ರಾಹುಲ್ ಗಾಂಧಿ ಫಿಟ್‌ನೆಸ್‌ಗೆ ನಟ ಶಿವಣ್ಣ ಫಿದಾ, ಮತ್ತೊಮ್ಮೆ ಕಾಂಗ್ರೆಸ್ ನಾಯಕನ ಬಗ್ಗೆ ಮನಬಿಚ್ಚಿ ಮಾತನಾಡಿದ ಹ್ಯಾಟ್ರಿಕ್ ಹೀರೋ
ಸ್ಯಾಂಡಲ್ವುಡ್ ಸ್ಟಾರ್ ಶಿವರಾಜ್ ಕುಮಾರ್ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದು, ಇದೀಗ ಅವರು ಮತ್ತೊಮ್ಮೆ ರಾಹುಲ್ ಗಾಂಧಿ ಅವರನ್ನು ಹಾಡಿ ಹೊಗಳಿದ್ದಾರೆ.
ಶಿವಮೊಗ್ಗ: ಈ ಬಾರಿ ಸ್ಯಾಂಡಲ್ ವುಡ್ ಅನೇಕ ಕಲಾವಿದರು ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಸುದೀಪ್ ಹತ್ತಾರು ಕ್ಷೇತ್ರಗಳಿಗೆ ಹೋಗಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ್ದಾರೆ. ಇನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Dr Shivaraj Kumar)ಅವರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕಿಳಿದಿದ್ದಾರೆ. ಮೊನ್ನೇ ಅಷ್ಟೇ ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ ಜೊತೆ ವೇದಿಕೆ ಹಂಚಿಕೊಂಡಿದ್ದ ಶಿವಣ್ಣ, ನಾನು ರಾಹುಲ್ ಗಾಂಧಿ ಅವರ ಅಭಿಮಾನಿ, ಅವರನ್ನು ನೋಡಬೇಕು ಎಂಬ ಆಸೆ, ಪ್ರೀತಿಯಿಂದ ಇಲ್ಲಿಗೆ ಬಂದಿದ್ದೇನೆ. ರಾಹುಲ್ ಗಾಂಧಿ ಒಳ್ಳೆಯ ಉದ್ದೇಶಕ್ಕಾಗಿ ಭಾರತ್ ಜೋಡೋ ಯಾತ್ರೆ ಮಾಡಿದ್ದು, ನನಗೆ ಅತ್ಯಂತ ಸ್ಫೂರ್ತಿದಾಯಕವಾಗಿತ್ತು. ಎಂದು ಹೇಳಿದ್ದರು. ಇದು ಕಾಂಗ್ರೆಸ್ಗೆ ಹೊಸ ಉರುಪು ತಂದಿತ್ತು. ಇದರ ಬೆನ್ನಲ್ಲೇ ಇದೀಗ ಶಿವರಾಜ್ ಕುಮಾರ್, ರಾಹುಲ್ ಗಾಂಧಿ ಫಿಟ್‌ನೆಸ್‌ಗೆ ಫಿದಾ ಆಗಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಣ್ಣ, ರಾಹುಲ್ ಗಾಂಧಿ (Rahul Gandhi) ಅವರನ್ನ ಮೀಟ್ ಮಾಡಬೇಕು ಎಂದು ಮೊದಲಿನಿಂದಲೂ ನನಗೆ ಆಸೆ ಇತ್ತು. ಮೊನ್ನೆಯಷ್ಟೇ ಅವರನ್ನ ಮೀಟ್ ಮಾಡಿದೆ, ರಾಹುಲ್ ಗಾಂಧಿ ಅವರ ಫಿಟ್‌ನೆಸ್ ಇಷ್ಟ ಆಯ್ತು. ನಮ್ಮ ಕುಟುಂಬ ಫಿಟ್ನೆಸ್ ಬಗ್ಗೆ ಆಸಕ್ತಿ. ಅದಂತೆ ರಾಹುಲ್ ಗಾಂಧಿ ಅವರು ಭಾರತ್ ಜೋಡೋದಲ್ಲಿ ಅವರ ವಾಕಿಂಗ ಮಾಡೋ ಸ್ಟೈಲ್ ನನಗೆ ಇಂಪ್ರೆಸ್ ಆಯ್ತು ಅಂತೆಲ್ಲ ಹೇಳಿದರು.
ಮೊನ್ನೇ ಮಂಗಳವಾರ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದ ಬಾಳೇಬೈಲಿನಲ್ಲಿ ನಡೆದಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಶಿವರಾಜ್ ಕುಮಾರ್ ಅವರು ಭಾಗವಹಿಸಿದ್ದರು. ಅಲ್ಲದೇ ರಾಹುಲ್ ಗಾಂಧಿ ಅವರನ್ನು ಹಾಡಿಹೊಗಳಿದ್ದರು. ರಾಹುಲ್ ಶಿವರಾಜ್ ಕುಮಾರ್ ಅವರೊಂದಿಗೆ ಸ್ವಲ್ಪ ಹೊತ್ತು ಮಾತಾಡಿ ಭಾಷಣ ಮಾಡಿದ್ದು, ರಾಹುಲ್ ಗಾಂಧಿ ಅಭಿಮಾನಿಯಾಗಿ ನಾನು ಇಂದು ಇಲ್ಲಿಗೆ ಬಂದಿದ್ದೇನೆ. ಇತ್ತೀಚೆಗೆ ಅವರು ಕೈಗೊಂಡಿದ್ದ ಭಾರತ್ ಜೋಡೋ ಯಾತ್ರೆ ನನ್ನನ್ನು ಬಹಳ ಹಿಡಿಸಿತ್ತು. ನಾನು ಕೂಡ ವರ್ಕೌಟ್, ಫಿಟ್ನೆಸ್ ಗೆ ಪ್ರಾಮುಖ್ಯತೆ ನೀಡುತ್ತೇನೆ. ಭಾರತ್ ಜೋಡೋ ಯಾತ್ರೆಯಲ್ಲಿ ಸಾವಿರಾರು ಮೈಲುಗಳನ್ನು ರಾಹುಲ್ ಗಾಂಧಿ ನಡೆದು ಕ್ರಮಿಸಿದ್ದಾರೆ. ಅವರ ಯಾತ್ರೆ ನನಗೆ ಬಹಳ ಪ್ರೇರೇಪಿಸಿತು ಎಂದಿದ್ದರು. ಇದು ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ಗೆ ಹೊಸ ಉರುಪು ತಂದಿದ್ದು, ಈ ಬಗ್ಗೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೇ ಕೆಲ ಬಿಜೆಪಿ ಕಾರ್ಯಕರ್ತರು ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು.
ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ