S Angara: ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆದ ಎಸ್. ಅಂಗಾರ, ಭಾಗೀರಥಿ ಮುರುಳ್ಯ ಪರ ಪ್ರಚಾರ ಮಾಡುವೆ

ಮಾಜಿ ಶಾಸಕ ಎಸ್. ಅಂಗಾರ, ರಾಜಕೀಯ ನಿವೃತ್ತಿ ಹೇಳಿಕೆಯನ್ನು ಹಿಂಪಡೆದಿದ್ದಾರೆ. ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಹೇಳಿಕೆ ನೋವಿನಿಂದ ಹೇಳಿದ್ದೇನೆ. ನಾನು ಮೊದಲಿನಂತೆ ಸಕ್ರಿಯವಾಗಿದ್ದು, ಭಾಗೀರಥಿ ಮುರುಳ್ಯ ಅವರ ಗೆಲುವೊಂದೇ ನಮ್ಮ ಮುಂದಿನ ನಡೆ ಎಂದಿದ್ದಾರೆ.

S Angara: ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆದ ಎಸ್. ಅಂಗಾರ, ಭಾಗೀರಥಿ ಮುರುಳ್ಯ ಪರ ಪ್ರಚಾರ ಮಾಡುವೆ
ಎಸ್ ಅಂಗಾರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Apr 14, 2023 | 3:30 PM

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದ ಮಾಜಿ ಶಾಸಕ ಎಸ್. ಅಂಗಾರ (S Angara) ರಾಜಕೀಯ ನಿವೃತ್ತಿ ಹೇಳಿಕೆಯನ್ನು ಹಿಂಪಡೆದಿದ್ದಾರೆ, ಭಾರೀ ಚರ್ಚೆಗೆ ಗ್ರಾಸವಾಗಿದ್ದ ಈ ಹೇಳಿಕೆ ಮತ್ತು ಈ ಕುರಿತು ವೀಡಿಯೋ ಕೂಡ ವೈರಲ್ ಆಗಿತ್ತು. ಇದೀಗ ಮಾಜಿ ಸಚಿವ ಎಸ್​. ಅಂಗಾರ ರಾಜಕೀಯ ನಿವೃತ್ತಿ ಹೇಳಿಕೆಯನ್ನು ಹಿಂಪಡೆದಿದ್ದಾರೆ ಎಂದು ಹೇಳಲಾಗಿದೆ. ಎಸ್. ಅಂಗಾರ ಬಿಜೆಪಿ ಕಾರ್ಯಕರ್ತರ ಆಕ್ರೋಶದ ಬೆನ್ನಲ್ಲೇ ಈ ನಿರ್ಧಾರವನ್ನು ಹಿಂಪಡೆದಿದ್ದಾರೆ. ತಮಗೆ ಬಿಜೆಪಿ ಟಿಕೆಟ್​​ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು. ಈ ವಿಚಾರವಾಗಿ ಒಂದು ವೀಡಿಯೊ ಕೂಡ ವೈರಲ್ ಆಗಿತ್ತು. ಪ್ರಾಮಾಣಿಕತೆಗೆ ಬೆಲೆ ಇಲ್ಲ, ನಾನು ಏಕೆ ಬಿಜೆಪಿಗೆ ಕೆಲಸ ಮಾಡಬೇಕು ಎಂದು ರಾಜಕೀಯ ನಿವೃತ್ತಿ ಪಡೆಯುತ್ತಿದ್ದೇನೆ ಎಂದು ಎಸ್​, ಅಂಗಾರ ಹೇಳಿದ್ದರು.

ಈಗ ಪ್ರಸ್ತುತ ಬಿಜೆಪಿ ಅಭ್ಯರ್ಥಿಯಾಗಿ ಭಾಗೀರಥಿ ಮುರುಳ್ಯ ಆಯ್ಕೆಯಾಗಿದ್ದು, ಇವರ ಪರವಾಗಿ ಪ್ರಚಾರ ನಡೆಸಲ್ಲ ಎಂದು ಹೇಳಿದ್ದರು. ಆದರೆ ಇದೀಗ ಮಾಜಿ ಶಾಸಕರ ಜತೆಗೆ ಪಕ್ಷದ ಹಿರಿಯ ನಾಯಕರು ಮಾತುಕತೆ ನಡೆಸಿ ತಮ್ಮ ನಿರ್ಧಾರವನ್ನು ಬದಲಿಸುವಂತೆ ಮನವೊಲಿಸಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಬಿಜೆಪಿಯ ಮತ್ತೋರ್ವ ನಾಯಕ ನಿವೃತ್ತಿ ಘೋಷಣೆ: ಸಕ್ರಿಯ ರಾಜಕಾರಣಕ್ಕೆ ಸಚಿವ ಎಸ್​ ಅಂಗಾರ ಗುಡ್​ ಬೈ

ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಹೇಳಿಕೆ ನೋವಿನಿಂದ ಹೇಳಿದ್ದೇನೆ. ನಾನು ಮೊದಲಿನಂತೆ ಸಕ್ರಿಯವಾಗಿದ್ದು, ಭಾಗೀರಥಿ ಮುರುಳ್ಯ ಅವರ ಗೆಲುವೊಂದೇ ನಮ್ಮ ಮುಂದಿನ ನಡೆ. ವೈಯಕ್ತಿಕವಾಗಿ ನೀಡಿದ ಆ ಹೇಳಿಕೆ ಹಿಂದಕ್ಕೆ ಪಡೆಯುತ್ತಿದ್ದೇನೆ. ಆಯ್ಕೆ ಮಾಡಿದ ಅಭ್ಯರ್ಥಿ ಬಗ್ಗೆ ಬೇಸರ ಇಲ್ಲ, ಅವರ ಪರ ಕೆಲಸ ಮಾಡೋದು ನನ್ನ ಹೊಣೆಗಾರಿಕೆ. ನನ್ನ ಕಾರ್ಯಕರ್ತರು ಜೊತೆ ನಿಂತಿದ್ದಕ್ಕೆ ಧನ್ಯವಾದಗಳು. ನನಗೆ ಯಾವುದೇ ಅಸಮಾಧಾನ ಮತ್ತು ಭಿನ್ನಾಭಿಪ್ರಾಯ ಇಲ್ಲ. ಪಕ್ಷದ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತೇನೆ. ನಾನು ಬೇಸರದಲ್ಲಿ, ಉದ್ವೇಗದಲ್ಲಿ ಹೇಳಿದ ಮಾತನ್ನು ವಾಪಸ್ಸು ಪಡೆಯುತ್ತೇನೆ. ಮುಂದೆ ಪಕ್ಷದ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಿ ಗೆಲ್ಲಿಸುವುದು ನನ್ನ ಗುರಿ ಎಂದು ಎಸ್​​ ಅಂಗಾರ ಹೇಳಿದ್ದಾರೆ.

Published On - 2:46 pm, Fri, 14 April 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ