Geetha Shivaraj Kumar: ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ‘ದೊಡ್ಮನೆ ಸೊಸೆ’ ಗೀತಾ ಶಿವರಾಜ್ ಕುಮಾರ್

‘ದೊಡ್ಮನೆ ಸೊಸೆ’ ಗೀತಾ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್​ ಸೇರಿದರು. ಈ ಮೂಲಕ ಕಾಂಗ್ರೆಸ್​ನೊಂದಿಗೆ ರಾಜಕೀಯ ಎರಡನೇ ಇನ್ನಿಂಗ್ಸ್ ಆರಂಭಿಸಿದರು.

Geetha Shivaraj Kumar: ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ‘ದೊಡ್ಮನೆ ಸೊಸೆ’ ಗೀತಾ ಶಿವರಾಜ್ ಕುಮಾರ್
ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆ
Follow us
ರಮೇಶ್ ಬಿ. ಜವಳಗೇರಾ
|

Updated on:Apr 28, 2023 | 1:08 PM

ಬೆಂಗಳೂರು:  ರಾಜಕಾರಣದ ಕುಟುಂಬದಿಂದಲೇ ಬಂದಿರುವ ನಟ ಶಿವರಾಜ್ ಕುಮಾರ್ (Shivaraj Kumar) ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ (Geetha Shivaraj Kumar) ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು. ಇಂದು(ಏಪ್ರಿಲ್​ 28) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ (DK Shivakumar) ಸೇರಿದಂತೆ ಹಲವು ನಾಯಕರ ಸಮ್ಮುಖದಲ್ಲಿ ಗೀತಾ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಸೇರಿದರು.  ಡಿಕೆ ಶಿವಕುಮಾರ್ ಅವರು ಗೀತಾ ಶಿವರಾಜ್ ಕುಮಾರ್ ಅವರಿಗೆ ಕಾಂಗ್ರೆಸ್​ ಚಿಹ್ನೆಯ ಶಾಲು ಹಾಕಿ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಇದರೊಂದಿಗೆ ದೊಡ್ಮನೆ ಸೊಸೆ ಗೀತಾ ಅವರು ರಾಜಕೀಯದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿದರು. ಈಗಾಗಲೇ ನಟ ಶಿವರಾಜ್​ ಕುಮಾರ್ ಸಹ ಗೀತಾ ಜೊತೆ ಪ್ರಚಾರಕ್ಕೆ ಹೋಗುವುದಾಗಿ ಹೇಳಿದ್ದಾರೆ. ಇದರಿಂದ ಕಾಂಗ್ರೆಸ್​​ಗೆ ತಾರಾಬಲ ಬಂದಂತಾಗಿದೆ.

ಇದನ್ನೂ ಓದಿ: ಪತ್ನಿ ಗೀತಾ ಕಾಂಗ್ರೆಸ್​ ಸೇರ್ಪಡೆಗೆ ಬೆಂಬಲಿಸಿದ ಶಿವರಾಜ್ ಕುಮಾರ್, ತಾವೂ ಪ್ರಚಾರಕ್ಕಿಳಿಯುವುದಾಗಿ ಘೋಷಿಸಿದ ಶಿವಣ್ಣ

ಸುಮಾರು ಗಾಳ ಹಾಕಿ ಹಾಕಿ ಸುಸ್ತಾಗಿದ್ದೆ. ಕೊನೆಗೆ ನಮ್ಮ ಗಾಳಕ್ಕೆ ಮಧು ಬಂಗಾರಪ್ಪ ಬಿದ್ದರು. ಇದೀಗ ಗೀತಾ ಶಿವರಾಜ್ ಕುಮಾರ್ ದೊಡ್ಡ ಬಲೆ ಬಿದ್ದಿದ್ದಾರೆ. ರಾಹುಲ್ ಗಾಂಧಿಯವರ ಕಾರ್ಯಕ್ರಮದ ಬಲೆಗೆ ಗೀತಾ ಶಿವರಾಜ್ ಕುಮಾರ್ ಬಿದ್ದಿದ್ದಾರೆ. ಆದ್ರೆ ಗೀತಾ ಶಿವರಾಜ್ ಕುಮಾರ್ ಒಳ್ಳೆ ಘಳಿಗೆ ಒಳ್ಳೆ ಮುಹೂರ್ತ ನೋಡಿದ್ದೇನೆ. ಈಗ ಬಂದು ಸೇರಿದ್ದಾರೆ. ನನ್ನ ನಾಯಕ ಬಂಗಾರಪ್ಪ ಪುತ್ರಿ ಇವರು, ರಾಜ್ ಕುಮಾರ್ ಸೊಸೆ. ಇಡೀ ಕಾಂಗ್ರೆಸ್ ಪಕ್ಷದ ಪರವಾಗಿ ಗೀತಾ ಶಿವರಾಜ್ ಕುಮಾರ್​ಗೆ ಸ್ವಾಗತ ಎಂದರು..

ಗೀತಾ ಶಿವರಾಜ್ ಕುಮಾರ್ ಅವರ ಕಿರಿಯ ಸಹೋದರ ಮಧು ಬಂಗಾರಪ್ಪ (Madhu Bangarappa) ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದಾರೆ. ಸ್ವತಃ ಸಹೋದರ ಕುಮಾರ್ ಬಂಗಾರಪ್ಪ (Kumar Bangarappa) ಅವರ ವಿರುದ್ಧವೇ ಸೊರಬ (Soraba) ಕ್ಷೇತ್ರದಲ್ಲಿ ಅಖಾಡಕ್ಕೆ ಇಳಿದಿದ್ದಾರೆ. ಕಿರಿಯ ಸಹೋದರನನ್ನು (ಮಧು ಬಂಗಾರಪ್ಪ) ಬೆಂಬಲಿಸುವುದಕ್ಕಾಗಿ ಗೀತಾ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಮಧು ಬಂಗಾರಪ್ಪ ಹಾಗೂ ಸಂಬಂಧಿಯಾಗಿರುವ ಭೀಮಣ್ಣ ನಾಯ್ಕ ಅವರ ಪರವಾಗಿ ಪ್ರಚಾರ ಮಾಡಲಿದ್ದಾರೆ

ಇನ್ನು ತಮ್ಮ ಪತ್ನಿ ಗೀತಾ ಅವರು ಕಾಂಗ್ರೆಸ್​ ಸೇರ್ಪಡೆಯನ್ನು ನಟ ಶಿವರಾಜ್ ಕುಮಾರ್​ ಅವರು ಸ್ವಾಗತಿಸಿದ್ದಾರೆ. ಅಲ್ಲದೇ ಪರ ಜೊತೆಗೆ ಪ್ರಚಾರಕ್ಕೆ ಹೋಗುವುದಾಗಿಯೂ ಹೇಳಿದ್ದಾರೆ.

ಕಾಂಗ್ರೆಸ್​ಗೆ ತಾರಾಬಲ

ಹೌದು…ಗೀತಾ ಅವರು ಕಾಂಗ್ರೆಸ್​ ಸೇರ್ಪಡೆಗೆ ನಟ ಶಿವರಾಜ್ ಕುಮಾರ್ ಸಹ ಬೆಂಬಲಿಸಿದ್ದಾರೆ. ಅಲ್ಲದೇ ಅವರೊಂದಿಗೆ ಪ್ರಚಾರಕ್ಕೆ ಹೋಗುವುದಾಗಿ ಹೇಳಿದ್ದಾರೆ. ಸೊರಬದಲ್ಲಿ ಮಧು ಬಂಗಾರಪ್ಪ ಹಾಗೂ ಶಿರಸಿಯಲ್ಲಿ ಭೀಮಣ್ಣ ನಾಯ್ಕ ಪರ ಮಾತ್ರ ಪ್ರಚಾರ ಮಾಡಲಿದ್ದಾರೆ. ಆದರೂ ಸಹ ಅಕ್ಕ-ಪಕ್ಕದ ಕ್ಷೇತ್ರಗಳಲ್ಲಿ ಶಿವರಾಜ್​ ಕುಮಾರ್ ಅವರ ಪ್ರಚಾರದ ಪ್ರಭಾವ ಬೀರಲಿದೆ. ಸಾಕಷ್ಟು ಫ್ಯಾನ್ಸ್​ ಬೇಸ್​ ಹೊಂದಿರುವ ಶಿವಣ್ಣ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರುತ್ತಿರುವುದರಿಂದ ಕಾಂಗ್ರೆಸ್​ ತಾರಾಬಲ ಬಂದಂತಾಗಿದೆ.

2014ರ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಜೆಡಿಎಸ್​ ಪಕ್ಷದಿಂದ ಗೀತಾ ಶಿವರಾಜ್​ಕುಮಾರ್ ಸ್ಪರ್ಧೆ ಮಾಡಿದ್ದರು. ಆ ಬಳಿಕ ಅವರು ಜೆಡಿಎಸ್ ಪಕ್ಷದಿಂದ ಹೊರಬಂದು ತಟಸ್ಥವಾಗಿ ಉಳಿದಿದ್ದರು. ಅಂದು ಕೂಡ ಮಧು ಬಂಗಾರಪ್ಪ ಅವರು ಜೆಡಿಎಸ್​ ಪಕ್ಷದಲ್ಲಿದ್ದರೂ ಸಹಜವಾಗಿಯೇ ಗೀತಾ ಅವರು ಜೆಡಿಎಸ್​ನಿಂದ ಸ್ಪರ್ಧೆ ಮಾಡಿದ್ದರು. ಆ ಬಳಿಕ ನಡೆದ ಬೆಳವಣಿಗೆಗಳಲ್ಲಿ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಅವರನ್ನು ಹಿಂಬಾಲಿಸಿಕೊಂಡು ಇದೀಗ ಗೀತಾ ಅವರು ಕಾಂಗ್ರೆಸ್ ಸೇರ್ಪಡೆಯಾದರು.

Published On - 1:00 pm, Fri, 28 April 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ