Sedam Election Result 2023: ಸೇಡಂ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಡಾ. ಶರಣಪ್ರಕಾಶ್‌ ಪಾಟೀಲ್​ಗೆ ಗೆಲುವು

Sedam Assembly Election Result 2023 Live Counting Updates: ಸೇಡಂ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ರಾಜಕುಮಾರ ಪಾಟೀಲ್ಕಾಂ ಅವರನ್ನು ಕಾಂಗ್ರೆಸ್​ನ ಡಾ. ಶರಣಪ್ರಕಾಶ್‌ ಪಾಟೀಲ್‌ ಮಣಿಸಿದ್ದಾರೆ.

Sedam Election Result 2023: ಸೇಡಂ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಡಾ. ಶರಣಪ್ರಕಾಶ್‌ ಪಾಟೀಲ್​ಗೆ ಗೆಲುವು
ರಾಜಕುಮಾರ ಪಾಟೀಲ್

Updated on: May 13, 2023 | 10:30 PM

Sedam Assembly Election Result 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ  ಪ್ರಕಟಗೊಂಡಿದೆ. ಸೇಡಂ ವಿಧಾನಸಭಾ ಕ್ಷೇತ್ರದಲ್ಲಿ (Sedam Assembly Constituency) ಬಿಜೆಪಿಯಿಂದ ರಾಜಕುಮಾರ ಪಾಟೀಲ್, ಕಾಂಗ್ರೆಸ್​ನಿಂದ ಡಾ.ಶರಣಪ್ರಕಾಶ್‌ ಪಾಟೀಲ್‌ ಹಾಗೂ ಜೆಡಿಎಸ್​​ನಿಂದ ಬಾಲರಾಜ್ ಗುತ್ತೇದಾರ್ ಸ್ಪರ್ಧಿಸಿದ್ದರು. ಈ ಪೈಕಿ ಮತದಾರ ಡಾ.ಶರಣಪ್ರಕಾಶ್‌ ಪಾಟೀಲ್‌ ಕೈಹಿಡಿದಿದ್ದಾನೆ. ಈ ಕ್ಷೇತ್ರದಲ್ಲಿ ಎಎಪಿ ಕೂಡ ಅದೃಷ್ಟಪರೀಕ್ಷೆಗೆ ಇಳಿದಿದ್ದು, ಶಂಕರ ಬಂಡಿ ಅವರನ್ನು ಕಣಕ್ಕಿಳಿಸಿತ್ತು. ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ನೇರ ಹಣಾಹಣಿ ಇರುವ ವಿಧಾನಸಭೆ ಕ್ಷೇತ್ರ ಇದಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದರೆ ಅದಕ್ಕಿಂತ ಹಿಂದಿನ ಎರಡು ಚುನಾವಣೆಗಳಲ್ಲಿ ಕಾಂಗ್ರೆಸ್​ ಜಯಗಳಿಸಿತ್ತು.

ವಿಶೇಷವೆಂದರೆ ಈ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸತತ ಎರಡು ಅವಧಿಗೆ ಗೆದ್ದ ಇತಿಹಾಸವಿಲ್ಲ. ಹೀಗಾಗಿ ಈ ಬಾರಿ ಗೆದ್ದು ಇತಿಹಾಸ ಸೃಷ್ಟಿಸುವತ್ತ ಬಿಜೆಪಿ ಚಿತ್ತ ನೆಟ್ಟಿದೆ. ಅದಕ್ಕಾಗಿಯೇ ಹಾಲಿ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಅವರಿಗೆ ಟಿಕೆಟ್ ನೀಡದೆ ಹೊಸ ಮುಖ ರಾಜಕುಮಾರ ಪಾಟೀಲ್ ಅವರನ್ನು ಕಣಕ್ಕಿಳಿಸಿತ್ತು.

2018ರ ವಿಧಾನಸಭೆ ಚುನಾವಣೆಯಲ್ಲಿ ಸೇಡಂನಲ್ಲಿ ರಾಜಕುಮಾರ ಪಾಟೀಲ ತೆಲ್ಕೂರ 7,200 ಮತಗಳ ಅಂತರದಿಂದ ಜಯ ಗಳಿಸಿದ್ದರು. ಕಾಂಗ್ರೆಸ್​​ನ ಡಾ. ಶರಣಪ್ರಕಾಶ್ ಪಾಟೀಲ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಈ ಬಾರಿ ಮತ್ತೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ನೋಟಾ ಹೊರತುಪಡಿಸಿ ಕಳೆದ ಬಾರಿ ನಾಲ್ವರು ಕಣದಲ್ಲಿದ್ದರು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 12:07 am, Sat, 13 May 23

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us