ಆರ್​ಟಿಓ ಅಲರ್ಟ್: ವಾಹನಗಳ ಮೇಲೆ ರಾಜಕೀಯ ಚಿಹ್ನೆ, ಧ್ವಜ, ಅಭ್ಯರ್ಥಿ ಫೋಟೋ ಇದ್ದರೆ ಕೂಡಲೇ ತೆಗೆಯಿರಿ

ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವ ಹಿನ್ನೆಯಲ್ಲಿ ಕರ್ನಾಟಕದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಆರ್​ಟಿಓ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.

ಆರ್​ಟಿಓ ಅಲರ್ಟ್: ವಾಹನಗಳ ಮೇಲೆ ರಾಜಕೀಯ ಚಿಹ್ನೆ, ಧ್ವಜ, ಅಭ್ಯರ್ಥಿ ಫೋಟೋ ಇದ್ದರೆ ಕೂಡಲೇ ತೆಗೆಯಿರಿ
Follow us
ರಮೇಶ್ ಬಿ. ಜವಳಗೇರಾ
|

Updated on:Apr 04, 2023 | 3:47 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಇದೇ ಮೇ 10ರಂದು ಮತದಾನ ನಡೆಯಲಿದ್ದು, ಮೇ.13ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದಲ್ಲಿ ಈಗ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಹಾಗೂ ಚುನಾವಣೆ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದು, ಚೆಕ್​ಪೋಸ್ಟ್​ಗಳಲ್ಲಿ ತಪಾಸಣೆ ಬಿಗಿ ಮಾಡಿದ್ದಾರೆ. ಇದೀಗ ಆರ್​ಟಿಓ (RTO) ಅಧಿಕಾರಿಗಳು ಸಹ ಅಲರ್ಟ್ ಆಗಿದ್ದು, ರಾಜಕೀಯ ನಾಯಕರ ಭಾವಚಿತ್ರ ಹಾಗೂ ಪಕ್ಷಗಳ ಚಿಹ್ನೆ ಇರುವ ವಾಹನಗಳ ಮೇಲೆ ಮೇಲೆ ನಿಗಾ ವಹಿಸಿದ್ದಾರೆ. ರಾಜಕೀಯ ನಾಯಕರು ಆಟೋಗಳ ಮೇಲೆ ಭಾವಚಿತ್ರ ಅಂಟಿಸಿ ಭಾರೀ ಪ್ರಚಾರ ಪಡೆಯುತ್ತಿದ್ದಾರೆ. ಹೀಗಾಗಿ ಇದನ್ನು ತಡೆಗಟ್ಟಲು RTO ಅಧಿಕಾರಿಗಳು ಕಾರ್ಯಾಚರಣೆಗಿಳಿದಿದ್ದಾರೆ.

ಇದನ್ನೂ ಓದಿ: Model Code Of Conduct: ಚುನಾವಣಾ ನೀತಿ ಸಂಹಿತೆ ಎಂದರೇನು? ನಿಯಮಗಳು ಇಲ್ಲಿವೆ

ಚುನಾವಣಾ ಆಯೋಗದ ಸೂಚನೆಯಂತೆ ಕಟ್ಟೆಚ್ಚರ ವಹಿಸಿರುವ RTO ಅಧಿಕಾರಿಗಳು, ಮೆಜೆಸ್ಟಿಕ್ ಬಳಿಯ ಇರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದ ಬಳಿ ಕಾರ್ಯಾಚರಣೆ ನಡೆಸಿದರು. RTO ಜಂಟಿ ಆಯುಕ್ತ ಹಾಲಸ್ವಾಮಿ ರಾಜಾಜೀನಗರ RTO ಅಧಿಕಾರಿ ಶ್ರೀನಿವಾಸ್ ಪ್ರಸಾದ್ ನೇತೃತ್ವದಲ್ಲಿ ಪರಿಶೀಲನೆ ನಡೆದಿದ್ದು, ಆಟೋಗಳ ಮೇಲೆ ರಾಜಕೀಯ ಪ್ರೇರಿತ ಭಾವಚಿತ್ರ ಅಥವಾ ಚಿಹ್ನೆ ಇದ್ದರೆ 5 ಸಾವಿರ ರೂಪಾಯಿ ದಂಡ ಹಾಕುವುದಾಗಿ ಎಚ್ಚರಿಕೆ ನೀಡಿದರು.

ಯಾವುದೇ ವ್ಯಕ್ತಿಯ ಜಮೀನು, ಕಟ್ಟಡವನ್ನು ಅನುಮತಿಯಿಲ್ಲದೆ ಧ್ವಜಗಳು, ಬ್ಯಾನರ್‌ಗಳು, ಸೂಚನೆಗಳು ಮತ್ತು ಘೋಷಣೆಗಳನ್ನು ಬರೆಯಲು ಬಳಸಲು ಯಾವುದೇ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳು ಮತ್ತು ಅವರ ಅನುಯಾಯಿಗಳಿಗೆ ಅನುಮತಿ ಇರುವುದಿಲ್ಲ. ಅಲ್ಲದೇ ಯಾವುದೇ ವಾಹನಗಳ ಮೇಲೆ ಪಕ್ಷದ ಚಿಹ್ನೆ, ಧ್ವಜ ಹಾಗೂ ಅಭ್ಯರ್ಥಿಗಳ ಭಾವಚಿತ್ರ, ಹೆಸರು ಹಾಕುವಂತಿಲ್ಲ. ಒಂದು ವೇಳೆ ಹಾಕುವುದಾದರೆ ಅಂತಹ ವಾಹನಗಳ ಸಂಖ್ಯೆ ನೀಡಿ ಆಯಾ ಕ್ಷೇತ್ರದ ಚುನಾವಣಾಧಿಕಾರಿಗಳಿಂದ ಪರವಾನಿಗೆ ಪಡೆದುಕೊಳ್ಳುವುದು ಕಡ್ಡಾಯವಾಗಿದೆ.

ಒಂದು ವೇಳೆ ಯಾವುದೇ ಪರವಾನಿಗೆ ಇಲ್ಲದೇ ವಾಹನಗಳ ಮೇಲೆ ಒಂದು ಪಕ್ಷದ ಚಿಹ್ನೆ, ಧ್ವಜ ಹಾಗೂ ಅಭ್ಯರ್ಥಿಗಳ ಫೋಟೋಗಳನ್ನು ಹಾಕಿಕೊಂಡಿದ್ದರೆ ಅದು ನೀತಿ ಸಂಹಿತಿ ಉಲ್ಲಂಘನೆ ಅಡಿಯಲ್ಲಿ ಅಪರಾಧವಾಗಿದ್ದು, ಆ ವಾಹನವನ್ನು ಪೊಲೀಸರು ಅಥವಾ ಚುನಾವಣಾಧಿಕಾರಿಗಳು ಸೀಜ್ ಮಾಡುವ ಅಧಿಕಾರ ಹೊಂದಿರುತ್ತಾರೆ. ಅಲ್ಲದೇ ದಂಡವೂ ಸಹ ವಿಧಿಸಬಹುದು.

ಕರ್ನಾಟಕ ಅಸೆಂಬ್ಲಿ ಚುನಾವಣೆ ಕುರಿತಾದ ತಾಜಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:44 pm, Tue, 4 April 23

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ