ಚುನಾವಣೆ ಅಖಾಡಕ್ಕಿಳಿದ PSI ಅಕ್ರಮ ಪ್ರಮುಖ ಆರೋಪಿ: ಪೊಲೀಸ್​ ಭದ್ರತೆಯಲ್ಲಿಯೇ ಆಗಮಿಸಿ ನಾಮಪತ್ರ ಸಲ್ಲಿಸಿದ ರುದ್ರಗೌಡ ಪಾಟೀಲ್

545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣದಲ್ಲಿ ಪ್ರಮುಖ ಆರೋಪಿ ಆಗಿರುವ ರುದ್ರಗೌಡ ಪಾಟೀಲ್​ ಚುನಾವಣೆ ಅಖಾಡಕ್ಕಿ ಇಳಿದಿದ್ದು, ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.

ಚುನಾವಣೆ ಅಖಾಡಕ್ಕಿಳಿದ PSI ಅಕ್ರಮ ಪ್ರಮುಖ ಆರೋಪಿ: ಪೊಲೀಸ್​ ಭದ್ರತೆಯಲ್ಲಿಯೇ ಆಗಮಿಸಿ ನಾಮಪತ್ರ ಸಲ್ಲಿಸಿದ ರುದ್ರಗೌಡ ಪಾಟೀಲ್
ನಾಮಪತ್ರ ಸಲ್ಲಿಸಿದ ರುದ್ರಗೌಡ ಪಾಟೀಲ್

Updated on: Apr 17, 2023 | 7:00 PM

ಕಲಬುರಗಿ: 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣದಲ್ಲಿ ಪ್ರಮುಖ ಆರೋಪಿ ಆಗಿರುವ ರುದ್ರಗೌಡ ಪಾಟೀಲ್ (Rudragowda Patil)​ ಚುನಾವಣೆ ಅಖಾಡಕ್ಕಿ ಇಳಿದಿದ್ದು, ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಜಿಲ್ಲೆಯ ಅಫಜಲಪುರ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಹಿನ್ನೆಲೆ ರುದ್ರಗೌಡ ಪಾಟೀಲ್​ ಜೈಲಿನಲ್ಲಿದ್ದು, ಇಂದು ನಾಮಪತ್ರ ಸಲ್ಲಿಸಲು ನ್ಯಾಯಾಲಯದ ಅನುಮತಿ ಪಡೆದಿದ್ದರು. ಪೊಲೀಸ್ ಭದ್ರತೆಯಲ್ಲಿಯೇ ಆಗಮಿಸಿ ಅಫಜಲಪುರ ತಹಶಿಲ್ದಾರ ಕಚೇರಿಯಲ್ಲಿ ಚುನಾವಣೆ ಅಧಿಕಾರಿಗೆ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಸಾವಿರಾರು ಜನರು ಹಾಜರಾಗಿದ್ದು, ಆರ್​ಡಿ ಪಾಟೀಲ್ ಇದ್ದ ಪೊಲೀಸ್ ವಾಹನಕ್ಕೆ ಬೆಂಬಲಿಗರು ಹೂಮಳೆ ಸುರಿಸಿದ್ದಾರೆ.

ಟಿಕೆಟ್​ ನೀಡುವಂತೆ ಕಾಂಗ್ರೆಸ್​ಗೆ ಮನವಿ

ರುದ್ರಗೌಡ ಪಾಟೀಲ್​ ವಿಧಾನಸಭಾ ಚುನಾವಣೆಯಲ್ಲಿ ಕಲಬುರಗಿ ಜಿಲ್ಲೆಯ ಅಫಜಲಪುರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಈ ಹಿಂದೆ ಇಂಗಿತ ವ್ಯಕ್ತಪಡಿಸಿದ್ದರು. ಅದರಂತೆಯೇ ಟಿಕೆಟ್​ ನೀಡುವಂತೆ ಕಾಂಗ್ರೆಸ್​ಗೆ ಮನವಿ ಕೂಡ ಮಾಡಿದ್ದರು. ಆದರೆ ರುದ್ರಗೌಡ ಪಾಟೀಲ್​ಗೆ ಕೆಆರ್​​ಪಿಪಿ ಪಕ್ಷದಿಂದ ಜಿಲ್ಲೆಯ ಅಫಜಲಪುರ ಕ್ಷೇತ್ರದ ಟಿಕೆಟ್​ ನೀಡಲು ಮುಂದಾಗಿದ್ದರು ಎಂಬ ಮಾತುಗಳು ಕೇಳಿಬಂದಿದ್ದವು.

ಇದನ್ನೂ ಓದಿ: PSI Recruitment Scam: ಕಿಂಗ್ ಪಿನ್ ರುದ್ರಗೌಡ್ ಪಾಟೀಲ್​​​ಗೆ ಮಣೆ ಹಾಕಿದ್ರಾ ಜನಾರ್ಧನ ರೆಡ್ಡಿ? ಕೆಆರ್​ಪಿಪಿಯಿಂದ ಟಿಕೆಟ್​ ಸಾಧ್ಯತೆ

ನೇಮಕಾತಿ ಅಕ್ರಮದಲ್ಲಿ ಜೈಲಿನಲ್ಲಿರುವ ರುದ್ರಗೌಡ ಪಾಟೀಲ್, ಜಾಮೀನು ಸಿಗದೆ ಇದ್ದರೇ ಜೈಲಿನಲ್ಲಿದ್ದುಕೊಂಡೆ ಸ್ಪರ್ಧೆ ಮಾಡಲು ಮುಂದಾಗಿದ್ದಾರೆ. ಏಪ್ರಿಲ್ 10 ರಂದು ರುದ್ರಗೌಡ ಪಾಟೀಲ್ ಸಹೋದರ ಮತ್ತು ಬೆಂಬಲಿಗರು ಕೆಆರ್​ಪಿಪಿ ಪಕ್ಷ ಸೇರಲಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರವಾಗಿ ಕೆಲ ತಿಂಗಳ ಹಿಂದೆ ರುದ್ರಗೌಡ ಪಾಟೀಲ್​ ಸಾಮಾಜಿಕ ಜಾಲತಾಣದ ಮೂಲಕ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದರು.

ಇದನ್ನೂ ಓದಿ: PSI Recruitment Scam: ಜೈಲಿನಿಂದ ಹೊರಬಂದ ಬೆನ್ನಲ್ಲೇ ಜಾಮೀನು ಷರತ್ತು ಉಲ್ಲಂಘನೆ: ಕಿಂಗ್​ಪಿನ್​ ರುದ್ರಗೌಡ ಪಾಟೀಲ್​ ಮನೆಗೆ ಸಿಐಡಿ ಭೇಟಿ

ಯಾರು ಈ ರುದ್ರಗೌಡ ಪಾಟೀಲ್​

ರುದ್ರಗೌಡ ಪಾಟೀಲ್​ ಗ್ರಾಮ ಪಂಚಾಯತ್ ಸದಸ್ಯ, ಅಧ್ಯಕ್ಷನಾಗಿ ಕೆಲಸ ಮಾಡಿದ್ದರು. ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲಿಕ್ಕೆ ಸಾಕಷ್ಟು ತಯಾರಿ ಮಾಡಿಕೊಂಡಿದ್ದರು. ಕ್ಷೇತ್ರದಲ್ಲಿ ಸಾಮೂಹಿಕ ವಿವಾಹ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಳ್ಳುವ ಮೂಲಕ ಆಗಾಗ ಸುದ್ದಿಯಲ್ಲಿದ್ದರು. ಅಲ್ಲದೆ ಕ್ಷೇತ್ರದ ತುಂಬೆಲ್ಲಾ ಓಡಾಡಿಕೊಂಡು ತಮ್ಮ ಸಮುದಾಯ ಸೇರಿದಂತೆ ಕ್ಷೇತ್ರದಲ್ಲಿ ಯುವ ಪಡೆ ಕಟ್ಟಿಕೊಂಡು ಚುನಾವಣೆಗೆ ಅಖಾಡ ಸಿದ್ದಮಾಡಿಕೊಂಡಿದ್ದರು. ಈ ಸಮಯದಲ್ಲಿಯೇ ಪಿಎಸ್ಐ ಕೇಸ್ ಉರುಳು ರುದ್ರಗೌಡ್ ಪಾಟೀಲ್​​ಗೆ ಸುತ್ತುಕೊಂಡಿತ್ತು. ಪಿಎಸ್​ಐ ನೇಮಕಾತಿ ಅಕ್ರಮದಲ್ಲಿ ಹೆಸರು ಕೇಳಿಬಂದಿದ್ದದರಿಂದ, ಸಿಐಡಿ ಅಧಿಕಾರಿಗಳು ರುದ್ರಗೌಡ್​ನನ್ನು ಬಂಧಿಸಿದ್ದರು.

ಕರ್ನಾಟಕ ವಿಧಾನಸಭಾ ಚುನಾವಣೆಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

Published On - 6:46 pm, Mon, 17 April 23

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us