AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರದಲ್ಲಿ ಗೊಂದಲ, ವಿಚಾರಣೆಗೆ ಹಾಜರಾಗುವಂತೆ ಚುನಾವಣಾಧಿಕಾರಿಗಳ ನೋಟಿಸ್

ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಅವರ ನಾಮಪತ್ರದಲ್ಲಿ ಗೊಂದಲವಿದ್ದು, ಇಂದು (ಏ.22) ಬೆಳಗ್ಗೆ 10ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಚುನಾವಣಾಧಿಕಾರಿ ಡಾ.ರಾಜೀವ್ ಕೂಲೇರ್ ಅವರು ನೋಟಿಸ್ ನೀಡಿದ್ದಾರೆ.​

ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರದಲ್ಲಿ ಗೊಂದಲ, ವಿಚಾರಣೆಗೆ ಹಾಜರಾಗುವಂತೆ ಚುನಾವಣಾಧಿಕಾರಿಗಳ ನೋಟಿಸ್
ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ
ವಿವೇಕ ಬಿರಾದಾರ
|

Updated on:Apr 22, 2023 | 10:08 AM

Share

ಬೆಳಗಾವಿ: ಸವದತ್ತಿ ಯಲ್ಲಮ್ಮ ಮತಕ್ಷೇತ್ರದ (Savdatti Yellamma Constituency) ಬಿಜೆಪಿ (BJP) ಅಭ್ಯರ್ಥಿ ರತ್ನಾ ಮಾಮನಿ (Ratna Mamani) ಅವರ ನಾಮಪತ್ರದಲ್ಲಿ ಗೊಂದಲವಿದ್ದು, ಇಂದು (ಏ.22) ಬೆಳಗ್ಗೆ 10ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಚುನಾವಣಾಧಿಕಾರಿ ಡಾ.ರಾಜೀವ್ ಕೂಲೇರ್ ಅವರು ನೋಟಿಸ್ ನೀಡಿದ್ದಾರೆ. ರತ್ನಾ ಮಾಮನಿ ಅವರು ಅಫಿಡೆವಿಟ್ ಸಲ್ಲಿಕೆ ವೇಳೆ ಪ್ರಜಾಪ್ರತಿನಿಧಿ ಕಾಯ್ದೆ ಉಲ್ಲಂಘಸಿದ್ದಾರೆಂದು ಸವದತ್ತಿ ಕಾಂಗ್ರೆಸ್ ಅಭ್ಯರ್ಥಿ ವಿಶ್ವಾಸ ವೈದ್ಯ, ಆಮ್​ ಆದ್ಮಿ ಪಕ್ಷದ ಅಭ್ಯರ್ಥಿ ಬಾಪುಗೌಡ ಪಾಟೀಲ್ ನಿನ್ನೆ (ಏ.21) ನಾಮಪತ್ರ ಪರಿಶೀಲನೆ ವೇಳೆ ಆಕ್ಷೇಪಣೆ ವ್ಯಕ್ತಪಡಿಸಿದ್ದರು.

ರತ್ನಾ ಮಾಮನಿ ಅವರು ಏ.18 ಹಾಗೂ ಏ.19ರಂದು ಎರಡು ಬಾರಿ ನಾಮಪತ್ರ ಸಲ್ಲಿಸಿದ್ದರು. ಎರಡೂ ಬಾರಿಯೂ ಪ್ರಜಾಪ್ರತಿನಿಧಿ ಕಾಯ್ದೆ 2019ರ ತಿದ್ದುಪಡಿ ಪ್ರಕಾರ ಪರಿಷ್ಕೃತ ಫಾರ್ಮ್ ಸಂಖ್ಯೆ 26 (ಅಫಿಡೆವಿಟ್) ಸಲ್ಲಿಸದೆ, 2018ರ ಮಾದರಿಯ ಫಾರ್ಮ್ ಸಂಖ್ಯೆ 26 (ಅಫಿಡೆವಿಟ್) ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್​ ಮತ್ತು ಆಮ್​ ಆದ್ಮಿ ಪಕ್ಷದ​ ಅಭ್ಯರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ರತ್ನಾ ಮಾಮನಿ ಅವರ ನಾಮಪತ್ರವನ್ನು ತಿರಸ್ಕರಿಸುವಂತೆ ವಿಪಕ್ಷಗಳು ಆಗ್ರಹಿಸುತ್ತಿವೆ.

ಇದನ್ನೂ ಓದಿ: Karnataka Polls: ಲಿಂಗಾಯತ ವಿರೋಧ ಎದುರಿಸಲು ಬಿಜೆಪಿಗೆ ಯಡಿಯೂರಪ್ಪ ಗುರಾಣಿ; ಬೆಳಗಾವಿ ಬಂಡಾಯ ತಣಿಸಿದ ಸಂತೋಷ್ ತಂತ್ರ

ಅಲ್ಲದೇ ಚುನಾವಣಾಧಿಕಾರಿಗಳ ನೋಟಿಸ್ ಬಳಿಕವೂ ರತ್ನಾ ಮಾಮನಿ ಅವರು ಎರಡೂ ಬಾರಿ ಹಳೆಯ ಮಾದರಿ ಫಾರ್ಮ್ ಸಂಖ್ಯೆ 26 ಸಲ್ಲಿಕೆ ಮಾಡಿದ್ದಾರೆಂದು ಆರೋಪವಿದೆ. ನೋಟಿಸ್ ನೀಡಿದ ನಂತರ, ನಾಮಪತ್ರ ಪರಿಶೀಲನೆ ಅವಧಿ ಮುಕ್ತಾಯವಾದ ಬಳಿಕ ಅಫಿಡೆವಿಟ್ ಸಲ್ಲಿಕೆ ಮಾಡಿದ್ದಾರೆ. ಇದೂ ಸಹ ಕಾನೂನು ಬಾಹಿರ ಎಂದು ಕಾಂಗ್ರೆಸ್, ಆಮ್​ ಆದ್ಮಿ ಪಕ್ಷಗಳು ಆರೋಪ ಮಾಡಿವೆ.

ಈ ಹಿನ್ನೆಲೆ ಇಂದು (ಏ.22) ಬೆಳಿಗ್ಗೆ 10ಕ್ಕೆ ಆಕ್ಷೇಪಣೆಗಳ ವಿಚಾರಣೆಗೆ ಲಿಖಿತ ಹೇಳಿಕೆಯೊಂದಿಗೆ ಹಾಜರಾಗುವಂತೆ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಅವರಿಗೆ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಚುನಾವಣಾಧಿಕಾರಿ ಡಾ.ರಾಜೀವ್ ಕೂಲೇರ್ ನೋಟಿಸ್ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:44 am, Sat, 22 April 23