AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sagara Election 2023 Winner: ಸಾಗರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣಗೆ ಭರ್ಜರಿ ಗೆಲುವು

Belur Gopalakrishna: ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣಗೆ ಭರ್ಜರಿ ಗೆಲುವು ದೊರೆತಿದೆ.

Sagara Election 2023 Winner: ಸಾಗರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣಗೆ ಭರ್ಜರಿ ಗೆಲುವು
ಬೇಳೂರು ಗೋಪಾಲಕೃಷ್ಣ
ನಯನಾ ರಾಜೀವ್
|

Updated on: May 13, 2023 | 3:16 PM

Share

ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣಗೆ ಭರ್ಜರಿ ಗೆಲುವು ದೊರೆತಿದೆ. ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹೀನಾಯ ಸೋಲು ಅನುಭವಿಸಿದ್ದಾರೆ. ಕ್ಷೇತ್ರ ಮರುವಿಂಗಡಣೆಗೂ ಮೊದಲು ಹೊಸನಗರ ಬಳಿಕ ಸೊರಬದಿಂದ ಹಾಲಪ್ಪ ಗೆಲುವು ಸಾಧಿಸಿದ್ದರು. ಬೇಳೂರು ಗೋಪಾಲಕೃಷ್ಣ 2004 ಹಾಗೂ 2008ರಲ್ಲಿ ಸಾಗರದಿಂದಲೇ ಶಾಸಕರಾಗಿ ಆಯ್ಕೆಯಾಗಿದ್ದರು.

ಬಗರ್​ಹುಕುಂ ಹೋರಾಟದ ಕಿಚ್ಚನ್ನು ಹೊಂದಿರುವ ಸಾಗರ ವಿಧಾನಸಭಾ ಕ್ಷೇತ್ರವು, ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ಮೇಲಾಟಕ್ಕೆ ದಶಕಗಳ ಇತಿಹಾಸ ಹೊಂದಿದೆ.

ಸಾಗರದ ಬೇಳೂರಿನಲ್ಲಿ ಜನಿಸಿರುವ ಗೋಪಾಲಕೃಷ್ಣ ಅವರ ತಂದೆ ಹೆಸರು ಕೆರಿಯಪ್ಪ. 1981-1982ರಲ್ಲಿ ಪಿಯುಸಿ ಮಾಡಿದ ಬೇಳೂರು ಅಷ್ಟಕ್ಕೆ ವಿದ್ಯಾಭ್ಯಾಸ ಮುಗಿಸಿ ನಂತರ ರಾಜಕೀಯ ಪ್ರವೇಶಿಸಿದರು.

ಈ ಕ್ಷೇತ್ರವನ್ನು ಐದು ಬಾರಿ ಪ್ರತಿನಿಧಿಸಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಈ ಬಾರಿ ಕಣದಿಂದ ಹೊರಗುಳಿದಿದ್ದಾರೆ.

ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More