ಹುಬ್ಬಳ್ಳಿ: ಜಗದೀಶ್ ಶೆಟ್ಟರ್ (Jagadish Shettar) ಅವರ ನಾಮಪತ್ರ ಸಲ್ಲಿಕೆ ರ‍್ಯಾಯಲ್ಲಿ ಭಾಗಿಯಾಗಿದ್ದ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಪಕ್ಷೇತರ ಸದಸ್ಯ ಚೇತನ್ ಹಿರೇಕೆರೂರು ಅವರನ್ನು ಗೂಂಡಾ ಕಾಯ್ದೆಯಡಿ ಗುರುವಾರ ಬಂಧಿಸಲಾಗಿದೆ. ವಿವಿಧ ಪೊಲೀಸ್ ಠಾಣೆಗಳಲ್ಲಿ ರೌಡಿಶೀಟರ್ ಆಗಿದ್ದ ಚೇತನ್ ಅನ್ನು ಹುಬ್ಬಳ್ಳಿಯ ಗೋಕುಲ್ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸದ್ಯ ಚೇತನ್ ಹಿರೇಕೆರೂರು ಅನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ರಮಣಗುಪ್ತಾ ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ.
ಜಗದೀಶ್ ಶೆಟ್ಟರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಈ ವಿದ್ಯಮಾನ ನಡೆದಿದೆ.
ಈ ಮಧ್ಯೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಜಗದೀಶ ಶೆಟ್ಟರ್, ಆಂತರಿಕ ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಪಕ್ಷ 130ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂಬುದು ತಿಳಿದುಬಂದಿದೆ ಎಂದು ಹೇಳಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಾತ್ರವಲ್ಲದೆ ಬೇರೆ ಜಿಲ್ಲೆಗಳಿಂದಲೂ ಚುಣಾವಣಾ ಪ್ರಚಾರಕ್ಕೆ ಆಹ್ವಾನಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಜನ ಬೆಂಬಲ ದೊಡ್ಡದಾಗಿದೆ. ಧಾರವಾಡ ಜಿಲ್ಲೆಯ 7 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ನನ್ನ ಬಗ್ಗೆ ಮಾತನಾಡಲು ಬಿಜೆಪಿಯ ಕೆಎಸ್ ಈಶ್ವರಪ್ಪಗೆ ಒತ್ತಡ ಇರಬಹುದು. ಮೊನ್ನೆ ನನಗೆ ಪತ್ರ ಬರೆದಿದ್ದರು. ಇದು ಪಕ್ಷದ ಒತ್ತಡದಿಂದ ಎಂದು ಶೆಟ್ಟರ್ ಹೇಳಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ