KJ George: ಸರ್ವಜ್ಞನಗರ ಕ್ಷೇತ್ರದಿಂದ 6ನೇ ಬಾರಿ ಆಯ್ಕೆ, ಸಿದ್ದರಾಮಯ್ಯ ಸಂಪುಟದಲ್ಲಿ ಮತ್ತೊಮ್ಮೆ ಸ್ಥಾನ ಪಡೆದ ಕೆಜೆ ಜಾರ್ಜ್
ಕರ್ನಾಟಕದ ಪ್ರಭಾವಿ ರಾಜಕಾರಣಿಗಳಲ್ಲಿ ಕೆ.ಜೆ ಜಾರ್ಜ ಕೂಡ ಒಬ್ಬರು. ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಹೆಗ್ಗುರುತು ಹೊಂದಿದವರು. ಮಾಜಿ ಗೃಹ ಸಚಿವರಾದ ಕೆಜೆ ಜಾರ್ಜ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಿಂದ 6ನೇ ಬಾರಿ ಆಯ್ಕೆಯಾಗಿದ್ದು, ಸಿದ್ದರಾಮಯ್ಯ ಸಂಪುಟದಲ್ಲಿ ಮೊತ್ತಮ್ಮೆ ಸ್ಥಾನ ಪಡೆದಿದ್ದಾರೆ.
ಕರ್ನಾಟಕದ ಪ್ರಭಾವಿ ರಾಜಕಾರಣಿಗಳಲ್ಲಿ ಕೆಜೆ ಜಾರ್ಜ್ (KJ George) ಕೂಡ ಒಬ್ಬರು. ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಹೆಗ್ಗುರುತು ಹೊಂದಿದವರು. ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ತಮ್ಮದೇ ಹಿಡಿತ ಹೊಂದಿದ್ದಾರೆ. ಮಾಜಿ ಗೃಹ ಸಚಿವರಾದ ಕೆಜೆ ಜಾರ್ಜ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಿಂದ 6ನೇ ಬಾರಿ ಆಯ್ಕೆಯಾಗಿದ್ದಾರೆ. ಇವರ ಬಗ್ಗೆ ತಿಳಿಯುವುದು ಮಹತ್ವವಾದದು. ಈ ಹಿನ್ನೆಲೆಯಲ್ಲಿ ಅವರ ವ್ಯಕ್ತಿ ಚಿತ್ರಣ ಇಲ್ಲಿದೆ.
ಕೆಜೆ ಜಾರ್ಜ್ ಅವರು ಪೂರ್ಣ ಹೆಸರು ಕೆಲಚಂದ್ರ ಜೋಸೆಫ್ ಜಾರ್ಜ್. ಕೆಜೆ ಜಾರ್ಜ್ ಅವರು 24 ಆಗಸ್ಟ್ 1949 ರಂದು ಈಗಿನ ಕೇರಳದ ಕೊಟ್ಟಾಯಂನ ಚಿಂಗವನಂನಲ್ಲಿ ಕೆಲಚಂದ್ರ ಚಾಕೋ ಜೋಸೆಫ್ ಮತ್ತು ಮರಿಯಮ್ಮ ಜೋಸೆಫ್ ದಂಪತಿಗೆ ಜನಿಸಿದರು. ಅವರ ಕುಟುಂಬವು 1960 ರ ದಶಕದಲ್ಲಿ ಕರ್ನಾಟಕದ ಕೊಡಗು ಜಿಲ್ಲೆಗೆ ಸ್ಥಳಾಂತರಗೊಂಡಿತು. ಬಳಿಕ ಬೆಂಗಳೂರಿಗೆ ಬಂದರು. ಬೆಂಗಳೂರಿಗೆ ಸ್ಥಳಾಂತರಗೊಳ್ಳುವ ಮೊದಲು ಅವರು ತಮ್ಮ ಬಾಲ್ಯದ ಹೆಚ್ಚಿನ ಸಮಯವನ್ನು ಅಲ್ಲಿಯೇ ಕಳೆದರು. ಜೋಸೆಫ್ ಮತ್ತು ಅವರ ಮಕ್ಕಳು 1980ರಲ್ಲಿ ಕೆಲಚಂದ್ರ ಸಮೂಹವನ್ನು ಸ್ಥಾಪಿಸಿದರು. ಜಾರ್ಜ್ ಅವರು ಸುಜಾ ಅವರನ್ನು ವಿವಾಹವಾಗಿದ್ದಾರೆ. ಅವರಿಗೆ ರಾಣಾ ಮತ್ತು ರೆನಿತ್ ಎಂಬ ಇಬ್ಬರು ಮಕ್ಕಳಿದ್ದಾರೆ.
ಕೆ.ಜೆ.ಜಾರ್ಜ್ ಅವರು 1968ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸೇರಿದರು. 1969ರಲ್ಲಿ ಗೋಣಿಕೊಪ್ಪಲು ಟೌನ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಅವರ ರಾಜಕೀಯ ಜೀವನ ಆರಂಭವಾಯಿತು. 1971-1972ರ ಅವಧಿಯಲ್ಲಿ ವಿರಾಜಪೇಟೆ ತಾಲೂಕು ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದರು. 1972 ರಿಂದ 1973 ರವರೆಗೆ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜನರಲ್ ಮತ್ತು 1973 ರಿಂದ 1975 ರವರೆಗೆ ಈ ವೇದಿಕೆಯ ಅಧ್ಯಕ್ಷರಾಗಿದ್ದರು.
1975 ರಲ್ಲಿ ಮತ್ತು 1978 ರ ಹೊತ್ತಿಗೆ ಅವರು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಖಜಾಂಚಿಯಾದರು. 1982 ರಲ್ಲಿ, ಅವರು ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ 1985 ರವರೆಗೆ ಸೇವೆ ಸಲ್ಲಿಸಿದರು. ನಂತರ ಅವರು ಕೆ. ಎಚ್. ರಂಗನಾಥ್, ಎನ್. ಧರಂ ಸಿಂಗ್, ಎಸ್‌ಎಂ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
1985 ರಲ್ಲಿ, ಅವರು ಹಿಂದಿನ ಭಾರತೀನಗರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗುವ ಮೂಲಕ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದರು. 1985 ರಿಂದ 1989 ರವರೆಗೆ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿಯೂ ಆಗಿದ್ದರು. 1980 ರ ದಶಕದ ಕೊನೆಯಲ್ಲಿ ಮತ್ತು 1990 ರ ದಶಕದ ಆರಂಭದಲ್ಲಿ, ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರ ಅಡಿಯಲ್ಲಿ ರಾಜ್ಯ (ಸ್ವತಂತ್ರ ಉಸ್ತುವಾರಿ) ಸಾರಿಗೆ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿದ್ದರು.
ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಅಡಿಯಲ್ಲಿ ವಸತಿ ಮತ್ತು ನಗರಾಭಿವೃದ್ಧಿ ಕ್ಯಾಬಿನೆಟ್ ಸಚಿವರಾಗಿದ್ದರು. ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಗೃಹ ಸಚಿವರು ಮತ್ತು ಬೆಂಗಳೂರು ಅಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾಗಿದ್ದರು. ಅಲ್ಲದೆ ಹೆಚ್ ಡಿ ಕುಮಾರಸ್ವಾಮಿ ಅವರ ಸಂಪುಟದಲ್ಲಿ ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ಪ್ರಸ್ತುತ, ಅವರು ರಾಜ್ಯ ಚುನಾವಣಾ ಆಯೋಗದ ಸದಸ್ಯ, ಪ್ರಧಾನ ಕಾರ್ಯದರ್ಶಿ ಕೆಪಿಸಿಸಿ, ಎಐಸಿಸಿ ಸದಸ್ಯ ಮತ್ತು ಕಾರ್ಯಕಾರಿ ಸಮಿತಿ ಸದಸ್ಯ ಅಖಿಲ ಭಾರತ ಐ.ಎನ್.ಟಿ.ಯು.ಸಿ ಸದಸ್ಯರಾಗಿದ್ದಾರೆ. ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಿಂದ 6ನೇ ಬಾರಿ ಗೆದ್ದ ಇವರು ಸಿದ್ದರಾಮಯ್ಯ ಸಂಪುಟದಲ್ಲಿ ಮೊತ್ತಮ್ಮೆ ಸ್ಥಾನ ಪಡೆದಿದ್ದಾರೆ.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ