ಸಿಎಂ ಡಿಸಿಎಂ ಆಯ್ಕೆ ಕಸರತ್ತು; ಕಾಂಗ್ರೆಸ್​ ಮೇಲೆ ಹೆಚ್ಚುತ್ತಿದೆ ಜಾತಿ ಮುಖಂಡರ ಒತ್ತಡ, ಯಾರು ಏನಂದ್ರು?

ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಡಿಸಿಎಂ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದೆ. ಇತ್ತ ಕರ್ನಾಟಕದಲ್ಲಿ ಈ ಎರಡು ಸ್ಥಾನಗಳ ಆಕಾಂಕ್ಷಿಗಳು ಹೆಚ್ಚುತ್ತಲೇ ಇದ್ದಾರೆ. ಜಾತಿ ಮುಖಂಡರ ಒತ್ತಡವೂ ಹೆಚ್ಚಳವಾಗುತ್ತಿದೆ. ತಾನು ಸಿಎಂ ಆಕಾಂಕ್ಷಿ ಎಂದು ಎಂಬಿ ಪಾಟೀಲ್ ಬಹಿರಂಗವಾಗಿಯೇ ಹೇಳಿದ್ದಾರೆ.

ಸಿಎಂ ಡಿಸಿಎಂ ಆಯ್ಕೆ ಕಸರತ್ತು; ಕಾಂಗ್ರೆಸ್​ ಮೇಲೆ ಹೆಚ್ಚುತ್ತಿದೆ ಜಾತಿ ಮುಖಂಡರ ಒತ್ತಡ, ಯಾರು ಏನಂದ್ರು?
ಕರ್ನಾಟಕದ ಮುಖ್ಯಮಂತ್ರಿ ಮತ್ತು ಡಿಸಿಎಂ ಸ್ಥಾನಕ್ಕೆ ಕಾಂಗ್ರೆಸ್​ನಲ್ಲಿ ಪೈಪೋಟಿ
Follow us
|

Updated on:May 15, 2023 | 5:50 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದ ಕಾಂಗ್ರೆಸ್ (Congress) ಪಕ್ಷ ಇದೀಗ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಆಯ್ಕೆಗೆ ಕಸರತ್ತು ನಡೆಸುತ್ತಿದೆ. ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಅವರ ಕಣ್ಣು ಸಿಎಂ ಕುರ್ಚಿ ಮೇಲೆ ಬಿದ್ದಿರುವುದು ಗೊತ್ತೇ ಇದೆ. ಇವರ ಜೊತೆಗೆ ಡಾ.ಜಿ ಪರಮೇಶ್ವರ್ (Dr.G.Parameshwar) ಸೇರಿದಂತೆ ಅನೇಕರು ಸಿಎಂ ರೇಸ್​ನಲ್ಲಿದ್ದಾರೆ. ಇದೀಗ ಇವರ ಸಾಲಿಗೆ ಎಂಬಿ ಪಾಟೀಲ್ (MB Patil) ಸೇರಿದ್ದಾರೆ. ತಾನು ಕೂಡ ಸಿಎಂ ಸ್ಥಾನದ ಆಕಾಂಕ್ಷಿ ಎಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಈ ನಡುವೆ ಡಿಸಿಎಂ ಸ್ಥಾನಕ್ಕೆ ಜಾತಿ ಆಧಾರದ ಮೇಲೆ ಹೆಸರುಗಳು ಮುನ್ನಲೆಗೆ ಬರುತ್ತಿವೆ.

ಡಿ.ಕೆ.ಶಿವಕುಮಾರ್ ಕರ್ನಾಟಕದ ಮುಖ್ಯಮಂತ್ರಿಯಾಗಬೇಕು ಎಂದು ಒತ್ತಾಯಿಸಿ ಬೆಂಗಳೂರಿನಲ್ಲಿ ಬೆಂಬಲಿಗರೊಂದಿಗೆ ಬೃಹತ್ ರ್ಯಾಲಿಯನ್ನು ಆಯೋಜಿಸಲು ಒಕ್ಕಲಿಗ ಸಮುದಾಯ ನಿರ್ಧರಿಸಿದೆ. ಇನ್ನೊಂದೆಡೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಬೆಂಬಲಿಗರು ಬಲವಾಗಿ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಿದ್ದರಾಮಯ್ಯ ಅವರು ದೆಹಲಿಯಲ್ಲಿದ್ದು, ಸಂಜೆ ಡಿಕೆ ಶಿವಕುಮಾರ್ ಕೂಡ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಈಗ ಹೈಕಮಾಂಡ್ ಸಂಪೂರ್ಣವಾಗಿ ಗೊಂದಲಕ್ಕೊಳಗಾಗಿದೆ.

ಈ ನಡುವೆ ಮುಸ್ಲಿಂ ನಾಯಕರು ಗೆದ್ದಿರುವ 9 ಮುಸ್ಲಿಂ ಶಾಸಕರಲ್ಲಿ ಒಬ್ಬರಿಗೆ ಉಪಮುಖ್ಯಮಂತ್ರಿ ಹುದ್ದೆ ಮತ್ತು ಐವರಿಗೆ ಮಂತ್ರಿ ಪಟ್ಟ ನೀಡುವಂತೆ ಬೇಡಿಕೆ ಮುಂದಿಟ್ಟಿದ್ದಾರೆ. ಲಿಂಗಾಯತ ಮತ್ತು ಒಕ್ಕಲಿಗರಿಗಿಂತ ಹೆಚ್ಚು ತಮ್ಮ ಸಮುದಾಯವು ಅಂದರೆ ಶೇಕಡಾ 85 ರಷ್ಟು ಮತ ಹಾಕಿದೆ ಎಂದು ಮುಸ್ಲಿಂ ನಾಯಕರು ಬಹಿರಂಗವಾಗಿ ಹೇಳಿದ್ದಾರೆ. ಈ ನಡುವೆ ಲಿಂಗಾಯತ ಸಮುದಾಯದ ವಿನಯ್ ಕುಲಕರ್ಣಿ, ಈಶ್ವರ್ ಖಂಡ್ರೆ ಅವರನ್ನು ಡಿಸಿಎಂ ಮಾಡಬೇಕು ಎಂಬ ಕೂಗು ಕೇಳಿಬರುತ್ತಿದೆ. ಹಾಗಿದ್ದರೆ ಸಿಎಂ ಡಿಸಿಎಂ ಸ್ಥಾನದ ಬಗ್ಗೆ ಯಾರು ಏನಂದ್ರು? ಇಲ್ಲಿದೆ ನೋಡಿ ಮಾಹಿತಿ.

ಇದನ್ನೂ ಓದಿ: ಡಿಕೆ ಶಿವಕುಮಾರ್ ಪರ ಆದಿಚುಂಚನಗಿರಿ ಶಾಖಾಮಠದ ಶ್ರೀಗಳು ಬ್ಯಾಟ್ ಬೀಸಿದ್ರೆ ಸಿದ್ದರಾಮಯ್ಯ ಪರ ನಿಂತ ಕುರುಬ ಸಮುದಾಯದ ಸ್ವಾಮೀಜಿ

ತಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಆದರೆ ಶಾಸಕರ ಬೆಂಬಲ ಇದ್ದವರು ಮುಖ್ಯಮಂತ್ರಿ ಆಗುತ್ತಾರೆ. ಹೈಕಮಾಂಡ್ ನಿರ್ಧಾರ ಎಲ್ಲ ಶಾಸಕರು ಕೂಡ ಒಪ್ಪಿಕೊಳ್ಳುತ್ತಾರೆ. ಸಿಎಂ ಆಗುತ್ತೇನೆ ಅಂತಾ ಬಯಸಿದರೆ ಆಗಲ್ಲ, ಹೈಕಮಾಂಡ್ ನಿರ್ಣಯಿಸುತ್ತದೆ ಎಂದು ಎಂಬಿ ಪಾಟೀಲ್ ಹೇಳಿದ್ದಾರೆ. ಎಲ್ಲ ಶಾಸಕರ ಅಭಿಪ್ರಾಯವನ್ನು ಎಐಸಿಸಿ ವೀಕ್ಷಕರು ಪಡೆದಿದ್ದಾರೆ. ಸಂಗ್ರಹಿಸಿದ ಅಭಿಪ್ರಾಯ ಹೈಕಮಾಂಡ್ ಮುಂದೆ ಇಡುತ್ತಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ನಾನು ಏಕಾಂಗಿ ಎಂದು ಹೇಳಿದ್ದಾರೆ. ಇಂದು ನನ್ನ ಹುಟ್ಟುಹಬ್ಬ, ಗುರುಗಳನ್ನು ಭೇಟಿ ಮಾಡಬೇಕು. ನನ್ನ ಖಾಸಗಿ ಕಾರ್ಯಕ್ರಮ ಮುಗಿಸಿ ದೆಹಲಿಗೆ ಹೋಗುತ್ತೇನೆ. ನನಗೆ ಯಾರ ನಂಬರ್ ಬಗ್ಗೆ ಮಾತನಾಡಲು ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷ 135 ಸ್ಥಾನಗಳನ್ನು ಹೊಂದಿದೆ. ನನ್ನ ಅಧ್ಯಕ್ಷ ಸ್ಥಾನದಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದಿದೆ. ನಮ್ಮ ವರಿಷ್ಠರು ನಿನ್ನೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಂದು ನಿರ್ಣಯ ಅಂಗೀಕರಿಸಿದ್ದೇವೆ. ಕೆಪಿಸಿಸಿ ಅಧ್ಯಕ್ಷನಾದ ನನಗೆ ಸೋನಿಯಾ ಗಾಂಧಿ ಭರವಸೆ ನೀಡಿದ್ದಾರೆ ಎಂದರು.

ಸಿದ್ದರಾಮಯ್ಯ ಅವರನ್ನ ಮುಖ್ಯಮಂತ್ರಿ ಮಾಡಿಲ್ಲ ಅಂದರೆ ಮುಂದಿನ ದಿನಗಳಲ್ಲಿ ಶೋಷಿತ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವ ಸಾಧ್ಯತೆ ಕಡಿಮೆ ಇದೆ ಎಂದು ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮಾವಳ್ಳಿ ಶಂಕರ್ ಹೇಳಿದ್ದಾರೆ. ನಾವು ಪ್ರತಿಭಟನೆ ಜಾಥಾ ಮಾಡಲ್ಲ ಅಂತಾನೂ ಹೇಳೀದ್ದಾರೆ. ಇದುವರೆಗೆ ಬಲಿಷ್ಠ ಜಾತಿಗಳೇ ಅಧಿಕಾರ ಅನುಭವಿಸುತ್ತ ಬಂದಿವೆ. ಹೀಗಾಗಿ ಸಿದ್ದರಾಮಯ್ಯನವರು ಮತ್ತೆ ಮುಖ್ಯಮಂತ್ರಿ ಆಗಬೇಕು ಎಂದು ಹೇಳಿದ್ದಾರೆ.

ನಮಗೆ ಯಾರ ಮೆಲೂ ಯಾವ ಜಿದ್ದು ಇಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಎಲ್ಲರೂ ಕಷ್ಟ ಪಟ್ಟಿದ್ದಾರೆ. ಶ್ರಮ‌ಪಟ್ಟು ಸರ್ಕಾರ ತಂದಿದ್ದಾರೆ. ಅದನ್ನ ಉಳಿಸಿಕೊಳ್ಳೋ ಪ್ರಯತ್ನ ಆಗಬೇಕಂದರೆ ಸಿದ್ದರಾಮಯ್ಯನವರಿಗೆ ಅವಕಾಶ ಸಿಗಬೇಕು. ಇದಕ್ಕೆ ಎಲ್ಲರು ಸಾಥ್ ನೀಡಬೇಕು. ದುರ್ಬಲ, ಬಡವರ ಹಿತವನ್ನ ಕಾಪಾಡಲು ಸಿದ್ದರಾಮಯ್ಯ ಸಿಎಂ ಆಗಬೇಕು. ಕಾಂಗ್ರೆಸ್ ಪಕ್ಷ ನಾನು ಹೇಳುವುದನ್ನ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಶಾಸಕಿ ಬಿಟಿ ಲಲಿತಾ ನಾಯಕ್ ಹೇಳಿದ್ದಾರೆ.

ಇನ್ನೊಂದೆಡೆ ಡಿ.ಕೆ.ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡುವಂತೆ ಚಾಲಕರ ಸಂಘಟನೆ ಮತ್ತು ಚಾಲಕ ಸಂಘಟನೆಗಳ ಒಕ್ಕೂಟದ ವತಿಯಿಂದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಮಾಡಲಾಗಿದೆ.

ಇದನ್ನೂ ಓದಿ: BYV in Tumakuru: ರಾಜ್ಯದ ಹಿತದೃಷ್ಟಿಯಿಂದ ಯಾವ ಕಾಂಗ್ರೆಸ್ ನಾಯಕ ಸಿಎಮ್ ಆಗಬೇಕು ಅಂತ ವಿಜಯೇಂದ್ರಗೆ ಕೇಳಿದಾಗ ಏನಂದ್ರು ಗೊತ್ತಾ?

ರಾಜ್ಯದಲ್ಲಿ ಈ ಸಲ ಇಡಿ ಪರಿಶಿಷ್ಟ ಪಂಗಡವೇ ‌ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದೆ‌. ನಾಯಕ ಸಮಾಜದ ಮುಖಂಡರಾದ ಸತೀಶ ಜಾರಕಿಹೊಳಿಗೆ ಮುಖ್ಯಮಂತ್ರಿ ಅಥವಾ ಡಿಸಿಎಂ ‌ನೀಡಬೇಕು ಎಂದು ದಾವಣಗೆರೆಯಲ್ಲಿ ವಾಲ್ಮೀಕಿ ಮಹಾ ಸಭಾ ಆಧ್ಯಕ್ಷರಾದ ಚಂದ್ರಶೇಖರ ಹಾಗೂ ಹೊದಿಗೆರೆ ರಮೇಶ ಆಗ್ರಹಿಸಿದ್ದಾರೆ. ಈಗಾಗಲೇ ಈ ಹಿಂದೆ ಬಿಜೆಪಿ ಶ್ರೀರಾಮಲುಗೆ ಡಿಸಿಎಂ ಮಾಡುವುದಾಗಿ ಹೇಳಿ ವಂಚಿಸಿತ್ತು.‌ ಈ ಕಾರಣಕ್ಕೆ ವಾಲ್ಲೀಕಿ‌ಜನ ಬಿಜೆಪಿಗೆ ಪಾಠ ಕಲಿಸಿದ್ದಾರೆ. ಕಾಂಗ್ರೆಸ್​ ಸರ್ಕಾರದಲ್ಲಿ ವಾಲ್ಮೀಕಿ ಸಮಾಜಕ್ಕೆ ಒಳ್ಳೆಯ ಸ್ಥಾನ‌ಮಾನ ನೀಡಬೇಕು ಎಂದು ಹೇಳಿದರು.

ಶಾಸಕ ಈಶ್ವರ ಖಂಡ್ರೆಗೆ ಡಿಸಿಎಂ ಸ್ಥಾನ ನೀಡುವಂತೆ ಬೀದರ್​ನಲ್ಲಿ 20ಕ್ಕೂ ಹೆಚ್ಚು ಮಠಾಧೀಶರು ಸುದ್ದಿಗೋಷ್ಠಿ ನಡೆಸಿ ಒತ್ತಾಯಿಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ನಾಯಕ ಈಶ್ವರ ಖಂಡ್ರೆ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಉತ್ತಮ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲಲು ಖಂಡ್ರೆ ಕೂಡ ಕಾರಣ. ವೀರಶೈವ ಲಿಂಗಾಯತ ಸಮುದಾಯದ 39 ಶಾಸಕರು ಗೆದ್ದಿದ್ದಾರೆ. ಹೀಗಾಗಿ ನಮ್ಮ ಸಮುದಾಯಕ್ಕೆ ಡಿಸಿಎಂ ಸ್ಥಾನ ಕೊಡಲೇಬೇಕು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಆಗಬೇಕಾದರೆ ಡಿಸಿಎಂ ಸ್ಥಾನ ಕೊಡಿ ಎಂದು ಎಲ್ಲಾ ಸ್ವಾಮೀಜಿಗಳ ಪರವಾಗಿ ರಾಜೇಶ್ವರ ಶಿವಾಚಾರ್ಯಶ್ರೀ ಆಗ್ರಹ ಮಾಡಿದ್ದಾರೆ.

ಕೊಲೆ ಪ್ರಕರಣದಲ್ಲಿರುವ ವಿನಯ್ ಕುಲಕರ್ಣಿಗೆ ಡಿಸಿಎಂ ಸ್ಥಾನ ನೀಡುವಂತೆ ಒತ್ತಾಯ

ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಜಾಮೀನು ಪಡೆದು ಹೊರಬಂದಿರುವ ವಿನಯ್ ಕುಲಕರ್ಣಿ ಅವರಿಗೂ ಡಿಸಿಎಂ ಸ್ಥಾನ ನೀಡುವಂತೆ ಒತ್ತಾಯ ಕೇಳಿಬರುತ್ತಿದೆ. ಧಾರವಾಡದ ಮುರುಘಾಮಠದ ಮಲ್ಲಿಕಾರ್ಜುನಶ್ರೀ ಮಾತನಾಡಿ, ವಿನಯ್ ಕುಲಕರ್ಣಿ ಉತ್ತರ ಕರ್ನಾಟಕದ ಪ್ರಬಲ ನಾಯಕ. ಶಾಸಕ ವಿನಯ್ ಕುಲಕರ್ಣಿ ಅವರನ್ನು ಡಿಸಿಎಂ ಮಾಡಿದರೆ ಚೆನ್ನಾಗಿರುತ್ತದೆ. ವಿನಯ್ ಕುಲಕರ್ಣಿ ಈ ಹಿಂದೆಯೂ ಸಚಿವರಾಗಿದ್ದರು. ಕುಲಕರ್ಣಿಗೆ ಡಿಸಿಎಂ ಸ್ಥಾನ ಕೇಳುವುದರಲ್ಲಿ ನಮ್ಮ ಸ್ವಾರ್ಥವಿದೆ ಎಂದರು.

ರೆಡ್ಡಿ ಸಮುದಾಯಕ್ಕೆ ಹೆಚ್ಚಿನ ಅವಕಾಶ ನೀಡುವಂತೆ ಆಗ್ರಹ

ರೆಡ್ಡಿ ಸಮುದಾಯಕ್ಕೆ ಹೆಚ್ಚಿನ ಸಚಿವ ಸ್ಥಾನ ನೀಡುವಂತೆ ಆಗ್ರಹ ಮಾಡಲಾಗುತ್ತಿದೆ. 12 ಮಂದಿ ರೆಡ್ಡಿ ಸಮುದಾಯದ ಶಾಸಕರು ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಸಚಿವ ಸಂಪುಟದಲ್ಲಿ ರೆಡ್ಡಿ ಸಮುದಾಯದ ಶಾಸಕರಿಗೆ ಹೆಚ್ಚಿನ ಸ್ಥಾನ ನೀಡುವಂತೆ ಕರ್ನಾಟಕ ರೆಡ್ಡಿ ಜನಸಂಘ ಆಗ್ರಹಿಸಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:43 pm, Mon, 15 May 23

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು