Sagara Election Result: ಸಾಗರ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್ :ಸಾಗರದಲ್ಲಿ ಹಳೇ ವೈರಿಗಳಾದ ಹಾಲಪ್ಪ, ಗೋಪಾಲಕೃಷ್ಣ ಮಧ್ಯೆ ಪೈಪೋಟಿ
Sagara Assembly Election Results 2023 Live Counting Updates: ಬಗರ್ಹುಕುಂ ಹೋರಾಟದ ಕಿಚ್ಚನ್ನು ಹೊಂದಿರುವ ಸಾಗರ ವಿಧಾನಸಭಾ ಕ್ಷೇತ್ರವು, ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ಮೇಲಾಟಕ್ಕೆ ದಶಕಗಳ ಇತಿಹಾಸ ಹೊಂದಿದೆ.
Sagara Assembly Election Results 2023: ಬಗರ್ಹುಕುಂ ಹೋರಾಟದ ಕಿಚ್ಚನ್ನು ಹೊಂದಿರುವ ಸಾಗರ ವಿಧಾನಸಭಾ ಕ್ಷೇತ್ರವು, ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ಮೇಲಾಟಕ್ಕೆ ದಶಕಗಳ ಇತಿಹಾಸ ಹೊಂದಿದೆ. ಈ ಕ್ಷೇತ್ರವನ್ನು ಐದು ಬಾರಿ ಪ್ರತಿನಿಧಿಸಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಈ ಬಾರಿ ಕಣದಿಂದ ಹೊರಗುಳಿದಿದ್ದಾರೆ. ಹಾಲಿ ಶಾಸಕ ಹರತಾಳ ಹಾಲಪ್ಪ ಅವರನ್ನು ಮಾಜಿ ಶಾಸಕ ಹಾಗೂ ಕಾಗೋಡು ತಿಮ್ಮಪ್ಪ ಅವರ ಅಳಿಯ ಬೇಳೂರು ಗೋಪಾಲಕೃಷ್ಣ ಎದುರಿಸುತ್ತಿದ್ದಾರೆ.
ವಿಚಿತ್ರವೆಂದರೆ ಈ ಮೊದಲು ಹಾಲಪ್ಪ ಕಾಂಗ್ರೆಸ್ನಲ್ಲೂ ಗೋಪಾಲಕೃಷ್ಣ ಬಿಜೆಪಿಯಲ್ಲೂ ಇದ್ದರು. ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಗೋಡು ತಿಮ್ಮಪ್ಪ ಅವರ ಮಗಳು ಡಾ. ರಾಜನಂದಿನಿ ಬಿಜೆಪಿ ಸೇರಿದ್ದಾರೆ.
2018ರಲ್ಲಿ ಹರತಾಳ ಹಾಲಪ್ಪ ಸುಮಾರು 8 ಸಾವಿರ ಮತಗಳಿಂದ ಗೆಲುವು ಸಾಧಿಸಿದ್ದರು. ಹರತಾಳ ಹಾಲಪ್ಪಗೆ ಸಾಗರದಿಂದ ಇದು ಎರಡನೇ ಚುನಾವಣೆಯಾಗಿದೆ. ಈ ಹಿಂದೆ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಕೆ. ದಿವಾಕರ್ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿದ್ದರೆ, ಝಾಕೀರ್ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ.
ಕ್ಷೇತ್ರ ಮರುವಿಂಗಡಣೆಗೂ ಮೊದಲು ಹೊಸನಗರ ಬಳಿಕ ಸೊರಬದಿಂದ ಹಾಲಪ್ಪ ಗೆಲುವು ಸಾಧಿಸಿದ್ದರು. ಬೇಳೂರು ಗೋಪಾಲಕೃಷ್ಣ 2004 ಹಾಗೂ 2008ರಲ್ಲಿ ಸಾಗರದಿಂದಲೇ ಶಾಸಕರಾಗಿ ಆಯ್ಕೆಯಾಗಿದ್ದರು.
ವಿಧಾನಸಭೆ ಚುನಾವಣೆ ಲೈವ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವಿಧಾನಸಭೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:14 am, Sat, 13 May 23