AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಹೊಸಿಲಲ್ಲಿ ಮತ ಕ್ರೋಡೀಕರಣಕ್ಕೆ ಮತ್ತೊಂದು ಅಸ್ತ್ರ: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿಗೆ ಬಿಜೆಪಿ ಸರ್ಕಾರ ಚಿಂತನೆ

ವರದಿಯ ಪ್ರಕಾರ ಎಸ್​ಸಿ ಬಲಗೈ ಸಮುದಾಯಗಳಿಗೆ ಶೇ 5, ಎಸ್​ಸಿ ಎಡಗೈ ಸಮುದಾಯಗಳಿಗೆ ಶೇ 6ರ ಮೀಸಲಾತಿ ನಿಗದಿಪಡಿಸಲಾಗಿದೆ.

ಚುನಾವಣೆ ಹೊಸಿಲಲ್ಲಿ ಮತ ಕ್ರೋಡೀಕರಣಕ್ಕೆ ಮತ್ತೊಂದು ಅಸ್ತ್ರ: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿಗೆ ಬಿಜೆಪಿ ಸರ್ಕಾರ ಚಿಂತನೆ
ಪ್ರಾತಿನಿಧಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Nov 15, 2022 | 11:46 AM

Share

ಬೆಂಗಳೂರು: ಎಸ್​ಸಿ, ಎಸ್​ಟಿ ಮೀಸಲಾತಿ ಹೆಚ್ಚಳ ಬಳಿಕ ಮತ ಕ್ರೋಡೀಕರಣಕ್ಕಾಗಿ ಕರ್ನಾಟಕದ ಬಿಜೆಪಿ ಸರ್ಕಾರವು ಮತ್ತೊಂದು ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಈಗಾಗಲೇ ಎಸ್​ಸಿ ಒಳ ಮೀಸಲಾತಿ ವಿಚಾರವಾಗಿ ನ್ಯಾಯಮೂರ್ತಿ ಸದಾಶಿವ ಆಯೋಗವು ವರದಿ ಸಲ್ಲಿಸಿದ್ದು, ಆಯೋಗದ ವರದಿ ಜಾರಿಗೊಳಿಸಬೇಕೆಂಬ ಬೇಡಿಕೆ ಕೇಳಿಬಂದಿದೆ. ವರದಿಯ ಪ್ರಕಾರ ಎಸ್​ಸಿ ಬಲಗೈ ಸಮುದಾಯಗಳಿಗೆ ಶೇ 5, ಎಸ್​ಸಿ ಎಡಗೈ ಸಮುದಾಯಗಳಿಗೆ ಶೇ 6ರ ಮೀಸಲಾತಿ ನಿಗದಿಪಡಿಸಲಾಗಿದೆ. ಬೋವಿ ಮತ್ತು ಬಂಜಾರಾ ಸಮುದಾಯಗಳಿಗೆ ಶೇ 1 ಹಾಗೂ ಇತರರಿಗೆ ಶೇ 3ರ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ವರದಿಯು ಶಿಫಾರಸು ಮಾಡಿದೆ. ಹೆಚ್ಚುವರಿ ಮೀಸಲಾತಿಗೆ ಅನುಗುಣವಾಗಿ ಒಳಮೀಸಲಾತಿ ಪರಿಷ್ಕರಣೆ ಮಾಡಲು ಸರ್ಕಾರವು ಚಿಂತನೆ ನಡೆಸಿದೆ ಎಂಬ ಮಾತುಗಳು ಕೇಳಿಬಂದಿವೆ.

ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯು ಇನ್ನೂ ಮಂಡನೆಯಾಗಿಲ್ಲ. ಆದರೆ ಈ ವರದಿಯಲ್ಲಿ ಪ್ರಸ್ತಾಪಿಸಿರುವ ಎಸ್​ಸಿ ಒಳ ಮೀಸಲಾತಿಯ ಬಗ್ಗೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯಲ್ಲೂ ಉಲ್ಲೇಖ ಮಾಡಲಾಗಿದೆ. ಒಳ ಮೀಸಲಾತಿ ಅನುಷ್ಠಾನದ ಮೂಲಕ ಎಸ್​ಸಿ ಸಮುದಾಯದ ಮನಗೆಲ್ಲುವ ಬಗ್ಗೆಯೂ ರಾಜ್ಯ ಸರ್ಕಾರವು ಚುನಾವಣಾ ತಂತ್ರ ಹೆಣೆದಿದೆ. ಚುನಾವಣೆ ಸಮೀಪವಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮೀಸಲಾತಿ ಬಗ್ಗೆ ಆಗಾಗ ಚರ್ಚೆಯಾಗುವಂತೆ ನೋಡಿಕೊಳ್ಳುತ್ತಿದೆ. ಈ ಮೂಲಕ ಮತಗಳನ್ನು ತನ್ನ ಪರವಾಗಿ ಕ್ರೋಡೀಕರಿಸಿಕೊಳ್ಳಲು ಬಿಜೆಪಿಯು ಯತ್ನಿಸುತ್ತಿದೆ ಎಂದು ವಿಶ್ಲೇಷಿಲಾಗುತ್ತಿದೆ.

ಬಿಜೆಪಿ ಹಿಂದೇಟು ಹಾಕದು: ನಾರಾಯಣಸ್ವಾಮಿ

ಒಳ ಮೀಸಲಾತಿ ಜಾರಿ ವಿಷಯದಲ್ಲಿ ಬಿಜೆಪಿಯು ಎಂದಿಗೂ ಹಿಂದೇಟು ಹಾಕುವುದಿಲ್ಲ ಎಂದು ಇತ್ತೀಚೆಗಷ್ಟೇ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಮೈಸೂರಿನಲ್ಲಿ ಹೇಳಿದ್ದರು. ‘ಬಿಜೆಪಿಯಲ್ಲಿ ಈ ಬಗ್ಗೆ ಯಾವುದೇ ಗೊಂದಲವಿಲ್ಲ. ಬಹುಶಃ ಕಾಂಗ್ರೆಸ್​ನ ಸಿದ್ದರಾಮಯ್ಯ ಹೊರತುಪಡಿಸಿದರೆ ಉಳಿದವರೆಲ್ಲರೂ ಒಳಮೀಸಲಾತಿ ಪರವಾಗಿಯೇ ಇದ್ದಾರೆ’ ಎಂದು ಅವರು ಅಭಿಪ್ರಾಯಪಟ್ಟಿದ್ದರು.

‘ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯಲ್ಲಿ ಉಲ್ಲೇಖಿಸಿರುವ ಶಿಫಾರಸುಗಳ ಜಾರಿಗೆ ಸಚಿವ ಸಂಪುಟವು ತೀರ್ಮಾನ ತೆಗೆದುಕೊಂಡಿದೆ. ನ್ಯಾಯಮೂರ್ತಿ ನಾಗಮೋಹನ್​ದಾಸ್ ವರದಿಯ ಶಿಫಾರಸನ್ನೂ ಶೀಘ್ರ ಜಾರಿಗೊಳಿಸಲಾಗುವುದು. ಈ ಮೂಲಕ ಎಲ್ಲ ಸಮುದಾಯಗಳಿಗೂ ಮುಕ್ತ ಅವಕಾಶ ಸಿಗಲಿದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: 4 ರಾಜ್ಯಗಳ ರಾಜ್ಯಪಾಲರ ಕಾನೂನು ಸಲಹೆಗಾರರಾಗಿದ್ದ ವಿಕಾಸ್ ಬನ್ಸೋಡೆ ಸಿಟಿ ರವಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

Published On - 11:46 am, Tue, 15 November 22

ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?