Rahul Gandhi: ರಾಹುಲ್ ಗಾಂಧಿ ಪಾದಯಾತ್ರೆ ಸಾಗಿದ ಬಹುತೇಕ ಕಡೆ ಕಾಂಗ್ರೆಸ್ ಗೆದ್ದಿದೆ: ರಣದೀಪ್ ಸುರ್ಜೆವಾಲ

Randeep Surjewala: ರಾಹುಲ್ ಗಾಂಧಿ ದೇಶಾದ್ಯಂತ ಕೈಗೊಂಡ ಭಾರತ್ ಜೋಡೋ ಯಾತ್ರೆ ಸಾಗಿದ ಬಹುತೇಕ ಕಡೆಯಲ್ಲೆಲ್ಲಾ ಕಾಂಗ್ರೆಸ್ ಗೆಲುವು ಸಾಧಿಸುತ್ತಿದೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲ ಅಭಿಪ್ರಾಯಪಟ್ಟಿದ್ದಾರೆ.

Rahul Gandhi: ರಾಹುಲ್ ಗಾಂಧಿ ಪಾದಯಾತ್ರೆ ಸಾಗಿದ ಬಹುತೇಕ ಕಡೆ ಕಾಂಗ್ರೆಸ್ ಗೆದ್ದಿದೆ: ರಣದೀಪ್ ಸುರ್ಜೆವಾಲ
ರಾಹುಲ್ ಗಾಂಧಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 13, 2023 | 8:00 PM

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections 2023) ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್​ನ ಹಿರಿಯ ನಾಯಕರು ಶನಿವಾರ ಸಂಜೆ ವಿಜಯೋತ್ಸವ ಆಚರಿಸಿದರು. ಈ ವೇಳೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ವರಿಷ್ಠ ರಣದೀಪ್ ಸುರ್ಜೆವಾಲ, ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲುವ ಮೂಲಕ ದಕ್ಷಿಣ ಭಾರತವು ಬಿಜೆಪಿಮುಕ್ತವಾಗಿದೆ ಎಂದು ಹೇಳಿದ್ದಾರೆ. ಈ ಗೆಲುವು ಕರ್ನಾಟಕದ ಮತದಾರರ ಗೆಲುವಾಗಿದೆ. ಬ್ರ್ಯಾಂಡ್ ಕರ್ನಾಟಕ ಗೆದ್ದಿದೆ ಎಂದ ಸುರ್ಜೆವಾಲ, ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಶ್ರಮ ಒಂದು ಪ್ರಮುಖ ಕಾರಣ ಎಂಬುದನ್ನೂ ಹೇಳಲು ಮರೆಯಲಿಲ್ಲ.

ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಎಫೆಕ್ಟ್?

ರಾಹುಲ್ ಗಾಂಧಿ ಅವರು ದೇಶಾದ್ಯಂತ ಭಾರತ್ ಜೋಡೋ ಯಾತ್ರೆ ಮೂಲಕ ಸಾಗಿದ ಪ್ರದೇಶಗಳಲ್ಲಿ ಬಹುತೇಕ ಎಲ್ಲಾ ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದೆ. ರಾಜ್ಯದಲ್ಲಿ ಯಾತ್ರೆ ಹೋದ ಶೇ. 80ರಷ್ಟು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ ಎಂದು ರಣದೀಪ್ ಸುರ್ಜೆವಾಲ ಹೇಳಿದ್ದಾರೆ.

ಇದನ್ನೂ ಓದಿಟಿಕೆಟ್ ಸಿಗದೇ ಬಂಡೆದ್ದು ಬೇರೆ-ಬೇರೆ ಪಕ್ಷಕ್ಕೆ ಹೋಗಿದ್ದ ಜಂಪಿಂಗ್ ಸ್ಟಾರ್ಸ್ ಗೆದ್ರಾ? ಸೋತ್ರಾ? ಇಲ್ಲಿದೆ ವಿವರ

ಇನ್ನು, ಸೋನಿಯಾ ಗಾಂಧಿ ರಾಜ್ಯ ಕಾಂಗ್ರೆಸ್ ಪಾಲಿಗೆ ಅದೃಷ್ಟದ ವ್ಯಕ್ತಿ ಎನಿಸಿದ್ದಾರೆ. ಅವರ ಆಶೀರ್ವಾದದಿಂದಲೇ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಗೆಲುವು ಸಾಧ್ಯವಾಗಿದೆ ಎಂದು ಮಾಧ್ಯಮಗೋಷ್ಠಿ ವೇಳೆ ರಣದೀಪ್ ಸುರ್ಜೆವಾಲ ಅಭಿಪ್ರಾಯಪಟ್ಟಿದ್ದಾರೆ.

ಇಂದಿರಾ ಗಾಂಧಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ಉಪಸ್ಥಿತರಿದ್ದರು.

ಕರ್ನಾಟಕ ವಿಧಾನಸಭಾ ಚುನಾವಣೆಗೆ 2023 ಮೇ 10ರಂದು ಮತದಾನವಾಗಿತ್ತು. ಇಂದು ಮೇ 13ರಂದು ಫಲಿತಾಂಶ ಪ್ರಕಟವಾಗಿದ್ದು 224 ಕ್ಷೇತ್ರಗಳಲ್ಲಿ ಕಾಂಗ್ರೆಸ್ 137 ಸ್ಥಾನಗಳನ್ನು ಗೆದ್ದಿದೆ. ಬಹುಮತಕ್ಕೆ ಬೇಕಾದ 113 ಸ್ಥಾನಗಳ ಗಡಿಯನ್ನು ಕಾಂಗ್ರೆಸ್ ಸುಲಭವಾಗಿ ದಾಟಿ ಹೋಗಿದ್ದು 5 ವರ್ಷ ಕಾಲ ಸುಭದ್ರ ಸರ್ಕಾರ ಸ್ಥಾಪಿಸುವ ಖಚಿತತೆ ಸಿಕ್ಕಿದೆ. ಆಡಳಿತಾರೂಢ ಬಿಜೆಪಿ 64 ಸ್ಥಾನಗಳಿಗೆ ತೃಪ್ತಿಪಡಬೇಕಿದೆ. 30ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದ ಜೆಡಿಎಸ್ ಪಕ್ಷ 20 ಸ್ಥಾನಗಳಿಗೆ ತೃಪ್ತಿ ಪಡುವಂತಾಗಿದೆ. ಸ್ವಂತ ಪಕ್ಷ ಕಟ್ಟಿದ್ದ ಜನಾರ್ಧನ ರೆಡ್ಡಿಗೆ ನಿರಾಸೆಯಾಗಿದೆ.

ವಿಧಾನಸಭಾ ಚುನಾವಣೆಯ ಇನ್ನಷ್ಟು ಸುದ್ದಿಗಳು

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್