ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ತೀರ್ಮಾನ ಅಂತಿಮವಾಗಿಲ್ಲ; ರಣದೀಪ್ ಸುರ್ಜೇವಾಲ

ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಂತಿಮ ತೀರ್ಮಾನ ಆಗಿಲ್ಲ ಎಂದು ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ಬುಧವಾರ ಮಧ್ಯಾಹ್ನ ತಿಳಿಸಿದರು. ಇದರೊಂದಿಗೆ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಮುಂದುವರಿದಂತಾಗಿದೆ.

ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ತೀರ್ಮಾನ ಅಂತಿಮವಾಗಿಲ್ಲ; ರಣದೀಪ್ ಸುರ್ಜೇವಾಲ
ರಣದೀಪ್ ಸಿಂಗ್ ಸುರ್ಜೇವಾಲImage Credit source: ndtv.com
Follow us
Ganapathi Sharma
| Updated By: Digi Tech Desk

Updated on:May 17, 2023 | 3:21 PM

ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಂತಿಮ ತೀರ್ಮಾನ ಆಗಿಲ್ಲ ಎಂದು ಕಾಂಗ್ರೆಸ್ (Congress) ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ (Randeep Surjewala) ಬುಧವಾರ ಮಧ್ಯಾಹ್ನ ತಿಳಿಸಿದರು. ಇದರೊಂದಿಗೆ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಮುಂದುವರಿದಂತಾಗಿದೆ. ಹೈಕಮಾಂಡ್ ಜತೆ ಹಲವು ಸುತ್ತಿನ ಸಭೆಗಳ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಬಳಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸುರ್ಜೇವಾಲ, ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಇಬ್ಬರೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ಎಐಸಿಸಿ ಅಧ್ಯಕ್ಷ ಖರ್ಗೆ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಎಂಬ ವದಂತಿಗಳು ಹರಡಿದ್ದು, ರಾಜ್ಯದ ಹಲವೆಡೆ ಸಿದ್ದರಾಮಯ್ಯ ಬೆಂಬಲಿಗರು ಸಂಭ್ರಮವನ್ನೂ ವ್ಯಕ್ತಪಡಿಸಿದ್ದರು. ಹಲವೆಡೆ ಸಂಭ್ರಮಾಚರಣೆ ಆರಂಭವಾಗಿತ್ತು. ಇದರ ಬೆನ್ನಲ್ಲೇ ಸುರ್ಜೇವಾಲ ಅವರು ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, 135 ಸ್ಥಾನ ಗಳಿಸುವ ಮೂಲಕ ಕಾಂಗ್ರೆಸ್ ಭರ್ಜರಿ ಬಹುತಮ ಗಳಿಸಿತ್ತು. ಭಾನುವಾರ ರಾತ್ರಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಗಿತ್ತು. ಅದರಲ್ಲಿ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲು ಸಾಧ್ಯವಾಗದ ಕಾರಣ ವೀಕ್ಷಕರು ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್​​ಗೆ ಮಾಹಿತಿ ರವಾನಿಸಿದ್ದರು. ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳಾದ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಾತುಕತೆ ನಡೆಸಿದ್ದರು. ಆದರೆ ಹಲವು ಸುತ್ತಿನ ಮಾತುಕತೆಗಳ ನಂತರವೂ ಒಮ್ಮತಕ್ಕೆ ಬರುವುದು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ಮುಖ್ಯಮಂತ್ರಿ ಆಗಲು ಸಿದ್ಧ, ನಾನೂ 50 ಶಾಸಕರನ್ನು ಕರೆದೊಯ್ಯಬಹುದು; ಪರಮೇಶ್ವರ ಹೇಳಿಕೆಯ ಮರ್ಮವೇನು?

ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಆರೋಪ ಪಟ್ಟಿ!

ಮಂಗಳವಾರ ರಾತ್ರಿ ಮಲ್ಲಿಕಾರ್ಜುನ ಖರ್ಗೆ ಜತೆ ಸಮಾಲೋಚನೆ ನಡೆಸಿದ್ದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಕಾಂಗ್ರೆಸ್​ಗೆ ಬಂದಾಗಿನಿಂದ ಈವರೆಗೆ ನಡೆದಿರುವ ಸಂಪೂರ್ಣ ರಾಜಕೀಯ ಚಿತ್ರಣವನ್ನು ಖರ್ಗೆ ಮುಂದಿಟ್ಟಿದ್ದರು. ಸಮ್ಮಿಶ್ರ ಸರ್ಕಾರ ಪತನವನ್ನೇ ಟ್ರಂಪ್ ಕಾರ್ಡ್ ಮಾಡಿರುವ ಡಿಕೆ ಶಿವಕುಮಾರ್, 2021ರಲ್ಲಿ ಸರ್ಕಾರ ಬೀಳಲು ಕಾರಣ ಯಾರೆಂದು ನಿಮಗೆ ತಿಳಿದಿದೆ. ಚಾಮುಂಡೇಶ್ವರಿ ಉಪಚುನಾವಣೆಯಲ್ಲಿ ಸಿದ್ದರಾಮಯ್ಯ ಗೆಲುವಿಗೆ ನಾನೇ ಕಾರಣ. ವಿಧಾನಸಭೆ, ಲೋಕಸಭಾ ಚುನಾವಣೆಯಲ್ಲಿ ಸೋಲಿನ ಬಳಿಕ ಪಕ್ಷ ಕಟ್ಟಿದ್ದೇನೆ ಎಂದು ಖರ್ಗೆ ಬಳಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿದ್ದವು. ದಲಿತರೆಲ್ಲರೂ ಸಿದ್ದರಾಮಯ್ಯ ಹಿಂದೆ ಇದ್ದಾ ಎಂಬುದು ನಿಮಗೆ ತಿಳಿದಿಲ್ವಾ? ನೀವೇ ಹೇಳಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರನ್ನೇ ಡಿಕೆಶಿ ಪ್ರಶ್ನಿಸಿದ್ದರು. ಈ ಬಾರಿ ಒಕ್ಕಲಿಗ ಹಾಗೂ ಲಿಂಗಾಯತ ಮತಗಳು ನಮ್ಮ ಕೈ ಹಿಡಿದಿವೆ. ಇದನ್ನು ಪರಿಗಣಿಸಿ ಈ ಬಾರಿ ನನಗೆ ಅವಕಾಶ ನೀಡಲೇಬೇಕೆಂದು ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ ಎನ್ನಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Wed, 17 May 23

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ