ಸಿಡಿ ಬಿಡುಗಡೆ ಮಾಡುವುದಾಗಿ ಡಿಕೆ ಶಿವಕುಮಾರ್​ ಬ್ಲ್ಯಾಕ್​ ಮೇಲ್​: ರಮೇಶ್​ ಜಾರಕಿಹೊಳಿ ಆರೋಪ

|

Updated on: May 11, 2023 | 7:07 AM

ಮಂಗಳವಾರ ಮಧ್ಯರಾತ್ರಿ 12.30ಕ್ಕೆ ನನಗೆ ಕರೆ ಮಾಡಿ ಸಿಡಿ ಬಿಡುಗಡೆ ಮಾಡುತ್ತೇನೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಮಾಜಿ ಸಚಿವ, ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಗಂಭೀರ ಆರೋಪ ಮಾಡಿದ್ದಾರೆ.

ಸಿಡಿ ಬಿಡುಗಡೆ ಮಾಡುವುದಾಗಿ ಡಿಕೆ ಶಿವಕುಮಾರ್​ ಬ್ಲ್ಯಾಕ್​ ಮೇಲ್​: ರಮೇಶ್​ ಜಾರಕಿಹೊಳಿ ಆರೋಪ
ಡಿಕೆ ಶಿವಕುಮಾರ್​ (ಬಲಚಿತ್ರ) ರಮೇಶ್​ ಜಾರಕಿಹೊಳಿ (ಎಡಚಿತ್ರ)
Follow us on

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ (DK Shivakumar) ತಮಗೆ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಮಾಜಿ ಸಚಿವ, ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ (Ramesh Jarkiholi) ಗಂಭೀರ ಆರೋಪ ಮಾಡಿದ್ದಾರೆ. ಮಂಗಳವಾರ ಮಧ್ಯರಾತ್ರಿ 12.30ಕ್ಕೆ ನನಗೆ ಕರೆ ಮಾಡಿ ಸಿಡಿ ಬಿಡುಗಡೆ ಮಾಡುತ್ತೇನೆ. ಅಲ್ಲದೇ ಬೆಳಗಾವಿ (Belagavi) ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ (BJP) ಅಭ್ಯರ್ಥಿಗೆ ಬೆಂಬಲ ನೀಡದಂತೆ, ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ವಿರುದ್ಧ ಚುನಾವಣೆಯಲ್ಲಿ ಕೆಲಸ ಮಾಡದಂತೆ ತಾಕೀತು ಮಾಡಿದನು. ಇಲ್ಲದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ರಮೇಶ್​ ಜಾರಕಿಹೊಳಿ ತಿಳಿಸಿದ್ದಾರೆ.

ಗೋಕಾಕ್​ನಲ್ಲಿ ಮಾಧ್ಯಮ ಪ್ರತನಿಧಿಗಳೊಂದಿಗೆ ಮಾತನಾಡಿದ ಅವರು ಮಂಗಳವಾರ ಮಧ್ಯರಾತ್ರಿ 12.30ಕ್ಕೆ ನನಗೆ ಡಿ.ಕೆ.ಶಿವಕುಮಾರ್ ಕರೆ ಮಾಡಿ ಸಿಡಿ ಬಿಡುಗಡೆ ಮಾಡುತ್ತೇನೆ ಅಂತ ಡಿಕೆ ಶಿವಕುಮಾರ್​ ಬ್ಲ್ಯಾಕ್​ಮೇಲ್ ಮಾಡಿದ್ದಾನೆ. ಬಿಡು ಮಗನೆ ನಾನು ಗಟ್ಟಿಯಾಗಿದ್ದೀನಿ ಅಂತ ಹೇಳಿದ್ದೇನೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಹಿಂದೆ ಸರಿಯಲ್ಲ ಅಂದರೇ ನಿನ್ನ ಬಿಡುವುದಿಲ್ಲ ಅಂತ ಹೇಳಿದ. ಬೇಕಾದ್ದೂ ಆಗಲಿ ಬಿಜೆಪಿ ನನ್ನ ಮೇಲೆ ವಿಶ್ವಾಸ ಇಟ್ಟಿದೆ ನಾನು ಹಿಂದೆ ಸರಿಯಲ್ಲ ಎಂದಿದ್ದೇನೆ. ತಕ್ಷಣ ಸಿಡಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ರಮೇಶ್​ ಜಾರಕಿಹೊಳಿ ಒತ್ತಾಯಿಸಿದರು.

ಇದನ್ನೂ ಓದಿ: Karnataka Assembly Polls; ರಮೇಶ್ ಜಾರಕಿಹೊಳಿ 50,000ಕ್ಕಿಂತ ಅಧಿಕ ವೋಟುಗಳಿಂದ ಗೆಲ್ಲುತ್ತಾರೆ: ಲಖನ್ ಜಾರಕಿಹೊಳಿ

ಡಿಕೆ ಶಿವಕುಮಾರ್​ ಮುಂಚೆ ಒಳ್ಳೆಯವನಿದ್ದ ಈಗ ಏಕೆ ಹೀಗೆ ಮಾಡುತ್ತಿದ್ದಾನೆ ಗೊತ್ತಿಲ್ಲ. ದಯವಿಟ್ಟು ಡಿಕೆ ಶಿವಕುಮಾರ್​ ವಿಷಕನ್ಯೆಯಿಂದ ಹೊರಬರುವುದು ಬಹಳ ಒಳ್ಳೆಯದು. ಇಲ್ಲವಾದರೆ ಪಾಪ ಅವನೇ ಅಂತ್ಯವಾಗುತ್ತಾನೆ ಅಂತ ಪರೋಕ್ಷವಾಗಿ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ವಾಗ್ದಾಳಿ ಮಾಡಿದರು.

ಒಂದು ತಿಂಗಳಲ್ಲಿ ಸಿಡಿ ಪ್ರಕರಣವನ್ನು ಸಿಬಿಐಗೆ ಕೊಡಿಸುತ್ತೇನೆ

ಪ್ರಮುಖರನ್ನು ಯಾರನ್ನೋ ಬೈಯ್ದಿದ್ದು ಕಟ್ ಆ್ಯಂಡ್ ಪೇಸ್ಟ್ ಮಾಡಿದ್ದಾನೆ. ಆಡಿಯೋ ಇದೆಯೋ ವಿಡಿಯೋ ಇದೆಯೋ ಗೊತ್ತಿಲ್ಲ. ಮುಂದೆ ಮಂತ್ರಿ ಮಂಡಲ ರಚನೆ ವೇಳೆಯೂ ನನಗೆ ಅವನು ಬ್ಲ್ಯಾಕ್​ಮೇಲ್ ಮಾಡುತ್ತಾನೆ. ನಾನು ಯಾವುದಕ್ಕೂ ಹೆದರಲ್ಲ. ಒಂದು ತಿಂಗಳಲ್ಲಿ ಸಿಡಿ ಪ್ರಕರಣವನ್ನು ಸಿಬಿಐಗೆ ಕೊಡಿಸುತ್ತೇನೆ ಅಂತ ಹೇಳಿದರು.

ಹಟ್ಟಿಹೊಳಿ ರಮೇಶ್ ಜಾರಕಿಹೊಳಿ ವಿರುದ್ಧ ಚನ್ನರಾಜ ಹಟ್ಟಿಹೊಳಿ ವಾಗ್ದಾಳಿ

ಇನ್ನು ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದೇ ತಡ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಎಂಎಲ್​ಸಿ ಚನ್ನರಾಜ ಹಟ್ಟಿಹೊಳಿ ದಿಢೀರ್ ಸುದ್ದಿಗೋಷ್ಠಿ ಕರೆದರು. ಬೆಳಗಾವಿಯ ತಮ್ಮ ಗೃಹಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಎಂಎಲ್​ಸಿ ಚನ್ನರಾಜ ಹಟ್ಟಿಹೊಳಿ ರಮೇಶ್ ಜಾರಕಿಹೊಳಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.
ಡಿ.ಕೆ.ಶಿವಕುಮಾರ್ ಕರೆ ಮಾಡಿ ಬ್ಲ್ಯಾಕ್​ಮೇಲ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ರಮೇಶ್ ಜಾರಕಿಹೊಳಿಗೆ ತಲೆಕೆಟ್ಟಿದೆ. ಅಥಣಿ, ಕಾಗವಾಡ, ಬೆಳಗಾವಿ ಗ್ರಾಮೀಣ, ಗೋಕಾಕ್ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಕಾಂಗ್ರೆಸ್ ಗೆಲ್ಲುತ್ತೆ ಅಂತ ಹುಚ್ಚು ಹಿಡಿದವರ ರೀತಿ ಹೇಳಿಕೆ ನೀಡಿದ್ದಾರೆ. ಒಂದು ವೇಳೆ ಡಿ.ಕೆ.ಶಿವಕುಮಾರ್ ಕರೆ ಮಾಡಿದ್ದರೆ ಅದರ ಸ್ಕ್ರೀನ್​ಶಾಟ್ ಅಥವಾ ರೆಕಾರ್ಡ್ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.

ಇಂತಹ ನಾಲಾಯಕರಿಗೆ ಅವರ ಭಾಷೆಯಲ್ಲಿಯೇ ಉತ್ತರ ಕೊಡಬೇಕಾಗುತ್ತೆ

ಇನ್ನು ರಮೇಶ್ ಜಾರಕಿಹೊಳಿ ಹೇಳುವ ವಿಷಕನ್ಯೆ ಯಾರು ಎಂದು ಮಾಧ್ಯಮಗಳು ಪ್ರಶ್ನಿಸುತ್ತಿದ್ದಂತೆ ಗರಂ ಆದ ಎಂಎಲ್​ಸಿ ಚನ್ನರಾಜ್ ಹಟ್ಟಿಹೊಳಿ ಅವನ ತಲೆಕೆಟ್ಟಿದೆ. ಸಾರ್ವಜನಿಕ ವಲಯದಲ್ಲಿ ನಾವಿದ್ದೀವಿ. ಇಂತಹ ನಾಲಾಯಕರಿಗೆ ಅವರ ಭಾಷೆಯಲ್ಲಿಯೇ ಉತ್ತರ ಕೊಡಬೇಕಾಗುತ್ತೆ. ತಾಳ್ಮೆಯ ಮಿತಿ ಮುಗಿದು ಹೋಗಿದೆ. ಅವರಿಗೆ ಅವರದ್ದೇ ಭಾಷೆಯಲ್ಲಿ ಉತ್ತರ ಕೊಡುತ್ತೇವೆ. ಉದ್ಧಟತನಬಿಟ್ಟು ಮರ್ಯಾದೆಯಿಂದ ಮಾತನಾಡಬೇಕು ನಮ್ಮ ಡಿಕ್ಷನರಿಯಲ್ಲೂ ಪದಗಳಿವೆ ಎಂದು ಎಚ್ಚರಿಕೆ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:06 am, Thu, 11 May 23