ಧರ್ಮೇಂದ್ರ ಪ್ರಧಾನ್ ಭೇಟಿಯಾಗದಿದ್ದರೆ ರಾಜೀನಾಮೆಗೆ ಸಿದ್ಧ: ಅಂತಿಮ ನಿರ್ಧಾರ ಘೋಷಿಸಿದ ಜಗದೀಶ್ ಶೆಟ್ಟರ್

ಧರ್ಮೇಂದ್ರ ಪ್ರಧಾನ್ ಭೇಟಿಯಾಗದಿದ್ದರೆ ರಾಜೀನಾಮೆಗೆ ಸಿದ್ಧ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್​​ ಘೋಷಣೆ ಮಾಡಿದ್ದಾರೆ.

ಧರ್ಮೇಂದ್ರ ಪ್ರಧಾನ್ ಭೇಟಿಯಾಗದಿದ್ದರೆ ರಾಜೀನಾಮೆಗೆ ಸಿದ್ಧ: ಅಂತಿಮ ನಿರ್ಧಾರ ಘೋಷಿಸಿದ ಜಗದೀಶ್ ಶೆಟ್ಟರ್
ಮಾಜಿ ಸಿಎಂ ಜಗದೀಶ್ ಶೆಟ್ಟರ್
Follow us
ಗಂಗಾಧರ​ ಬ. ಸಾಬೋಜಿ
|

Updated on:Apr 15, 2023 | 7:26 PM

ಹುಬ್ಬಳ್ಳಿ: ಧರ್ಮೇಂದ್ರ ಪ್ರಧಾನ್ ಭೇಟಿಯಾಗದಿದ್ದರೆ ರಾಜೀನಾಮೆಗೆ ಸಿದ್ಧ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar)​​ ಘೋಷಣೆ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ನಾಯಕರ ಜೊತೆ ಇಂದು ನಡೆಯುವ ಚರ್ಚೆಯೇ ಅಂತಿಮ. 17 ಅಥವಾ 18 ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದರು. ಬೆಳಗ್ಗೆ ಬೆಂಬಲಿಗರ ಸಭೆ ಕರೆದು ಚರ್ಚೆ ನಡೆಸಿದ್ದೆ. ನೀವು ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧರೆಂದು ಹೇಳಿದ್ದಾರೆ. ಹೀಗಾಗಿ ನಾನು ನಿರ್ಧಾರ ಕೈಗೊಳ್ಳುವ ಹಂತದಲ್ಲಿದ್ದೇನೆ. ನನಗೆ ಅವಕಾಶ ನೀಡಿದ್ರೆ ಸ್ಪರ್ಧಿಸುತ್ತೇನೆ, ಕುಟುಂಬದವರು ಸ್ಪರ್ಧಿಸಲ್ಲ. ಟಿಕೆಟ್‌ ಹೊರತುಪಡಿಸಿ ಬೇರೆ ಆಫರ್‌ಗೆ ನಾನು ಒಪ್ಪುವುದಿಲ್ಲ. ಕ್ಷೇತ್ರದ ಶಾಸಕನಾಗಿ ಸೇವೆ ಸಲ್ಲಿಸಲು ಅವಕಾಶ ನೀಡಲು ಕೇಳಿದ್ದೇನೆ. ಬೇರೆ ಪಕ್ಷದವರು ಯಾರೂ ನನ್ನನ್ನು ಸಂಪರ್ಕಿಸಿಲ್ಲ. ಹಗ್ಗಜಗ್ಗಾಟಕ್ಕೆ ಇಂದು ರಾತ್ರಿಗೆ ತೆರೆ ಬೀಳಲಿದೆ ಎಂದು ಹೇಳಿದರು.

ಪಾಲಿಕೆ ಕಾರ್ಯಕರ್ತರ ಧಮ್ಕಿ ಹಾಕಿರುವ ಆರೋಪ ಕುರಿತು ಪ್ರತಿಕ್ರಿಯೆ ನೀಡಿದ್ದು, ಎಲ್ಲಿವರೆಗೆ ನಡೆಯತ್ತೆ. ಇದು ಕೊನೆಯ ಅವಕಾಶ. ಇವತ್ತು ನಿರ್ದಾರ ಮಾಡುತ್ತೇನೆ. ನಾನು ಇದುವರೆಗೆ ಯಾವುದೇ ರಾಜಕೀಯ ಪಕ್ಷದ ನಾಯಕರ ಜೊತೆ ಸಂಪರ್ಕ ಮಾಡಿಲ್ಲ. ನಾನು ಹೇಗೆ ಸ್ಪರ್ಧೆ ಮಾಡಿದರು ಗೆಲ್ಲುತ್ತೇನೆ ಎಂದರು.

ಇದನ್ನೂ ಓದಿ: Karnataka Assembly Election 2023: ಬಿಜೆಪಿಗೆ ನಾನು ಚಿರಋಣಿ: ಜಗದೀಶ್​ ಶೆಟ್ಟರ್​ ಭಾವುಕ ಮಾತಿನ ಹಿಂದಿನ ಮರ್ಮವೇನು

ಕಾಂಗ್ರೆಸ್​ ಪಕ್ಷ ಸೇರ್ಪಡೆ ಆಗುತ್ತಿರಾ ಜಗದೀಶ್ ಶೆಟ್ಟರ್?

ಕಾಂಗ್ರೆಸ್​ ಪಕ್ಷ ಸೇರ್ಪಡೆ ಆಗುತ್ತಿರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಕಾಂಗ್ರೆಸ್ ಬಗ್ಗೆ ಚರ್ಚೆ ಇದೀಗ ಅಪ್ರಸ್ತುತ. ಕಾಂಗ್ರೆಸ್ ಬಗ್ಗೆ ಕಮೆಂಟ್ ಮಾಡಲ್ಲ ಎಂದರು. ಆ ಮೂಲಕ ಪರೋಕ್ಷವಾಗಿ ಕಾಂಗ್ರೆಸ್ ಕಡೆ ಮುಖ ಮಾಡಿದ್ರಾ ಎಂಬ ಅನುಮಾಗಳು ಹುಟ್ಟಿಕೊಂಡಿವೆ ಎನ್ನಲಾಗುತ್ತಿದೆ.

ಮತ್ತೆ ಕಾದು ನೋಡುವ ತಂತ್ರ ಅನುಸರಿಸಿದ ಜಗದೀಶ್​ ಶೆಟ್ಟರ್

ಇದು ಹು-ಧಾ ಸೆಂಟ್ರಲ್​ ಕ್ಷೇತ್ರದ ಜನರ, ನನ್ನ ಸ್ವಾಭಿಮಾನದ ಪ್ರಶ್ನೆ. ಟಿಕೆಟ್​ ಘೋಷಣೆಗೆ ಇಂದು ಸಂಜೆಯವರೆಗೆ ಟೈಮ್ ಇದೆ. ನನಗೆ ಬಿಜೆಪಿ ಟಿಕೆಟ್​ ನೀಡುವ ವಿಶ್ವಾಸವಿದೆ, ಆನಂತರ ನೋಡೋಣ. ನಿಮ್ಮ ಆಶೀರ್ವಾದದಿಂದ ಈ ಭಾಗಕ್ಕೆ ಹೆಚ್ಚು ಒತ್ತು ಕೊಡಲು ಸಾಧ್ಯವಾಯಿತು. ಈ ಭಾಗದಲ್ಲಿ ಬಿಜೆಪಿ ಕಟ್ಟಿ ಬೆಳಸಲು ಶ್ರಮಿಸಿದವರಲ್ಲಿ ನಾನು ಒಬ್ಬ. ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ದಿವಂಗತ ಬಿಜೆಪಿ ನಾಯಕ ಅನಂತ ಕುಮಾರ ಅವರ ಜೊತೆಗೆ ಪಕ್ಷ ಕಟ್ಟಿದ್ದೇನೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಗಟ್ಟಿಯಾಗಿದೆ ಎಂದು ತಿಳಸಿದರು.

ಇದನ್ನೂ ಓದಿ: ನಾಮಪತ್ರ ಸಲ್ಲಿಸಿದ ನಂತರ ಗೋವಿಂದ ಕಾರಜೋಳ ಕಣ್ಣೀರು ಹಾಕಿದ್ದು ಯಾಕಾಗಿ ಗೊತ್ತಾ?

ಜಗದೀಶ್ ಶೆಟ್ಟರ್ ಹೆಸರು ಯಾಕೆ ಬರಲಿಲ್ಲ ಅನ್ನೋ ಕಳವಳ ಇದೆ. ಬೆಳಗಾವಿ ಸೇರಿ ರಾಜ್ಯದ ನಾನ ಕಡೆ ಜನ ಕಳವಳ ವ್ಯಕ್ತಪಡಿಸಿದ್ದಾರೆ. ಎರಡು ದಿನದ ಹಿಂದೆ ರಾಷ್ಟ್ರೀಯ ಅಧ್ಯಕ್ಷರು ಕರೆ ಮಾಡಿದ್ದರು. ನಾನು ಅವರಿಗೆ ಗೌರವ ಕೊಟ್ಟು ಹೋಗಿ ಬಂದೆ. ನಾನು ರಾಜಕೀಯಕ್ಕೆ ಬಂದಿದ್ದು ಆ್ಯಕ್ಸಿಡೆಂಡ್ಲಿ. ಅವಕಾಶ ಸಿಕ್ತು ಸದುಪಯೋಗ ಮಾಡಿಕೊಂಡೆ. ನಾನು ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಇನ್ನೊಂದು ಬಾರಿ ಅವಕಾಶ ಕೊಡಿ ಎಂದಿದ್ದೆ. ಎರಡು ದಿನದಲ್ಲಿ ತಿಳಸ್ತೀನಿ ಅಂದಿದ್ದರು ಎಂದರು.

ನನಗೆ ಟಿಕೆಟ್ ಕೊಡೋ ವಿಶ್ವಾಸ ಇದೆ. ಇವತ್ತು ಎಲ್ಲ ರೀತಿ ಪ್ರಯತ್ನ ನಡೀತಿದೆ. ನನಗೆ ಇವಾಗಲೂ ಟಿಕೆಟ್ ಕೊಡ್ತಾರೆ ಅನ್ನೋ ಭರವಸೆ ಇದೆ. ಯಡಿಯೂರಪ್ಪ ಅವರ ಬೆಂಬಲ ನನಗೆ ಇದೆ. ಯಡಿಯೂರಪ್ಪ ಸ್ಪರ್ಧೆ ಮಾಡಿ ಎಂದು ಒಪನ್ ಆಗಿ ಹೇಳಿದ್ದಾರೆ. ನನಗೆ ನಿಮ್ಮ ಶಕ್ತಿ ಇದೆ. ನೀವು ಇರದೆ ಹೋದರೆ ನಾನು ಜಿರೋ. ನಿಮ್ಮ ಬೆಂಬಲ ಜೀವನದಲ್ಲಿ ಮರೆಯಲ್ಲ. ನಾವು ಯಾರನ್ನೂ ಟೀಕೆ ಮಾಡಬಾರದು. ನಮ್ಮ ಕುಟುಂಬ ಜನ ಸಂಘದಿಂದ ಬಿಜೆಪಿವರೆಗೂ ಬಂದಿದೆ. ಇದೆಲ್ಲ ವರಿಷ್ಠರಿಗೆ ಗೊತ್ತಿದೆ ಎಂದು ಭಾವುಕರಾಗಿ ಭಾಷಣ ಮುಗಿಸಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:05 pm, Sat, 15 April 23

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ