Rona Election Result: ರೋಣ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಕಾಂಗ್ರೆಸ್ ಅಭ್ಯರ್ಥಿ ಜಿಎಸ್ ಪಾಟೀಲ್ ಗೆಲುವು
Rona Assembly Election Result 2023 Live Counting Updates: ರೋಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಳಕಪ್ಪ ಗುರುಶಾಂತಪ್ಪ ಬಂಡಿ, ಕಾಂಗ್ರೆಸ್ನಿಂದ ಗುರುಪಾದ ಸಂಗನಗೌಡ ಪಾಟೀಲ ಮತ್ತು ಜೆಡಿಎಸ್ನಿಂದ ಮಕ್ತುಮಸಾಬ ಮುಧೋಳ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.
Rona Assembly Election Result 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ರೋಣ ವಿಧಾನಸಭಾ ಕ್ಷೇತ್ರದಿಂದ (Rona Assembly Constituency) ಕಾಂಗ್ರೆಸ್ ಪಕ್ಷ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಿಎಸ್ ಪಾಟೀಲ್ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿದ್ದ ಕಳಕಪ್ಪ ಗುರುಶಾಂತಪ್ಪ ಬಂಡಿ ಎರಡನೇ ಸ್ಥಾನದಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್ ಪಾಟೀಲ್ ಗೆಲ್ಲುವು ಬಹುತೇಕ ಖಚಿತವಾಗುತ್ತಿದ್ದಂತೆ, ಮತ ಎಣಿಕೆ ಕೇಂದ್ರದಿಂದ ಬಿಜೆಪಿ ಅಭ್ಯರ್ಥಿ ಕಳಕಪ್ಪ ಬಂಡಿ ಅವರು ಹೊರನಡೆದಿದ್ದಾರೆ.
2018ರ ಚುನಾವಣೆಯಲ್ಲಿ 83 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದು ಕಾಂಗ್ರೆಸ್ ಅಭ್ಯರ್ಥಿ ಗುರುಪಾದಗೌಡ ಸಂಗನಗೌಡ ಪಾಟೀಲ ವಿರುದ್ಧ 7 ಸಾವಿರ ಮತಗಳ ಅಂತರದಿಂದ ಗೆದ್ದಿದ್ದ ಕಳಕಪ್ಪ ಬಂಡಿಯವರಿಗೆ ಬಿಜೆಪಿ ಬಾರಿಯೂ ಟಿಕೆಟ್ ನೀಡಿತ್ತು. ಕಳಕಪ್ಪ ಬಂಡಿಯ ಅವರ ಪತ್ನಿ ಸಂಯುಕ್ತಾ ಬಂಡಿ ಅವರು ರೋಣ ಪಟ್ಟಣದಲ್ಲಿ ಪತಿ ಪರ ಮತಯಾಚಿಸಿದ್ದರು.
ಕಳೆದ ಬಾರಿ ಚುನಾವಣೆಯಲ್ಲಿ ಜಿ. ಎಸ್ ಪಾಟೀಲ ಸೋತರೂ ಕಾಂಗ್ರೆಸ್ ಈ ಬಾರಿ ಮತ್ತೆ ಅವರಿಗೆ ಟಿಕೆಟ್ ನೀಡಿತ್ತು. ಈ ಭಾರಿ ಗೆಲುವು ಸಾಧಿಸುವ ಮೂಲಕ ಪಕ್ಷದ ವಿಶ್ವಾಸಕ್ಕೆ ಕಾಪಾಡಿಕೊಂಡಿದ್ದಾರೆ. ಕ್ಷೇತ್ರದ ಲಿಂಗಾಯತ ಮತಗಳೊಂದಿಗೆ ಕುರುಬ ಸೇರಿದಂತೆ ಇತರೆ ಮತಗಳು ತಮಗೆ ಬರಬಹುದು ಎಂಬ ನಂಬಿಕೆಯಲಿದ್ದರು.
ಅದೇ ರೀತಿಯಾಗಿ ಆನೇಕಲ್ ದೊಡ್ಡಯ್ಯ ಅವರು ಆಮ್ ಆದ್ಮಿ ಪಕ್ಷದಿಂದ ಉಮೇದುವಾರರಾಗಿ ಅಖಾಡಕ್ಕೆ ಧುಮುಕಿದ್ದರು. ರೋಣ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಆಮ್ ಆದ್ಮಿ ತನ್ನ ಖಾತೆ ತೆರೆಯುವ ಭರವಸೆಯಲ್ಲಿದ್ದರು. ಹೀಗಾಗಿ ಈ ಕ್ಷೇತ್ರದಲ್ಲಿ ನಾಲ್ಕು ಪಕ್ಷಗಳ ನಡುವೆ ಪೈಪೋಟಿ ಏರ್ಪಟ್ಟಿತ್ತು. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿ ಉಂಟಾಗಿತ್ತು.
Published On - 2:34 am, Sat, 13 May 23