಗೆ ಸವಾಲೆಸೆದ ಸಂತೋಷ್ ಲಾಡ್
Kalghatagi Assembly Election Result 2023 Live Counting Updates: ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಸಂತೋಷ್ ಲಾಡ್, ಬಿಜೆಪಿಯಿಂದ ನಾಗರಾಜ ಛಬ್ಬಿ ಹಾಗೂ ಜೆಡಿಎಸ್ನಿಂದ ವೀರಪ್ಪ ಶೀಗೆಹಟ್ಟಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.
Kalghatagi Assembly Election Result 2023: ಕಲಘಟಗಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ (Kalghatagi Assembly Constituency) ಬಿಜೆಪಿ ಪಕ್ಷ ಅಭ್ಯರ್ಥಿಯಾಗಿ ನಾಗರಾಜ ಛಬ್ಬಿ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್ ಟಿಕೆಟ್ ವಂಚಿತ ನಾಗರಾಜ ಛಬ್ಬಿಗೆ ಟಿಕೆಟ್ ನೀಡುವ ಮೂಲಕ ಮಣೆ ಹಾಕಿದ್ದು, ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ಒಂದು ಅವಕಾಶ ಕಲ್ಪಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಂತೋಷ್ ಲಾಡ್ ಕಣಕ್ಕಿಳಿದಿದ್ದಾರೆ. ಸತತ ನಾಲ್ಕನೇ ಭಾರಿಗೆ ಕಲಘಟಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಲಭ್ಯವಾಗಿದೆ. ಟಿಕೆಟ್ಗಾಗಿ ನಾಗರಾಜ ಛಬ್ಬಿ ಮತ್ತು ಸಂತೋಷ್ ಲಾಡ್ ನಡುವೆ ತೀರ್ವ ಪೈಪೋಟಿ ಏರ್ಪಟ್ಟಿತ್ತು.
ಕಳೆದ 2018ರ ಚುನಾವಣೆಯಲ್ಲಿ ಬಿಜಿಪಿಯ ಸಿ. ಎಂ ನಿಂಬಣ್ಣವರ್ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ನ ಸಂತೋಷ್ ಲಾಡ್ ಸುಮಾರು 25 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಪರಾಭವಗೊಂಡಿದ್ದರು.
ಇವುಗಳ ಹೊರತಾಗಿ ಪ್ರಾದೇಶಿಕ ಸಂಘಟನೆಯಾದ ಜೆಡಿಎಸ್ ಕೂಡ ಕಿಂಗ್ಮೇಕರ್ ಆಗುವ ಗುರಿ ಹೊಂದಿದ್ದು, ವೀರಪ್ಪ ಶೀಗೆಹಟ್ಟಿ ಅವರನ್ನು ಕಣಕ್ಕಿಳಿಸಿದೆ. ಅದೇ ರೀತಿಯಾಗಿ ಮಂಜುನಾಥ ಜಕ್ಕಣ್ಣನವರ್ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯನ್ನಾಗಿದ್ದಾರೆ.